AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್ ಅಧಿಕಾರಿಗಳಿಗೂ ಹ್ಯಾಕರ್ಸ್ ಕಾಟ: ವಿಜಯನಗರ ಎಸ್ಪಿ ಹೆಸರಲ್ಲಿ ನಕಲಿ ಖಾತೆ , ಹಣಕ್ಕೆ ಬೇಡಿಕೆ!

SP ವಿಜಯನಗರ ಎಂಬ ಹೆಸರಿನಲ್ಲಿ ನಕಲಿ ಖಾತೆ ತೆರೆದು ಎಸ್ಪಿ ಹರಿಬಾಬು ಅವರ ಫೋಟೋವನ್ನು ಡಿಪಿಗೆ ಬಳಸಿಕೊಳ್ಳಲಾಗಿದೆ. ಖಾತೆಯಿಂದ ಸಂದೇಶ ಕಳಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ.

ಪೊಲೀಸ್ ಅಧಿಕಾರಿಗಳಿಗೂ ಹ್ಯಾಕರ್ಸ್ ಕಾಟ: ವಿಜಯನಗರ ಎಸ್ಪಿ ಹೆಸರಲ್ಲಿ ನಕಲಿ ಖಾತೆ , ಹಣಕ್ಕೆ ಬೇಡಿಕೆ!
ವಿಜಯನಗರ ಎಸ್​ಪಿ ಹರಿಬಾಬು
ಆಯೇಷಾ ಬಾನು
|

Updated on: May 22, 2023 | 3:19 PM

Share

ವಿಜಯನಗರ: ಫೇಸ್​​ಬುಕ್ ಅಕೌಂಟ್​​ ಹ್ಯಾಕ್(Facebook Hacked) ಮಾಡಿ ಅದರ ಮೂಲಕ ಹಣಕ್ಕೆ ಬೇಡಿಕೆ ಇಡುವ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದೆ. ಈ ಬಗ್ಗೆ ಎಷ್ಟೇ ಎಚ್ಚರ ವಹಿಸಲು ಪೊಲೀಸರು ಎಚ್ಚರಿಕೆ ನೀಡಿದರೂ ಪ್ರಕರಣಗಳ ಸಂಖ್ಯೆ ಮಾತ್ರ ಕಡಿಮೆಯಾಗುತ್ತಿಲ್ಲ. ಸೈಬರ್ ಖದೀಮರು(Cyber Crime) ತಮ್ಮ ಬುದ್ದಿ ಬಳಸಿ ಮೋಸ ಮಾಡುತ್ತಲೇ ಇದ್ದಾರೆ. ಅದೇ ರೀತಿ ವಿಜಯನಗರ ಎಸ್​ಪಿ(Vijayanagara SP) ಹರಿಬಾಬು ಹೆಸರಿನಲ್ಲಿ ನಕಲಿ ಫೇಸ್​​ಬುಕ್ ಅಕೌಂಟ್​​ ತೆರೆದು ಹಣಕ್ಕೆ ಬೇಡಿಕೆ ಇಡಲಾಗಿದೆ.

SP ವಿಜಯನಗರ ಎಂಬ ಹೆಸರಿನಲ್ಲಿ ನಕಲಿ ಖಾತೆ ತೆರೆದು ಎಸ್ಪಿ ಹರಿಬಾಬು ಅವರ ಫೋಟೋವನ್ನು ಡಿಪಿಗೆ ಬಳಸಿಕೊಳ್ಳಲಾಗಿದೆ. ಖಾತೆಯಿಂದ ಸಂದೇಶ ಕಳಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಸಂದೇಶ ಪಡೆದ ವ್ಯಕ್ತಿಯೊಬ್ಬರು ಈ ಬಗ್ಗೆ ಮಾಹಿತಿ ನೀಡಿದ್ದು ಇದರಿಂದ ಎಚ್ಚೆತ್ತ ಎಸ್ಪಿ ಹರಿಬಾಬು ಅವರು ಇದು ನಕಲಿ ಖಾತೆಯಾಗಿದ್ದು, ಯಾರೂ ಕೂಡ ಹಣ ಹಾಕಬೇಡಿ ಎಂದು ಮನವಿ ಮಾಡಿದ್ದಾರೆ. ನಕಲಿ ಖಾತೆ ಸ್ಥಗಿತಗೊಳಿಸಿ, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಸಿಎಂ ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ, ಮಾಧ್ಯಮ ಸಲಹೆಗಾರರ ನೇಮಕ: ಯಾರ್ಯಾರು? ಇಲ್ಲಿದೆ ವಿವರ

ಸೈಬರ್ ಖದೀಮರು ನಕಲಿ ಖಾತೆಯಿಂದ ಮೆಸೆಂಜರ್ ಮೂಲಕ ಹಣಕ್ಕೆ ಬೇಡಿಕೆ ಇಡುತ್ತಿದ್ದರು. ಸದ್ಯ ಈ ಪ್ರಕರಣ ಸಂಬಂಧ ಓರ್ವನನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ಬಳಿಕ ಮತ್ತಷ್ಟು ಸತ್ಯ ಹೊರ ಬರಬೇಕಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ