AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಂಪಿಗೆ ಭೇಟಿ ನೀಡುತ್ತಿದ್ದ ವಿದೇಶಿ ಪ್ರವಾಸಿಗರ ಸಂಖ್ಯೆ ಇಳಿಕೆ: ಕಾರಣ ಏನು ಗೊತ್ತಾ?

ಯುನೆಸ್ಕೋ ಮಾನ್ಯತೆ ಪಡೆದಿರುವ ಹಂಪಿಗೆ ಭೇಟಿ ನೀಡುವ ವಿದೇಶಿ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಇಳಿದಿದೆ. 2024-25ರಲ್ಲಿ 3,818 ಪ್ರವಾಸಿಗರು ಮಾತ್ರ ಭೇಟಿ ನೀಡಿದ್ದಾರೆ. ಭದ್ರತೆಯ ಆತಂಕ ಮತ್ತು ಮೂಲಸೌಕರ್ಯ ಕೊರತೆ ಇದಕ್ಕೆ ಪ್ರಮುಖ ಕಾರಣ. ಇದು ಸ್ಥಳೀಯ ಪ್ರವಾಸೋದ್ಯಮ ಮತ್ತು ವ್ಯಾಪಾರಕ್ಕೆ ದೊಡ್ಡ ಹೊಡೆತ ನೀಡಿದೆ.

ಹಂಪಿಗೆ ಭೇಟಿ ನೀಡುತ್ತಿದ್ದ ವಿದೇಶಿ ಪ್ರವಾಸಿಗರ ಸಂಖ್ಯೆ ಇಳಿಕೆ: ಕಾರಣ ಏನು ಗೊತ್ತಾ?
ಹಂಪಿ
ಪ್ರಸನ್ನ ಹೆಗಡೆ
|

Updated on: Nov 17, 2025 | 12:04 PM

Share

ವಿಜಯನಗರ, ನವೆಂಬರ್​ 17: ಯುನೆಸ್ಕೋ ಮಾನ್ಯತೆ ಪಡೆದಿರುವ ವಿಶ್ವಪ್ರಸಿದ್ಧ ಪ್ರವಾಸಿ ತಾಣ ಹಂಪಿಗೆ ಭೇಟಿ ನೀಡುವ ವಿದೇಶಿ ಪ್ರವಾಸಿಗರ ಸಂಖ್ಯೆ ಈ ವರ್ಷ ಗಣನೀಯ ಇಳಿಕೆ ಕಂಡಿದೆ. 2024-25ನೇ ಸಾಲಿನ ಅಕ್ಟೋಬರ್​ ತಿಂಗಳವರೆಗೆ ಒಟ್ಟು 3,818 ವಿದೇಶಿ ಪ್ರವಾಸಿಗರು ಹಂಪಿಗೆ ಭೇಟಿ ನೀಡಿದ್ದಾರೆ. ಹಿಂದಿನ ವರ್ಷ ಇದೇ ಅವಧಿಯಲ್ಲಿ 19,838 ವಿದೇಶಿ ಪ್ರವಾಸಿಗರು ಇಲ್ಲಿಗೆ ಬಂದಿದ್ದರು. ಆದರೆ, ಹಂಪಿಗೆ ಭೇಟಿ ನೀಡುವ ದೇಸೀಯ ಪ್ರವಾಸಿಗರ ಸಂಖ್ಯೆ ದೊಡ್ಡ ಪ್ರಮಾಣದಲ್ಲಿಯೇ ಮುಂದುವರಿದಿದ್ದು, 4,46,441 ಭಾರತೀಯರು ವಿಜಯನಗರ ಸಾಮ್ರಾಜ್ಯವನ್ನು ಕಣ್ತುಂಬಿಕೊಂಡಿದ್ದಾರೆ.

ಕೊರೊನಾ ಮಹಾಮಾರಿ ಅಬ್ಬರದ ಬಳಿಕ ಹಂಪಿಗೆ ಭೇಟಿ ನೀಡುವ ದೇಸೀಯ ಪ್ರವಾಸಿಗರ ಸಂಖ್ಯೆ ಸ್ಥಿರವಾಗಿದ್ದರೂ ವಿದೇಶಿ ಪ್ರವಾಸಿಗರ ಸಂಖ್ಯೆಯಲ್ಲಿ ಏರಿಳಿತ ಕಂಡುಬಂದಿದೆ. 2022–23ರಲ್ಲಿ 15,340 ವಿದೇಶಿ ಪ್ರವಾಸಿಗರು ಭೇಟಿ ನೀಡಿದ್ದು, 2023–24ರಲ್ಲಿ ಸಂಖ್ಯೆ 20,080ಕ್ಕೆ ಏರಿಕೆಯಾಗಿತ್ತು. ಆದರೆ ಈ ವರ್ಷ ವಿದೇಶಿ ಪ್ರವಾಸಿಗರ ಸಂಖ್ಯೆಯಲ್ಲಿ ಭಾರಿ ಇಳಿಕೆ ಕಂಡುಬಂದಿದೆ. ವಿದೇಶಿ ಪ್ರವಾಸಿಗರ ಸಂಖ್ಯೆ ಕುಸಿತಕ್ಕೆ ಈ ಪ್ರದೇಶದಲ್ಲಿನ ಭದ್ರತೆಯ ಆತಂಕ ಮತ್ತು ಮೂಲಸೌಕರ್ಯ ಸಂಬಂಧಿತ ಸಮಸ್ಯೆಗಳೇ ಪ್ರಮುಖ ಕಾರಣ ಎಂಬ ಮಾತುಗಳು ಕೇಳಿಬಂದಿವೆ. ಕಳೆದ ಬೇಸಿಗೆಯಲ್ಲಿ ವರದಿಯಾಗಿದ್ದ ಲೈಂಗಿಕ ದೌರ್ಜನ್ಯ ಮತ್ತು ವಿದೇಶಿ ಪ್ರವಾಸಿಗನ ಹತ್ಯೆ ಅಂತಾರಾಷ್ಟ್ರೀಯ ಪ್ರವಾಸಿಗರಲ್ಲಿ ಭೀತಿ ಹುಟ್ಟಿಸಿದೆ.

ಇದನ್ನೂ ಓದಿ: ಕೊಪ್ಪಳ ಅತ್ಯಾಚಾರ ಪ್ರಕರಣದಿಂದ ಹಂಪಿ ಪ್ರವಾಸೋದ್ಯಮಕ್ಕೆ ತೀವ್ರ ಹೊಡೆತ

ಹಂಪಿ ಬಗ್ಗೆ ವಿಚಾರಣೆ ನಡೆಸುವ ವಿದೇಶಿ ಪ್ರವಾಸಿಗರು ಕೇಳುವ ಮೊದಲ ಪ್ರಶ್ನೆಯೇ ಹಂಪಿ ನಮಗೆ ಸುರಕ್ಷಿತ ಪ್ರದೇಶವಾ? ಎಂಬುದಾಗಿದೆ. ಇದೇ ವಿಚಾರಕ್ಕೆ ಯೂರೋಪ್ ಮತ್ತು ಪೂರ್ವ ಏಷ್ಯಾದ ಪ್ರವಾಸಿಗರ ಅನೇಕ ಟ್ರಿಪ್​ಗಳು ರದ್ದಾಗಿವೆ ಎಂಬುದು ಮಾರ್ಗದರ್ಶಕರು ಮತ್ತು ಪ್ರವಾಸ ಆಯೋಜಕರ ಮಾತು. ಅಲ್ಲದೆ, ಸ್ವಚ್ಛತೆ, ಮಾಹಿತಿ ಕೇಂದ್ರಗಳ ಅಲಭ್ಯತೆ ಮತ್ತು ಸಾರಿಗೆ ಅವ್ಯವಸ್ಥೆಗಳನ್ನೇ ವಿದೇಶಿ ಪ್ರವಾಸಿಗರು ಪ್ರಮುಖವಾಗಿ ಉಲ್ಲೇಖಿಸುತ್ತಾರೆ ಎಂಬುದಾಗಿಯೂ ಅವರು ತಿಳಿಸಿದ್ದಾರೆ.

ವಿದೇಶಿ ಪ್ರವಾಸಿಗರ ಸಂಖ್ಯೆಯಲ್ಲಿ ಕಡಿಮೆ ಆಗುತ್ತಿರುವುದು ಸ್ಥಳೀಯ ಪ್ರವಾಸೋದ್ಯಮ ಉದ್ಯಮಿಗಳು ಮತ್ತು ಅವರನ್ನೇ ನಂಬಿ ಜೀವನೋಪಾಯ ನಡೆಸುತ್ತಿರುವವರ ಮೇಲೆ ಪರಿಣಾಮ ಬೀರುತ್ತಿದೆ. ಭದ್ರತೆ ಮತ್ತು ಮೂಲ ಸೌಕರ್ಯಗಳ ಸುಧಾರಣೆ ವಿಚಾರಕ್ಕೆ ಸಂಬಂಧಿಸಿ ಪ್ರಸ್ತಾವನೆಗಳು ಪರಿಶೀಲನೆಯಲ್ಲಿವೆ ಎಂದು ಹಂಪಿ ವಿಶ್ವ ಹೇರಿಟೇಜ್ ಪ್ರದೇಶ ನಿರ್ವಹಣಾ ಪ್ರಾಧಿಕಾರದ ಅಡಿಯಲ್ಲಿ ಇರುವ ವಿಲೇಜಸ್ ವೆಲ್ಫೇರ್ ಅಸೋಸಿಯೇಶನ್‌ನ ಅಧ್ಯಕ್ಷ ವಿರೂಪಕ್ಷಿ ವಿ. ಹಂಪಿ ತಿಳಿಸಿರೋದಾಗಿ ದಿ ನ್ಯೂ ಇಂಡಿಯನ್​ ಎಕ್ಸ್​ಪ್ರೆಸ್​ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್