G20 Summit: ಇಂದಿನಿಂದ 8 ದಿನ ವಿಶ್ವ ಪಾರಂಪರಿಕ ತಾಣ ಹಂಪಿಯಲ್ಲಿ ಜಿ20 ಶೃಂಗಸಭೆ

ಈ ಬಾರಿ ಭಾರತ ಜಿ20 ಶೃಂಗಸಭೆಯ ಅಧ್ಯಕ್ಷತೆ ವಹಿಸಿದ್ದು, ಜಿ20 ಶೃಂಗಸಭೆಯ ಮೂರನೇ ಪ್ರಮುಖ ಸಭೆ ವಿಶ್ವ ಪಾರಂಪರಿಕ ತಾಣ ಹಂಪಿಯಲ್ಲಿ ಇಂದಿನಿಂದ 8 ದಿನಗಳಕಾಲ ನಡೆಯಲಿದೆ.

G20 Summit: ಇಂದಿನಿಂದ 8 ದಿನ ವಿಶ್ವ ಪಾರಂಪರಿಕ ತಾಣ ಹಂಪಿಯಲ್ಲಿ ಜಿ20 ಶೃಂಗಸಭೆ
ಜಿ20 ಶೃಂಗಸಭೆ ಹಂಪಿ
Follow us
TV9 Web
| Updated By: ವಿವೇಕ ಬಿರಾದಾರ

Updated on: Jul 09, 2023 | 7:34 AM

ಹೊಸಪೇಟೆ: ಈ ಬಾರಿ ಭಾರತ ಜಿ20 ಶೃಂಗಸಭೆಯ (G-20 Summit) ಅಧ್ಯಕ್ಷತೆ ವಹಿಸಿದ್ದು, ಜಿ20 ಶೃಂಗಸಭೆಯ ಮೂರನೇ ಪ್ರಮುಖ ಸಭೆ ವಿಶ್ವ ಪಾರಂಪರಿಕ ತಾಣ ಹಂಪಿಯಲ್ಲಿ (Hampi) ಇಂದಿನಿಂದ 8 ದಿನ (ಜು.09 ರಿಂದ ಜು.16) ರವರೆಗೆ ನಡೆಯಲಿದೆ. ಈ ಮೂಲಕ ವಿಜಯನಗರ (Vijayanagar) ವಾಸ್ತುಶಿಲ್ಪ ಶೈಲಿ, ವಿಜಯನಗರ ಸಾಮ್ರಾಜ್ಯದ ಹಿರಿಮೆ-ಗರಿಮೆಯನ್ನು ಇಡೀ ಜಗತ್ತಿಗೆ ಪರಿಚಯಿಸುವ ದೇಷ್ಟಿಯಿಂದ ಹಂಪಿಯಲ್ಲಿ ಜಿ.20 ಶೃಂಗಸಭೆ ಆಯೋಜಿಸಲಾಗಿದೆ.

ಇನ್ನು ಇಂದಿನಿಂದ ಜು.13ರವರೆಗೆ ಜಿ20 ರಾಷ್ಟ್ರಗಳ ಸಾಂಸ್ಕೃತಿಕ ಕಾರ್ಯ ತಂಡದ ಸಭೆ ನಡೆಯಲಿದೆ. ಈ ತಂಡ ಭಾರತದ ಸಂಸ್ಕೃತಿ ಸೇರಿ ವಿವಿಧ ವಿಷಯಗಳ ಕುರಿತು ಚರ್ಚಿಸಲಿದೆ. ಜೊತೆಗೆ ಸದಸ್ಯ ರಾಷ್ಟ್ರಗಳ ಐತಿಹಾಸಿಕ ಪಾರಂಪರೆಗಳನ್ನು ಮುಂದಿನ ಪೀಳಿಗೆಗೆ ಸಂರಕ್ಷಿಸುವ ಬಗ್ಗೆ ಜಿ-20 ರಾಷ್ಟಗಳು ಸುದೀರ್ಘವಾಗಿ ಚರ್ಚೆ ನಡೆಸಲಿವೆ. ಈ ಸಭೆಯಲ್ಲಿ ದೇಶ-ವಿದೇಶದ 252 ಪ್ರತಿನಿಧಿಗಳು ಭಾಗಿಯಾಗಲಿದ್ದಾರೆ.

ಜಿ20 ಶೆರ್ಪಾ ಸಭೆ

ಜಿ20 ಶೆರ್ಪಾ ಸಭೆ ಜು.13ರಿಂದ 16ರವರೆಗೆ ನಡೆಯಲಿದೆ. ಜಿ20 ರಾಷ್ಟ್ರಗಳ ಪ್ರಧಾನಿಗಳ ಜೊತೆಗೆ ನೇರ ಸಂಪರ್ಕ ಹೊಂದಿರುವ ಅಧಿಕಾರಿಗಳು ಶೆರ್ಪಾ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಜಿ20 ರಾಷ್ಟ್ರಗಳ ಸಭೆಗಳಲ್ಲಿ ಇದೊಂದು ವಿಶೇಷ ಸಭೆಯಾಗಿದೆ. ಸಭೆಯಲ್ಲಿ 20 ದೇಶಗಳ ಪೈಕಿ 19 ದೇಶಗಳ 30 ಪ್ರತಿನಿಧಿಗಳು, 9 ಆಹ್ವಾನಿತ ದೇಶಗಳ 16 ಪ್ರತಿನಿಧಿಗಳು, 4 ಸಂಸ್ಥೆಗಳ ಪ್ರತಿನಿಧಿಗಳು ಸೇರಿ ಒಟ್ಟು 52 ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಉಭಯ ಸಭೆಗಳಲ್ಲಿ 200ಕ್ಕೂ ಅಧಿಕ ಅಧಿಕಾರಿಗಳೂ ಪಾಲ್ಗೊಳ್ಳಲಿದ್ದಾರೆ.

ಇದನ್ನೂ ಓದಿ: G20 Summit: ರಾಜ್ಯದ ಪ್ರಮುಖ ಈ 3 ಸ್ಥಳಗಳಲ್ಲಿ ನಡೆಯಲಿದೆ G20 ಶೃಂಗಸಭೆ, ಇಲ್ಲಿದೆ ವೇಳಾಪಟ್ಟಿ

ಈಗಾಗಲೇ ರಾಜಸ್ಥಾನದ ಉದಯಪುರ, ಅಸ್ಸಾಮಿನ ಕುಮಾರ್ಗಮ್‌ನಲ್ಲಿ ಶೆರ್ಪಾ ಸಭೆಗಳು ನಡೆದಿವೆ. ಜಾಗತಿಕ ಮಟ್ಟದಲ್ಲಿ ಕರ್ನಾಟಕ ರಾಜ್ಯದ ಪ್ರವಾಸೋದ್ಯಮ ಹಾಗೂ ಸಾಂಸ್ಕೃತಿಕ ಹಿರಿಮೆ ಮತ್ತು ಉತ್ಪನ್ನಗಳನ್ನು ಉನ್ನತೀಕರಿಸಲು 3ನೇ ಶೆರ್ಪಾ ಸಭೆ ವಿಶ್ವವಿಖ್ಯಾತ ಪಾರಂಪರಿಕ ತಾಣ ಹಂಪಿಯಲ್ಲಿ ನಡೆಯಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ