AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hampi Utsav: ಹಂಪಿ ಉತ್ಸವಕ್ಕೆ ದಿನಾಂಕ ನಿಗದಿ, ಸಿದ್ಧತೆ ಮಾಡಿಕೊಳ್ಳಲು ಡಿಸಿಗೆ ಜಮೀರ್ ಸೂಚನೆ

ಬರಗಾಲ ನಿಮಿತ್ಯ ಹಂಪಿ ಉತ್ಸವ ದಿನಾಂಕವನ್ನು ಸರ್ಕಾರ ಮುಂದೂಡಿತ್ತು. ಸದ್ಯ ಈಗ ಅಂತಿಮವಾಗಿ ಫೆಬ್ರವರಿ ತಿಂಗಳಲ್ಲಿ ಹಂಪಿ ಉತ್ಸವ ನಡೆಸಲು ನಿರ್ಧರಿಸಲಾಗಿದೆ. ಮೂರು ದಿಗಳ ಉತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಸಮ್ಮತಿ ನೀಡಿದ್ದಾರೆ. ಈ ಉತ್ಸವ ಫೆಬ್ರವರಿ 02, 03 ಮತ್ತು 04ರವರೆಗೆ 3 ದಿನಗಳ ಕಾಲ ನಡೆಯಲಿದೆ.

Hampi Utsav: ಹಂಪಿ ಉತ್ಸವಕ್ಕೆ ದಿನಾಂಕ ನಿಗದಿ, ಸಿದ್ಧತೆ ಮಾಡಿಕೊಳ್ಳಲು ಡಿಸಿಗೆ ಜಮೀರ್ ಸೂಚನೆ
ಹಂಪಿ ಉತ್ಸವ
TV9 Web
| Updated By: ಆಯೇಷಾ ಬಾನು|

Updated on: Dec 26, 2023 | 12:11 PM

Share

ವಿಜಯನಗರ, ಡಿ.26: ವಿಜಯನಗರದ ಭವ್ಯತೆಯನ್ನು ಪರಿಚಯಿಸುವ ನಿಟ್ಟಿನಲ್ಲಿ ಮಹತ್ವ ಪಡೆದಿರುವ ಹಂಪಿ ಉತ್ಸವಕ್ಕೆ ರಾಜ್ಯ ಸರ್ಕಾರ (Karnataka Government) ದಿನಾಂಕ ನಿಗದಿ ಮಾಡಿದೆ. ಹಂಪಿಯಲ್ಲಿ (Hampi) ಫೆಬ್ರವರಿ 2ರಿಂದ ಹಂಪಿ ಉತ್ಸವ (Hampi Utsav) ಆರಂಭವಾಗಲಿದೆ. ಈ ಉತ್ಸವ ಫೆಬ್ರವರಿ 02, 03 ಮತ್ತು 04ರವರೆಗೆ 3 ದಿನಗಳ ಕಾಲ ನಡೆಯಲಿದೆ. ಹಾಗೆಯೇ ಉತ್ಸವದಲ್ಲಿ ಹಲವು ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.

ಬರಗಾಲ ನಿಮಿತ್ಯ ಹಂಪಿ ಉತ್ಸವ ದಿನಾಂಕವನ್ನು ಸರ್ಕಾರ ಮುಂದೂಡಿತ್ತು. ಸದ್ಯ ಈಗ ಅಂತಿಮವಾಗಿ ಫೆಬ್ರವರಿ ತಿಂಗಳಲ್ಲಿ ಹಂಪಿ ಉತ್ಸವ ನಡೆಸಲು ನಿರ್ಧರಿಸಲಾಗಿದೆ. ಮೂರು ದಿಗಳ ಉತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಸಮ್ಮತಿ ನೀಡಿದ್ದಾರೆ. ಅಗತ್ಯ ಸಿದ್ದತೆ ಮಾಡಿಕೊಳ್ಳಲು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಅವರು ವಿಜಯನಗರ ಡಿಸಿಗೆ ಸೂಚನೆ ನೀಡಿದ್ದಾರೆ.

ಹಂಪಿ ಉತ್ಸವದಲ್ಲಿ ಇಡೀ ದಕ್ಷಿಣ ಭಾರತಕ್ಕೆ ರಾಜಧಾನಿಯಾಗಿದ್ದ ವಿಜಯನಗರದ ನೆಲದ ಗತವೈಭವ ಮರುಕಳಿಸಲಿದೆ. ಈ ಉತ್ಸವಕ್ಕೆ ಲಕ್ಷಾಂತರ ಜನರು ಬರ್ತಾರೆ. ವಿಜಯನಗರದ ವಾಸ್ತುಶಿಲ್ಪ, ಸಾಹಿತ್ಯ, ಸಂಸ್ಕೃತಿ, ಕಲೆಯನ್ನು ಇಡೀ ವಿಶ್ವಕ್ಕೆ ಪರಿಚಯಿಸುವ ನಿಟ್ಟಿನಲ್ಲಿ ಅನೇಕ ವಿಧದ ಕಾರ್ಯಗಳ ಮೂಲಕ ಜನರಿಗೆ ಹಂಪಿಯ ಸಿರಿವಂತಿಕೆಗೆ ಪರಿಚಯ ಮಾಡಿಸಲಾಗುತ್ತೆ. ಹಾಗೆಯೇ ಹಂಪಿಯ ಸ್ಮಾರಕಗಳ ಗುಚ್ಛವನ್ನು ಈಗಾಗಲೇ 1986ರಲ್ಲಿ ಯುನೆಸ್ಕೊ ವಿಶ್ವಪರಂಪರೆ ಪಟ್ಟಿಯಲ್ಲಿ ಸೇರ್ಪಡೆ ಮಾಡಿದೆ. ಹಾಗಾಗಿ ಈ ಉತ್ಸವವು ಜನೋತ್ಸವದೊಂದಿಗೆ ವಿಜಯನಗರದ ಕಲಾ ಪ್ರಪಂಚವನ್ನೂ ಉಣಬಡಿಸಲಿದೆ.

ಇದನ್ನೂ ಓದಿ: ಹಂಪಿ ವಿರೂಪಾಕ್ಷೇಶ್ವರ ದೇಗುಲ ಕಂಬಕ್ಕೆ ಮೊಳೆ ಹೊಡೆದ ಪ್ರಕರಣ; ದೇವಸ್ಥಾನದ ಗುಮಾಸ್ತ ಅಮಾನತ್ತು

16 ನೇ ಶತಮಾನದಲ್ಲಿ ವಿಜಯನಗರ ಸಾಮ್ರಾಜ್ಯದ ರಾಜ ಕೃಷ್ಣದೇವರಾಯರ ಆದೇಶದ ಮೇರೆಗೆ ಕಲ್ಲಿನ ರಥವನ್ನು ನಿರ್ಮಿಸಲಾಯಿತು. ಕಾಳಿಂಗದೊಂದಿಗಿನ ಯುದ್ಧದ ಸಮಯದಲ್ಲಿ ಚಕ್ರವರ್ತಿಯು ಕೋನಾರ್ಕ್‌ನ ಸೂರ್ಯ ದೇವಾಲಯದಿಂದ ಪ್ರಭಾವಿತನಾಗಿ ಹಂಪಿಯಲ್ಲಿ ಇದೇ ರೀತಿಯ ದೇವಾಲಯವನ್ನು ಮರುಸೃಷ್ಟಿಸಲು ಬಯಸಿದ್ದನೆಂದು ಇತಿಹಾಸದಲ್ಲಿ ಉಲ್ಲೇಖವಿದೆ.

ಬೆಂಗಳೂರಿನಿಂದ ಹಂಪಿಯು ಸುಮಾರು 342 ಕಿಲೋ ಮೀಟರ್‌ ದೂರದಲ್ಲಿದೆ. ರಸ್ತೆ, ರೈಲು ಅಥವಾ ವಿಮಾನದ ಮೂಲಕವೂ ಇಲ್ಲಿಗೆ ತಲುಪಬಹುದಾಗಿದೆ. ಹಂಪಿಗೆ ಬೆಂಗಳೂರು ಮತ್ತು ಹೈದರಾಬಾದ್‌ನಿಂದ ಪ್ರತಿದಿನ ವಿಮಾನಗಳಿವೆ. ಹಂಪಿಯಲ್ಲಿ ಟ್ಯಾಕ್ಸಿ, ಬೈಕ್‌ ಅಥವಾ ಬೈಸಿಕಲ್ ಬಾಡಿಗೆಗೆ ಪಡೆದು ವಿಜಯ ವಿಠ್ಠಲ ದೇವಸ್ಥಾನವನ್ನು ತಲುಪಬಹುದಾಗಿದೆ. ಅಲ್ಲದೇ ಎಲೆಕ್ಟ್ರಿಕ್ ಬಂಡಿಗಳನ್ನು ಕೂಡ ಪ್ರವಾಸ ಮಾಡಬಹುದಾಗಿದೆ. ಹೊಸಪೇಟೆ ಹತ್ತಿರದ ರೈಲು ನಿಲ್ದಾಣದಿಂದ ಹಂಪಿಗೆ 15 ಕಿ.ಮೀ. ಆಗುತ್ತದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ