Hampi By Night Show; 2 ತಿಂಗಳಿಂದ ಹಂಪಿ ಬೈ ನೈಟ್ ಪ್ರದರ್ಶನ ಸ್ಥಗಿತ, 70 ಲಕ್ಷ ರೂ ಬಿಲ್ ಬಾಕಿ

ಅಧಿಕಾರಿಗಳು 70 ಲಕ್ಷ ರೂ. ಬಿಲ್ ಕಟ್ಟದೆ ಬಾಕಿ ಉಳಿಸಿಕೊಂಡ ಹಿನ್ನೆಲೆ ಕಳೆದ ಎರಡು ತಿಂಗಳಿಂದ ಹಂಪಿಯ ‘ಹಂಪಿ ಬೈ ನೈಟ್’ ಪ್ರದರ್ಶನವನ್ನು ಸ್ಥಗಿತಗೊಳಿಸಲಾಗಿದೆ. ಪ್ರದರ್ಶನವನ್ನು ನಿರ್ವಹಿಸುವ ಅಧಿಕಾರಿಗಳು ಬಿಲ್ ಪಾವತಿಸಿದ್ದರೂ ಪ್ರವಾಸೋದ್ಯಮ ಇಲಾಖೆ ಮತ್ತು ಹಂಪಿ ವಿಶ್ವ ಪರಂಪರೆಯ ಪ್ರದೇಶ ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳು ಇನ್ನೂ ಬಿಲ್ ಪಾವತಿಸಿಲ್ಲ ಎನ್ನಲಾಗುತ್ತಿದೆ.

Hampi By Night Show; 2 ತಿಂಗಳಿಂದ ಹಂಪಿ ಬೈ ನೈಟ್ ಪ್ರದರ್ಶನ ಸ್ಥಗಿತ, 70 ಲಕ್ಷ ರೂ ಬಿಲ್ ಬಾಕಿ
ಹಂಪಿ ಬೈ ನೈಟ್ ಪ್ರದರ್ಶನ
Follow us
ಆಯೇಷಾ ಬಾನು
|

Updated on: Jun 25, 2024 | 10:52 AM

ಹೊಸಪೇಟೆ, ಜೂನ್.25: ಯುನೆಸ್ಕೋ ಮಾನ್ಯತೆ ಪಡೆದ ಪಾರಂಪರಿಕ ತಾಣವಾದ ಹಂಪಿಯಲ್ಲಿ ನಡೆಯುತ್ತಿರುವ ‘ಹಂಪಿ ಬೈ ನೈಟ್’ ( Hampi By Night Show) ಪ್ರದರ್ಶನ ಕಳೆದ ಎರಡು ತಿಂಗಳಿಂದ ಸ್ಥಗಿತಗೊಂಡಿದೆ. ಅಧಿಕಾರಿಗಳು 70 ಲಕ್ಷ ರೂ. ಬಿಲ್ ಕಟ್ಟದ ಹಿನ್ನೆಲೆ ಹಂಪಿ ಬೈ ನೈಟ್ ಪ್ರದರ್ಶನ ನಿಂತು ಹೋಗಿದೆ.

ಹಂಪಿ ಬೈ ನೈಟ್ ಪ್ರದರ್ಶನವನ್ನು ನಿರ್ವಹಿಸುವ ಖಾಸಗಿ ಕಂಪನಿಯ ಅಧಿಕಾರಿಗಳು, ಈಗಾಗಲೇ ನಾವು ಬಿಲ್ ಹಣ ಪಾವತಿಸಿದ್ದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ. ಮಾನ್ಸೂನ್ ಆರಂಭವಾದ ಕಾರಣ ಹೊರಾಂಗಣ ಪ್ರದರ್ಶನವನ್ನು ನಿಲ್ಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಅಂದರೆ ಪ್ರದರ್ಶನವನ್ನು ನಿರ್ವಹಿಸುವ ಅಧಿಕಾರಿಗಳು ಬಿಲ್ ಪಾವತಿಸಿದ್ದರೂ ಪ್ರವಾಸೋದ್ಯಮ ಇಲಾಖೆ ಮತ್ತು ಹಂಪಿ ವಿಶ್ವ ಪರಂಪರೆಯ ಪ್ರದೇಶ ನಿರ್ವಹಣಾ ಪ್ರಾಧಿಕಾರದ (HWHAMA) ಅಧಿಕಾರಿಗಳು ಇನ್ನೂ ಬಿಲ್ ಪಾವತಿಸಿಲ್ಲ ಎನ್ನಲಾಗುತ್ತಿದೆ.

‘ಹಂಪಿ ಬೈ ನೈಟ್’ ಪ್ರದರ್ಶನವು ವಾರಾಂತ್ಯದಲ್ಲಿ ಮತ್ತು ವಿಶೇಷ ದಿನಗಳಲ್ಲಿ ನಡೆಯುತ್ತದೆ. ಬಿಲ್ ಬಾಕಿ ಇರುವ ಕಾರಣ ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪನಿ (ಜೆಸ್ಕಾಂ) ಜಿಲ್ಲಾಡಳಿತಕ್ಕೆ ನೋಟಿಸ್ ಜಾರಿ ಮಾಡಿದೆ. ಇದೀಗ ಸಂಪೂರ್ಣ ಯೋಜನೆ ಕೈಗೆತ್ತಿಕೊಳ್ಳಲು ಜಿಲ್ಲಾಡಳಿತ ಮುಂದಾಗಿದೆ.

ಇದನ್ನೂ ಓದಿ: ಜೂನ್ 25, ಇಂದಿನಿಂದ 5ಜಿ ಸ್ಪೆಕ್ಟ್ರಂ ಹರಾಜು; ಲಕ್ಷ ಕೋಟಿ ರೂ ಮೌಲ್ಯದ ಬ್ಯಾಂಡ್​ವಿಡ್ತ್​ಗಳ ಮಾರಾಟ

ಕಾರ್ಯಕ್ರಮವನ್ನು ನಿರ್ವಹಿಸುವ ಇನ್ನೋವೇಟಿವ್ ಲೈಟಿಂಗ್ ಸಿಸ್ಟಂನ ಸಿಇಒ ಕೃಷ್ಣ ಕುಮಾರ್ ಮಾತನಾಡಿದ್ದು, “ನಾವು ನಮ್ಮ ಪಾಲನ್ನು ಪಾವತಿಸಿದ್ದೇವೆ ಮತ್ತು ಪ್ರತಿ ತಿಂಗಳು ಬಿಲ್‌ಗಳನ್ನು ತೆರವುಗೊಳಿಸುತ್ತೇವೆ. ಹೆರಿಟೇಜ್ ಸೈಟ್ ಐದು ಟ್ರಾನ್ಸ್‌ಫಾರ್ಮರ್‌ಗಳನ್ನು ಹೊಂದಿದೆ. 500 kWh ಸಾಮರ್ಥ್ಯದ ಎರಡು ಮತ್ತು 250 kWh ನ ಮೂರು ಟ್ರಾನ್ಸ್‌ಫಾರ್ಮರ್‌ಗಳನ್ನು ಹೊಂದಿದೆ. ನಾವು ಎರಡು 500 kWh ಟ್ರಾನ್ಸ್‌ಫಾರ್ಮರ್‌ಗಳನ್ನು ಮಾತ್ರ ಬಳಸಿದ್ದೇವೆ. ಪ್ರತಿ ತಿಂಗಳು ಸರಾಸರಿ 6,000 ಪ್ರವಾಸಿಗರು ಪ್ರದರ್ಶನವನ್ನು ಕಣ್ತುಂಬಿಕೊಳ್ಳುತ್ತಾರೆ. ಪ್ರದರ್ಶನವನ್ನು ಜಿಲ್ಲಾಡಳಿತ ವಹಿಸಿಕೊಂಡ ಬಗ್ಗೆ ನಮಗೆ ತಿಳಿದಿಲ್ಲ.

ಜೆಸ್ಕಾಂ ನೋಟಿಸ್ ಕಳುಹಿಸಿದ ಮೇಲೆ ಜಿಲ್ಲಾಡಳಿತದ ಹಿರಿಯ ಅಧಿಕಾರಿಯೊಬ್ಬರು, “ನಾವು ರಾಜ್ಯ ಸರ್ಕಾರ ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ಪತ್ರ ಬರೆಯುತ್ತೇವೆ. ನಾವು ಆದಷ್ಟು ಬೇಗ ಸಮಸ್ಯೆಯನ್ನು ಪರಿಹರಿಸುತ್ತೇವೆ ಮತ್ತು ಪ್ರದರ್ಶನವನ್ನು ಪುನರಾರಂಭಿಸುತ್ತೇವೆ. ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಜಯನಗರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಈ ವಿಚಾರವನ್ನು ಹೇಳಿದ್ದೆವು. ಸರ್ಕಾರದ ಮುಂದಿನ ಸೂಚನೆಗಳಿಗಾಗಿ ನಾವು ಕಾಯುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ