ಹೊಸಪೇಟೆ: ಗೊಂದಲವಿಲ್ಲ, ನಾನೇ ಸಿಎಂ ಆಗಿ ಮುಂದುವರಿಯುತ್ತೇನೆ ಎಂದ ಸಿದ್ದರಾಮಯ್ಯ

| Updated By: Ganapathi Sharma

Updated on: Nov 02, 2023 | 4:43 PM

ಸಿಎಂ ಆದ ಬಳಿಕ ಸಿದ್ದರಾಮಯ್ಯ ಅವರು ಇದೇ ಮೊದಲ ಬಾರಿಗೆ ವಿಜಯನಗರ ಜಿಲ್ಲೆಗೆ ಭೇಟಿ ನೀಡಿದ್ದಾರೆ. ಇದೇ ವೇಳೆ, ಬಿಜೆಪಿ ಟೀಕೆಗಳಿಗೆ ತಿರುಗೇಟು ನೀಡಿದ ಅವರು, ಬಿಜೆಪಿಯವರಿಗೆ ಅಧಿಕಾರ ಇಲ್ಲದೆ ಇರಲು ಆಗುವುದಿಲ್ಲ. ಹೀಗಾಗಿ ಟೀಕೆ ಮಾಡುತ್ತಿರುತ್ತಾರೆ ಎಂದು ಹೇಳಿದರು.

ಹೊಸಪೇಟೆ: ಗೊಂದಲವಿಲ್ಲ, ನಾನೇ ಸಿಎಂ ಆಗಿ ಮುಂದುವರಿಯುತ್ತೇನೆ ಎಂದ ಸಿದ್ದರಾಮಯ್ಯ
ಸಿದ್ದರಾಮಯ್ಯ
Follow us on

ಹೊಸಪೇಟೆ, ನವೆಂಬರ್ 2: ಸದ್ಯ ನಾನು ಮುಖ್ಯಮಂತ್ರಿಯಾಗಿದ್ದೇನೆ. ನಾನೇ ಹುದ್ದೆಯಲ್ಲಿ ಮುಂದುವರಿಯಲಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಗುರುವಾರ ಹೇಳಿದರು. ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ (Hosapete) ಮಾತನಾಡಿದ ಅವರು, ಎರಡೂವರೆ ವರ್ಷದ ಬಳಿಕ ಅಧಿಕಾರ ಹಂಚಿಕೆ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದರು. ನಮ್ಮಲ್ಲಿ ಯಾವುದೇ ಗೊಂದಲವಿಲ್ಲ. ರಾಜ್ಯದಲ್ಲಿ 5 ವರ್ಷ ನಮ್ಮ ಸರ್ಕಾರ ಸುಭದ್ರವಾಗಿರುತ್ತದೆ. ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಸುವುದು ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದು ಅವರು ಹೇಳಿದರು.

ಸಿಎಂ ಆದ ಬಳಿಕ ಸಿದ್ದರಾಮಯ್ಯ ಅವರು ಇದೇ ಮೊದಲ ಬಾರಿಗೆ ವಿಜಯನಗರ ಜಿಲ್ಲೆಗೆ ಭೇಟಿ ನೀಡಿದ್ದಾರೆ. ಇದೇ ವೇಳೆ, ಬಿಜೆಪಿ ಟೀಕೆಗಳಿಗೆ ತಿರುಗೇಟು ನೀಡಿದ ಅವರು, ಬಿಜೆಪಿಯವರಿಗೆ ಅಧಿಕಾರ ಇಲ್ಲದೆ ಇರಲು ಆಗುವುದಿಲ್ಲ. ಹೀಗಾಗಿ ಟೀಕೆ ಮಾಡುತ್ತಿರುತ್ತಾರೆ ಎಂದು ಹೇಳಿದರು.

ರಾಜ್ಯದ ಜನರು ನಮಗೆ ಆಶೀರ್ವಾದ ಮಾಡಿ 136 ಸ್ಥಾನ ಗೆಲ್ಲಿಸಿದ್ದಾರೆ. ಐದು ವರ್ಷ ನಾವೇ ಆಡಳಿತ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.

ಪಕ್ಷದ ಚೌಕಟ್ಟು ಮೀರಿ ಸಚಿವರು, ಶಾಸಕರು ಮಾತನಾಡುವಂತಿಲ್ಲ: ಸುರ್ಜೇವಾಲ ಎಚ್ಚರಿಕೆ

ಈ ಮಧ್ಯೆ ಬೆಂಗಳೂರಿನಲ್ಲಿ ಮಾತನಾಡಿದ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ, ಪಕ್ಷದ ಚೌಕಟ್ಟು ಮೀರಿ ಸಚಿವರು, ಶಾಸಕರು ಮಾತನಾಡುವಂತಿಲ್ಲ ಎಂದು ಮತ್ತೊಮ್ಮೆ ಎಚ್ಚರಿಕೆ ನೀಡಿದ್ದಾರೆ. ಪಕ್ಷದ ಚೌಕಟ್ಟು ಮೀರಿ ಮಾತನಾಡಿದರೆ ಶಿಸ್ತು ಕ್ರಮ ಜರುಗಿಸುತ್ತೇವೆ ಎಂದೂ ಅವರು ಹೇಳಿದ್ದಾರೆ.

ಇದನ್ನೂ ಓದಿ: ಶಾಸಕರ ಜೊತೆ ಸತೀಶ್ ಜಾರಕಿಹೊಳಿ ದುಬೈ ಪ್ರವಾಸ: ಕೊಪ್ಪಳದಲ್ಲಿ ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ

ಸಭೆಯಲ್ಲಿ ನಿಗಮ ಮಂಡಳಿ ನೇಮಕಾತಿ ಬಗ್ಗೆಯೂ ಚರ್ಚೆಯಾಗಿದೆ. ನಿಗಮ ಮಂಡಳಿ ನೇಮಕಾತಿ ಬಗ್ಗೆ ಮತ್ತಷ್ಟು ಚರ್ಚೆಯಾಗಬೇಕಿದೆ. ಮಧ್ಯಪ್ರದೇಶ ಚುನಾವಣೆ ಮುಗಿದ ಬಳಿಕ ಮತ್ತೆ ವಾಪಸ್ ಬರುತ್ತೇನೆ. 2-3 ಹಂತದ ಮಾತುಕತೆ ಆಗುವುದು ಬಾಕಿ ಇದೆ. ಅಧಿಕಾರ ಹಂಚಿಕೆ ಬಗ್ಗೆ ಸಚಿವರು, ಶಾಸಕರು ಮಾತಾಡುವುದು ಸರಿಯಲ್ಲ. ಸಿಎಂ, ಡಿಸಿಎಂ, ನಮ್ಮನ್ನು ಭೇಟಿ ಮಾಡಿ ನಿಮ್ಮ ಅಭಿಪ್ರಾಯ ತಿಳಿಸಿ. ಪಕ್ಷದ ಚೌಕಟ್ಟಿನಲ್ಲಿ ಸಚಿವರು, ಶಾಸಕರು ಅಭಿಪ್ರಾಯ ತಿಳಿಸಬೇಕು. ಶಾಸಕರು ಸಚಿವ ಸ್ಥಾನ ಬಯಸುವುದರಲ್ಲಿ ತಪ್ಪಿಲ್ಲ ಎಂದು ಸುರ್ಜೇವಾಲ ಹೇಳಿದ್ದಾರೆ.

ರಾಜಕಾರಣಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ