AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hampi Utsav: ವಿಶ್ವ ವಿಖ್ಯಾತ ಹಂಪಿ ಉತ್ಸವಕ್ಕೂ ತಟ್ಟಿದ ಬರದ ಬಿಸಿ, ಫೆಬ್ರವರಿಗೆ ಮುಂದೂಡಿಕೆ

Hampi Utsav: ರಾಜ್ಯಾದ್ಯಂತ ಬರದ ಛಾಯೆ ಆವರಿಸಿದ್ದು, 195 ಬರಪೀಡಿತ ತಾಲ್ಲೂಕುಗಳು ಎಂದು ಘೋಷಣೆ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಹಂಪಿ ಉತ್ಸವಕ್ಕೂ ಸಹ ಬರ ತಟ್ಟಿದ್ದು, ನವೆಂಬರ್​ನಲ್ಲಿ ನಡೆಯಬೇಕಿದ್ದ ಉತ್ಸವವನ್ನು ಮುಂದೂಡಲಾಗಿದೆ. ಈ ಬಗ್ಗೆ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

Hampi Utsav: ವಿಶ್ವ ವಿಖ್ಯಾತ ಹಂಪಿ ಉತ್ಸವಕ್ಕೂ ತಟ್ಟಿದ ಬರದ ಬಿಸಿ,  ಫೆಬ್ರವರಿಗೆ ಮುಂದೂಡಿಕೆ
ಹಂಪಿಯಲ್ಲಿರುವ ಕಲ್ಲಿನ ರಥ
ರಮೇಶ್ ಬಿ. ಜವಳಗೇರಾ
|

Updated on: Sep 14, 2023 | 8:21 AM

Share

ಬೆಂಗಳೂರು/ವಿಜಯನಗರ, (ಸೆಪ್ಟೆಂಬರ್ 14) : ಮಳೆ(Rain) ಮುನಿಸಿಂದ ನೂರೆಂಟು ಸಂಕಷ್ಟಗಳು ಎದುರಾಗಿವೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಕರ್ನಾಟಕದಾದ್ಯಂತ ಬರದ (drought) ಛಾಯೆ ಆವರಿಸಿದ್ದು, ರಾಜ್ಯದ 195 ಬರಪೀಡಿತ ತಾಲ್ಲೂಕುಗಳು ಎಂದು  ಸರ್ಕಾರ ಘೋಷಿಸಿದೆ. ಇದೀಗ ಹಂಪಿ ಉತ್ಸವಕ್ಕೂ(Hampi Utsav) ಬರದ ಹೊಡೆತ ತಟ್ಟಿದೆ. ಹೌದು…ರಾಜ್ಯದಲ್ಲಿ ಬರ ಪರಿಸ್ಥಿತಿ ಹಿನ್ನಲೆಯಲ್ಲಿ ವಿಶ್ವ ವಿಖ್ಯಾತ ಹಂಪಿ ಉತ್ಸವವನ್ನು ಫೆಬ್ರವರಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ.

ನಿನ್ನೆ(ಸೆಪ್ಟೆಂಬರ್ 13) ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಂಪಿ ಉತ್ಸವವನ್ನು ನವೆಂಬರ್​ ಬದಲಾಗಿ ಫೆಬ್ರವರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ. ರಾಜ್ಯದಲ್ಲಿ ವಿಜಯನಗರ- ಬಳ್ಳಾರಿ ಸೇರಿದಂತೆ ಬಹುತೇಕ ಜಿಲ್ಲೆಗಳ ಹೆಚ್ಚಿನ ಸಂಖ್ಯೆಯ ತಾಲೂಕುಗಳಲ್ಲಿ ಬರ ಪರಿಸ್ಥಿತಿ ಇದೆ. ಹೀಗಾಗಿ ಇಂತಹ ಸ್ಥಿತಿಯಲ್ಲಿ ಉತ್ಸವ ನಡೆಸುವುದು ಕಷ್ಟ. ಫೆಬ್ರವರಿ ವೇಳೆಗೆ ಪರಿಸ್ಥಿತಿ ನೋಡಿಕೊಂಡು ಉತ್ಸವ ಮಾಡುವುದು ಸೂಕ್ತ ಎಂಬ ಅಭಿಪ್ರಾಯ ವ್ಯಕ್ತವಾಯಿತು.

ಇದನ್ನೂ ಓದಿ: ಕರ್ನಾಟಕದ 195 ಬರ ಪೀಡಿತ ತಾಲ್ಲೂಕುಗಳು: ಸರ್ಕಾರದಿಂದ ಅಧಿಕೃತ ಘೋಷಣೆ

ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮ್ಮದ್ ಖಾನ್, ಈ ಮೊದಲು ನವೆಂಬರ್​ನಲ್ಲಿ ಹಂಪಿ ಉತ್ಸವ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ, ಬರ ಪರಿಸ್ಥಿತಿಯಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉತ್ಸವವನ್ನು ಫೆಬ್ರವರಿಯಲ್ಲಿ ನಡೆಸಿ ಎಂದು ಸಲಹೆ ನೀಡಿದ್ದಾರೆ. ಹೀಗಾಗಿ ಫೆಬ್ರವರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ