ಫೆಬ್ರವರಿ 2,3,4 ಹಂಪಿ ಉತ್ಸವ: ಲೋಗೋ ಬಿಡುಗಡೆ ಮಾಡಿದ ಸಿದ್ದರಾಮಯ್ಯ, ಇಲ್ಲಿದೆ ವಿಶೇಷತೆ

ವಿಜಯನಗರ ಸಾಮ್ರಾಜ್ಯದ ಗತವೈಭವ ಮರುಕಳಿಸುವ ರೀತಿಯಲ್ಲಿ "ಹಂಪಿ ಉತ್ಸವ"ವನ್ನು ಅದ್ಧೂರಿಯಾಗಿ ಆಚರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಅಗತ್ಯ ಸಿದ್ದತೆ ಮಾಡಿಕೊಳ್ಳುತ್ತಿದೆ. ಇಂದು (ಜ.14) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಂಪಿ ಉತ್ಸವದ ಲಾಂಛನ (ಲೋಗೊ) ಬಿಡುಗಡೆ ಮಾಡಿದರು.

ಫೆಬ್ರವರಿ 2,3,4 ಹಂಪಿ ಉತ್ಸವ: ಲೋಗೋ ಬಿಡುಗಡೆ ಮಾಡಿದ ಸಿದ್ದರಾಮಯ್ಯ, ಇಲ್ಲಿದೆ ವಿಶೇಷತೆ
ಹಂಪಿ ಉತ್ಸವ ಲೋಗೋ ಬಿಡುಗಡೆ
Follow us
ವಿನಾಯಕ ಬಡಿಗೇರ್​, ಉತ್ತರ ಕನ್ನಡ
| Updated By: ವಿವೇಕ ಬಿರಾದಾರ

Updated on:Jan 14, 2024 | 11:36 AM

ವಿಜಯನಗರ, ಜನವರಿ 14: ವಿಜಯನಗರ (Vijayanagar) ಸಾಮ್ರಾಜ್ಯದ ಗತವೈಭವ ಮರುಕಳಿಸುವ ರೀತಿಯಲ್ಲಿ “ಹಂಪಿ ಉತ್ಸವ“ವನ್ನು (Hampi Ustav) ಅದ್ಧೂರಿಯಾಗಿ ಆಚರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಅಗತ್ಯ ಸಿದ್ದತೆ ಮಾಡಿಕೊಳ್ಳುತ್ತಿದೆ. ಇಂದು (ಜ.14) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಂಪಿ ಉತ್ಸವದ ಲಾಂಛನ (ಲೋಗೊ) ಬಿಡುಗಡೆ ಮಾಡಿದರು. ಫೆಬ್ರವರಿ 2ರಿಂದ ಮೂರು ದಿನಗಳ ಕಾಲ ಉತ್ಸವ ನಡೆಯಲಿದೆ. ಫೆಬ್ರವರಿ 2, 3, 4 ನೇ ತಾರೀಖಿಂದು ಹಂಪಿ‌ ಉತ್ಸವ ಜರುಗಲಿದೆ.

ಲಾಂಛನ ಬಿಡುಗಡೆ ವೇಳೆ ಉಸ್ತುವಾರಿ ಸಚಿವ ಜಮೀರ್ ಅಹಮದ್, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಜಿಲ್ಲಾಧಿಕಾರಿ ದಿವಾಕರ್, ಹಾಸ್ಯ ನಟ, ಸಂಗೀತ ನಿರ್ದೇಶಕ ಸಾಧು ಕೋಕಿಲ, ನಿರ್ದೇಶಕಿ ಕವಿತಾ ಲಂಕೇಶ್ ಉಪಸ್ಥಿತರಿದ್ದರು

ಹಂಪಿ ಉತ್ಸವಕ್ಕೆ ಭರ್ಜರಿ ತಯಾರಿ ನಡೆಸಿರುವ ಜಿಲ್ಲಾಡಳಿತ

ಜನಮಾನಸದ ನಿರೀಕ್ಷೆಯಂತೆ ಈ ಉತ್ಸವವನ್ನು ನಡೆಸಲು ಜಿಲ್ಲಾಡಳಿತ ಅಗತ್ಯ ಯೋಜನೆ ರೂಪಿಸುತ್ತಿದೆ. ಸ್ಥಳೀಯ ಶಾಸಕರು ಸೇರಿದಂತೆ ಜಿಲ್ಲೆಯ ಎಲ್ಲ ಜನ ಪ್ರತಿನಿಧಿಗಳ ಸಲಹೆ ಪಡೆದು ಉತ್ಸವಕ್ಕೆ ಸಿದ್ಧತೆ ಮಾಡಲಾಗುತ್ತಿದೆ. ನಾನಾ ಸಮಿತಿಗಳನ್ನು ರಚಿಸಿ ಜವಾಬ್ದಾರಿ ಹಂಚಿಕೆ ಮಾಡಲು ತೀರ್ಮಾನ ಮಾಡಲಾಗಿದೆ.

ನಾಲ್ಕು ವೇದಿಕೆಗಳ ನಿರ್ಮಾಣಕ್ಕೆ ಈಗಾಗಲೇ ಸ್ಥಳ ಪರಿಶೀಲಿಸಿದ್ದು, ಆನೆ ಸಾಲು ಮಂಟಪದಲ್ಲಿ ಧ್ವನಿ ಮತ್ತು ಬೆಳಕು ಕಾರ್ಯಕ್ರಮ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆದ್ಯತೆ ಕೊಟ್ಟು ಜನರಲ್ಲಿ ಭಕ್ತಿ, ಶಾಂತಿ ಭಾವವನ್ನು ಪ್ರೇರೇಪಿಸುವ ಹಾಗೆ ವ್ಯವಸ್ಥೆ ಮಾಡಲಾಗುತ್ತದೆ. ಹಂಪಿ ಬೈ ಸ್ಕೆಮ್ ಸೇರಿದಂತೆ ನಾನಾ ಕಾರ್ಯಕ್ರಮಗಳನ್ನು ಯೋಜಿಸಲಾಗಿದೆ. ಯುವಕರು, ಮಹಿಳೆಯರು, ಮಕ್ಕಳು ಸೇರಿದಂತೆ ಎಲ್ಲಾ ವರ್ಗದ ಜನ ಸಮುದಾಯವನ್ನು ಆಕರ್ಷಿಸಲು ಉತ್ಸವದಲ್ಲಿ ವೈವಿಧ್ಯಮಯವಾಗಿ ಕಾರ್ಯಕ್ರಮ ರೂಪಿಸಲಾಗುವುದು.

ಇದನ್ನೂ ಓದಿ: ದೀಪಾವಳಿ ಬಳಿಕ ವಿಜಯಪುರದಲ್ಲಿ ನಡೆಯುತ್ತೆ ಶಿವಾಜಿ ಉತ್ಸವ; ಏನಿದರ ವಿಶೇಷ? ಇಲ್ಲಿದೆ ವಿವರ

ವಸಂತ ವೈಭವ, ತುಂಗಾರತಿ, ರೈತರಿಗಾಗಿ ಕೃಷಿ ಪ್ರದರ್ಶನ, ಮಕ್ಕಳಿಗಾಗಿ ವಿಶೇಷ ಕಾರ್ಯಕ್ರಮ, ಮಹಿಳೆಯರಿಗಾಗಿ ಕ್ಲಾಸಿಕಲ್ ಸಂಗೀತ ಸೇರಿದಂತೆ ನಾನಾ ಕಾರ್ಯಕ್ರಮ ರೂಪಿಸಲು ನಿರ್ಧಾರ ಮಾಡಲಾಗಿದೆ‌.

ವಿವಿಧ ಸ್ಪರ್ಧೆ

ಹಂಪಿ ಉತ್ಸವದಲ್ಲಿ ಪ್ರತಿ ಬಾರಿ ಸಾಂಪ್ರದಾಯಿಕವಾಗಿ ನಡೆಸುವ ಅಡುಗೆ ಸ್ಪರ್ಧೆ, ರಂಗೋಲಿ ಸ್ಪರ್ಧೆ, ಕುಸ್ತಿ ಹಾಗೂ ಕಲ್ಲು ಎತ್ತುವ ಸ್ಪರ್ಧೆ ಸೇರಿದಂತೆ ನಾನಾ ಸ್ಪರ್ಧೆಗಳು ಇರಲಿವೆ. 25 ದಿನ ನಿರಂತರ ಪ್ರಚಾರ ಕೈಗೊಂಡು ಉತ್ಸವವನ್ನು ಯಶಸ್ವಿಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ದಿವಾಕರ್ ತಿಳಿಸಿದ್ದಾರೆ.

ಹಂಪಿ ವಿವಿಯ ಸಹಯೋಗ

ಹಂಪಿಯ ಇತಿಹಾಸದಲ್ಲಿ ಕನ್ನಡ ವಿಶ್ವ ವಿದ್ಯಾಲಯವು ಒಂದು ಕಿರೀಟವಿದ್ದಂತೆ. ವಿಶ್ವ ವಿದ್ಯಾಲಯದ ಕುಲಪತಿಗಳು ಸೇರಿದಂತೆ ಅಲ್ಲಿನ ಎಲ್ಲ ವಿಭಾಗಗಳ ಪ್ರಾಧ್ಯಾಪಕರೊಂದಿಗೆ ಚರ್ಚಿಸಿ ಪುಸ್ತಕ ಮಳಿಗೆ ಸೇರಿದಂತೆ ವಿಭಿನ್ನ ಕಾರ್ಯಕ್ರಮ ರೂಪಿಸಲು ಚಿಂತಿಸಲಾಗಿದೆ.

ಹಳ್ಳಿಗಳಿಗೆ ಬಸ್ ವ್ಯವಸ್ಥೆ

80 ರಿಂದ 100 ಬಸ್​ಗಳನ್ನು ಮೀಸಲಿಟ್ಟು ಹಳ್ಳಿಗಳಿಂದ ಜನರನ್ನು ಕರೆತರಲಾಗುವುದು. ಜಿಲ್ಲೆಯ ಎಲ್ಲ ಶಿಕ್ಷಣ ಸಂಸ್ಥೆಗಳ ಪ್ರಮುಖರ ಸಹಯೋಗದೊಂದಿಗೆ ಶಾಲಾ ವಾಹನಗಳ ಮೂಲಕ ವಿದ್ಯಾರ್ಥಿಗಳನ್ನು ಕರೆತರಲಾಗುತ್ತದೆ. ಹಂಪಿ‌‌ ಉತ್ಸವಕ್ಕೆ 15 ಕೋಟಿ ರೂ. ಪ್ರಸ್ತಾವನೆ.

ಹಂಪಿ ಉತ್ಸವ ಆಚರಣೆಗೆ ಸಂಬಂಧಿಸಿದಂತೆ 15 ಕೋಟಿ ರೂ. ಅನುದಾನಕ್ಕಾಗಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಹೆಚ್ಚಿನದಾಗಿ ಸ್ಥಳಿಯವಾಗಿ ಆದಾಯ ಕ್ರೋಡೀಕರಣಕ್ಕೆ ಶಾಸಕರೊಂದಿಗೆ ಚರ್ಚಿಸಿಲಾಗುತ್ತಿದೆ.

ಜಿಲ್ಲಾಡಳಿತದಿಂದ ಸಿದ್ಧತೆ

ಉತ್ಸವಕ್ಕೆ ಜಿಲ್ಲಾಡಳಿತವು ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದೆ. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಕಾರ್ಯಯೋಜನೆ ರೂಪಿಸಲಾಗುತ್ತಿದೆ. ಸಮಯವಕಾಶ ಕಡಿಮೆ ಇರುವುದರಿಂದ ಯುದ್ದೋಪಾದಿಯಲ್ಲಿ ಉತ್ಸವದ ಸಿದ್ದತೆ ಮಾಡಿಕೊಳ್ಳಲು ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗಕ್ಕೆ ಸೂಚಿಸಲಾಗಿದೆ. ಉತ್ಸವದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳು, ಕಬಡ್ಡಿ, ಕುಸ್ತಿ ಸೇರಿದಂತೆ ನಾನಾ ಸಾಹಸ ಕ್ರೀಡೆಗಳು, ರಂಗೋಲಿ, ಅಡುಗೆ ಸೇರಿದಂತೆ ನಾನಾ ಸ್ಪರ್ಧೆಗಳು ಇರಲಿವೆ. ಬಗೆಬಗೆಯ ಸಾಂಸ್ಕೃತಿಕ ಕಲಾತಂಡಗಳ ಮೆರವಣಿಗೆ, ವಸ್ತುಪ್ರದರ್ಶನ ಸೇರಿದಂತೆ ಹತ್ತು ಹಲವು ವೈವಿಧ್ಯಮಯ ಕಾರ್ಯಕ್ರಮಗಳು ಜರುಗಲಿವೆ ಮುಖ್ಯವಾಗಿ ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆಧ್ಯತೆ ನೀಡಲು ನಿರ್ಧರಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:57 am, Sun, 14 January 24

ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು