AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Earthquake: ವಿಜಯನಗರದ ಹೊಸಪೇಟೆಯಲ್ಲಿ ಭೂಕಂಪ

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಡಣಾಪುರ ಗ್ರಾಪಂ ವ್ಯಾಪ್ತಿಯ ಅಯ್ಯನಹಳ್ಳಿಯಲ್ಲಿ ಇಂದು ಭೂಕಂಪನವಾಗಿದೆ.

Earthquake: ವಿಜಯನಗರದ ಹೊಸಪೇಟೆಯಲ್ಲಿ ಭೂಕಂಪ
ಭೂಕಂಪ
ಅಕ್ಷಯ್​ ಪಲ್ಲಮಜಲು​​
|

Updated on:Mar 28, 2023 | 6:44 PM

Share

ಹೊಸಪೇಟೆ: ವಿಜಯನಗರ ಜಿಲ್ಲೆಯಲ್ಲಿ ಇಂದು (ಮಾ.28) ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾಪನದ ಮೂಲಕ ಭೂಕಂಪನ ದಾಖಲಾಗಿದ್ದು, ಹೊಸಪೇಟೆ ತಾಲೂಕಿನ ಡಣಾಪುರ ಗ್ರಾಪಂ ವ್ಯಾಪ್ತಿಯ ಅಯ್ಯನಹಳ್ಳಿಯಲ್ಲಿ ಭೂಕಂಪನವಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. 15- ರಿಂದ 20 ಕಿಮೀ, ರೇಡಿಯಲ್ ವ್ಯಾಪ್ತಿಯಲ್ಲಿ ಭೂಕಂಪನ ದಾಖಲಾಗಿದೆ.

ಭೂಕಂಪನ ಅನುಭವದ ತೀವ್ರತೆ ಕಡಿಮೆಯಾಗಿದ್ದು, ಸ್ಥಳೀಯರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗಿಲ್ಲ ಎಂದು ಜಿಲ್ಲಾಡಳಿತ ತಿಳಿಸಿದೆ. ಭೂಮಿ ಸಣ್ಣ ಪ್ರಮಾಣದಲ್ಲಿ ಕಂಪಿಸಿದಂತೆ ಅನುಭವ ಆಗಿದೆ ಎಂದು ಹೇಳಿದ್ದಾರೆ. ಜನರು ಯಾವುದೇ ಆತಂಕಕ್ಕೆ ಒಳಗಾಗದಂತೆ ವಿಜಯನಗರ ಜಿಲ್ಲಾಡಳಿತ ಮನವಿ ಮಾಡಿದೆ.

Published On - 6:35 pm, Tue, 28 March 23