ಸಿದ್ದರಾಮಯ್ಯ ಆಪ್ತೆ, ವಿಶ್ರಾಂತ ಕುಲಪತಿ ಡಾ.ಮಲ್ಲಿಕಾ ಘಂಟಿ ವಿರುದ್ಧ ಎಫ್‌ಐಆರ್‌ ದಾಖಲು, ಏನಿದು ಪ್ರಕರಣ?

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಪ್ತೆ, ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಮಲ್ಲಿಕಾ ಘಂಟಿ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಸಿದ್ದರಾಮಯ್ಯ ಆಪ್ತೆ, ವಿಶ್ರಾಂತ ಕುಲಪತಿ ಡಾ.ಮಲ್ಲಿಕಾ ಘಂಟಿ ವಿರುದ್ಧ ಎಫ್‌ಐಆರ್‌ ದಾಖಲು, ಏನಿದು ಪ್ರಕರಣ?
ಡಾ.ಮಲ್ಲಿಕಾ ಘಂಟಿ
Follow us
ವೀರೇಶ್ ದಾನಿ, ಬಳ್ಳಾರಿ-ವಿಜಯನಗರ
| Updated By: ರಮೇಶ್ ಬಿ. ಜವಳಗೇರಾ

Updated on:Aug 02, 2023 | 9:35 AM

ವಿಜಯನಗರ, (ಆಗಸ್ಟ್ 02): ಹ‌ಂಪಿ ಕನ್ನಡ ವಿಶ್ವವಿದ್ಯಾಲಯದ(Hampi Kannada University) ವಿಶ್ರಾಂತ ಕುಲಪತಿ ಡಾ.ಮಲ್ಲಿಕಾ ಘಂಟಿ(Dr mallika ghanti) ಎಫ್​ಐಆರ್​ ದಾಖಲಾಗಿದೆ. ವಿಶ್ವವಿದ್ಯಾಲಯಕ್ಕೆ ಆರ್ಥಿಕ ನಷ್ಟ ಉಂಟು ಮಾಡುವುದರೊಂದಿಗೆ ಉದ್ದೇಶಪೂರ್ವಕವಾಗಿ ಕೆಟಿಪಿಪಿ ಕಾಯ್ದೆ ಉಲ್ಲಂಘಿಸಿದ್ದಾರೆ ಎಂದು ಆರೋಪಿ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಸಚಿವ ಸುಬ್ಬಣ್ಣ ರೈ ದೂರು ನೀಡಿದ್ದಾರೆ. ಇವರ ದೂರಿನ ಮೇರೆಗೆ ಇದೀಗ ಕಮಲಾಪುರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ಇದನ್ನೂ ಓದಿ: Valmiki Sage ವಾಲ್ಮೀಕಿ ಶ್ರೀಗಳ ಬಗ್ಗೆ ಪುರಾಣಗಳಲ್ಲಿ ಕಟ್ಟು ಕಥೆ ಕಟ್ಟಿ ಅಪಮಾನ ಮಾಡಿದ್ದಾರೆ -ಡಾ.ಮಲ್ಲಿಕಾ ಎಸ್.ಘಂಟಿ

2015-16 ಮತ್ತು 2016-17ರ ಸಾಲಿನಲ್ಲಿ ಕೆಲ ಕಾಮಗಾರಿ ಮಾಡಿದ್ದಾರೆ. ಈ ವೇಳೆ ವಿಶ್ವವಿದ್ಯಾಲಯಕ್ಕೆ 13.56 ಲಕ್ಷ ರೂ. ಆರ್ಥಿಕ ನಷ್ಟ ಮಾಡಲಾಗಿದೆ. ಇದರೊಂದಿಗೆ ಉದ್ದೇಶಪೂರ್ವಕವಾಗಿ ಕೆಟಿಪಿಪಿ ಕಾಯ್ದೆ ಉಲ್ಲಂಘಿಸಿದ್ದಾರೆ ಎಂದು ಹಂಪಿ ಕನ್ನಡ ವಿವಿಯ ಕುಲಸಚಿವ ಸುಬ್ಬಣ್ಣ ರೈ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಹಂಪಿ ವಿಶ್ವವಿದ್ಯಾಲಯದಲ್ಲಿ 2025ರಿಂದ 2019ರ ವರೆಗೆ 50.86 ಕೋಟಿ ರೂಪಾಯಿ ಮೊತ್ತದ ಕಾಮಗಾರಿಯನ್ನು ಇ-ಟೆಂಡರ್​ ಇಲ್ಲದೇ ಕೈಗೊಂಡಿದ್ದಾರೆ. ಇದರೊಂದಿಗೆ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕ (ಕೆಟಿಸಿಪಿ) ಕಾಯ್ದೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಇದೇ ವಿಚಾರವಾಗಿ ಹಂಪಿ ವಿಶ್ವವಿದ್ಯಾಯಲದ ಅಂದಿನ ಕಾನೂನ ಘಟಕದ ಸೂಪರಿಡೆಂಟ್​ ಹೆಚ್​ಎಂ ಸೊಮನಾಥ್ ಎನ್ನುವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಬಳಿಕ ಲೋಕಾಯುಯುಕ್ತ ಈ ಬಗ್ಗೆ ತನಿಖೆ ನಡೆಸಿ 2021ರಲ್ಲಿ ರಾಜ್ಯ ಸರ್ಕಾರಕ್ಕೆ ಅಂತಿಮ ವರದಿ ನೀಡಿತ್ತು. ಕೆಟಿಪಿಪಿ ಉಲ್ಲಂಘನೆಯಾಗಿದೆ ಎಂದು ವರದಿಯಲ್ಲಿ ತಿಳಿಸಿತ್ತು. ಆದರೂ ವಿಶ್ವವಿದ್ಯಾಲಯ ದೂರು ದಾಖಲಿಸಲು ಹಿಂದೇಟು ಹಾಕಿತ್ತು ಎನ್ನುವ ಆರೋಪಗಳು ಕೇಳಿಬಂದಿದ್ದವು. ಕೊನೆಗೆ ಇತ್ತೀಚೆಗೆ ನಡೆದ ವಿಶ್ವವಿದ್ಯಾಲಯದ ಸಿಂಡಿಕೇಟ್​ ಸಭೆಯಲ್ಲಿ ದೂರು ದಾಖಲಿಸಬೇಕೆಂಬ ತೀರ್ಮಾನ ಕೈಗೊಂಡಿದ್ದು, ಅದರಂತೆ ಇದೀಗ ಅಂತಿಮವಾಗಿ ಹಂಪಿ ಕನ್ನಡ ವಿವಿಯ ಕುಲಸಚಿವ ಸುಬ್ಬಣ್ಣ ರೈ ಕಮಲಾಪುರ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ.

ಇದೀಗ ಕಮಲಾಪುರ ಪೊಲೀಸರು ಸಹ ಡಾ.ಮಲ್ಲಿಕಾ ಘಂಟಿ ಎಫ್​ಐಆರ್ ದಾಖಲಿಸಿಕೊಂಡಿದ್ದು, ಮುಂದೆ ಯಾವ ಕ್ರಮವಾಗಲಿದೆ ಎಂದು ಕಾದುನೋಡಬೇಕಿದೆ. ಮಲ್ಲಿಕಾ ಘಂಟೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಪ್ತರು ಕೂಡ ಹೌದು.

ಇನ್ನಷ್ಟು ಕರ್ನಾಟಕ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 9:34 am, Wed, 2 August 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ