AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಮಂಟಪಕ್ಕೇ ನುಗ್ಗಿ ಬಂಗಾರ, ಬೆಳ್ಳಿ ಕದ್ದ ಕಳ್ಳ: ಎಸ್ಕೇಪ್​​ ಆಗುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆ

ವಿಜಯನಗರದ ಹೊಸಪೇಟೆಯ ಸಿದ್ಧಿಪ್ರಿಯ ಕಲ್ಯಾಣ ಮಂಟಪದಲ್ಲಿ ಬ್ಯಾಗ್‌ನಲ್ಲಿದ್ದ ಚಿನ್ನ, ಬೆಳ್ಳಿ ಆಭರಣ, ನಗದು, ಮೊಬೈಲ್‌ಗಳನ್ನು ಕಳ್ಳನೊಬ್ಬ ದೋಚಿದ್ದಾನೆ. ಕಳ್ಳ ಬ್ಯಾಗ್​​ ಸಮೇತ ಎಸ್ಕೇಪ್​​ ಆಗುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಘಟನೆ ನಡೆದು 2 ದಿನಗಳಾದರೂ ಪೊಲೀಸರು ದೂರು ದಾಖಲಿಸಿಕೊಳ್ಳಲು ನಿರಾಕರಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಘಟನೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ಮದುವೆ ಮಂಟಪಕ್ಕೇ ನುಗ್ಗಿ ಬಂಗಾರ, ಬೆಳ್ಳಿ ಕದ್ದ ಕಳ್ಳ: ಎಸ್ಕೇಪ್​​ ಆಗುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆ
ಸಾಂದರ್ಭಿಕ ಚಿತ್ರImage Credit source: Tv9 Kannada
ವಿನಾಯಕ ಬಡಿಗೇರ್​
| Edited By: |

Updated on:May 06, 2026 | 11:59 AM

Share

ವಿಜಯನಗರ/ದೇವನಹಳ್ಳಿ, ಮೇ 06: ಮದುವೆ ಮಂಟಪಕ್ಕೇ ನುಗ್ಗಿ ಕಳ್ಳನೋರ್ವ ವಧುವಿಗೆ ಹಾಕಬೇಕಿದ್ದ ಬಂಗಾರ ಮತ್ತು ಬೆಳ್ಳಿಯ ಆಭರಣಗಳಿದ್ದ ಬ್ಯಾಗ್​​ ಕಳ್ಳತನ ನಡೆಸಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ಪಟ್ಟಣದ ಸಿದ್ಧಿಪ್ರಿಯ ಕಲ್ಯಾಣ ಮಂಟಪದಲ್ಲಿ ನಡೆದಿದೆ. ಬ್ಯಾಗ್ ಸಮೇತ ಕಳ್ಳ ಎಸ್ಕೇಪ್ ಆಗಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಮೇ 4ರಂದು ಮಧ್ಯಾಹ್ನ ಸುಮಾರು 12 ಗಂಟೆಗೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 40 ಗ್ರಾಂನ ಚಿನ್ನದ ಸರ, ಅರ್ಧ ಕೆ.ಜಿ. ಬೆಳ್ಳಿ, 10 ಸಾವಿರ ನಗದು ಮತ್ತು ಎರಡು ಮೊಬೈಲ್​​ ಫೋನ್​​ಗಳನ್ನು ಖದೀಮ ದೋಚಿದ್ದಾನೆ ಎನ್ನಲಾಗಿದೆ.

  • ಮದುವೆ ಮಂಟಪಕ್ಕೇ ನುಗ್ಗಿ ಬಂಗಾರ-ಬೆಳ್ಳಿ ಕದ್ದ ಕಳ್ಳ
  • ಹೊಸಪೇಟೆಯ ಸಿದ್ಧಿಪ್ರಿಯ ಕಲ್ಯಾಣ ಮಂಟಪದಲ್ಲಿ ಘಟನೆ
  • ಕಳ್ಳ ಎಸ್ಕೇಪ್ ಆಗಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆ

ಇದನ್ನೂ ಓದಿ: ಹೊಸಪೇಟೆ ಸರಣಿ ಅಪಘಾತ; ಕನ್ಯೆ ನೋಡಲು ಹೊರಟಿದ್ದ ಆ ಮೂರು ಜನ ಸೇರಿದ್ದು ಮಸಣಕ್ಕೆ!

ಪೊಲೀಸರು ದೂರು ದಾಖಲಿಸಿಕೊಳ್ಳದ ಆರೋಪ

ಕಳ್ಳತನ ನಡೆದಿರುವ ಬಗ್ಗೆ ವಿನೋದ ಎನ್ನುವರು ದೂರು ಕೊಡಲು ಮುಂದಾಗಿದ್ದರೂ ಪೊಲೀಸರು ದೂರು ದಾಖಲಿಸಿಕೊಂಡಿಲ್ಲ ಎಂಬ ಆರೋಪವೂ ಕೇಳಿಬಂದಿದೆ. ಒಂದೇ ಬಿಲ್‌ನಲ್ಲಿ ನಾಲ್ಕು ಐಟಂಗಳು ಇವೆ, ಇದರಲ್ಲಿ ಎರಡು ಐಟಂ ಕಳ್ಳತನ ಆಗಿದೆ ಎಂದು ಹೇಳಿದ್ದೀರಿ. ಹೀಗಾಗಿ ಉಳಿದ ಎರಡು ಐಟಂ ತೆಗೆದುಕೊಂಡು ಬನ್ನಿ , ಆಮೇಲೆ ದೂರು ದಾಖಲಿಸಿಕೊಳ್ಳುತ್ತೇವೆಂದು ಪೊಲೀಸರು ಹೇಳಿದ್ದಾರಂತೆ. ಹೀಗಾಗಿ ಘಟನೆ ನಡೆದು ಎರಡು ದಿನವಾದರೂ ಚಿತ್ತವಾಡ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಈ ಘಟನೆ ಬಗ್ಗೆ ಇನ್ನೂ ದುರು ದಾಖಲಾಗಿಲ್ಲ.

ಮನೆ ಮುಂದೆ ನಿಲ್ಲಿಸಿದ್ದ ಸ್ಕೂಟಿ ಕಳವು

ತಡರಾತ್ರಿ ಬಂದ ಕಳ್ಳರು ಮನೆ ಮುಂದೆ ನಿಲ್ಲಿಸಿದ್ದ ಸ್ಕೂಟಿಯನ್ನು ಕದ್ದೊಯ್ದಿರುವ ಘಟನೆ ಹೊಸಕೋಟೆ ನಗರದ ನಂದಶ್ರೀ ಕಲ್ಯಾಣ ಮಂಟಪ ಬಳಿ ನಡೆದಿದೆ. ಬೈಕ್​​ನಲ್ಲಿ ಬಂದಿದ್ದ ಇಬ್ಬರು ಆರೋಪಿಗಳು ಕಳ್ಳತನ ನಡೆಸಿದ್ದು, ಬೈಕ್​​ ಕದಿಯುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ವ್ಹೀಲಿಂಗ್​​ ಮಾಡುವ ಪುಂಡರು ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದ್ದು, ಕಳ್ಳರು ಬಂದಿದ್ದ ಬೈಕ್​​ಗೆ ನಂಬರ್​​ ಪ್ಲೇಟ್​​ ಕೂಡ ಇರಲಿಲ್ಲ. ಜೊತೆಗೆ ಬೈಕ್​​ನ ಮಾಡಿಫಿಕೇಷನ್ ಮಾಡಲಾಗಿರೋದು ಸಿಸಿಟಿವಿ ದೃಶ್ಯಾವಳಿಗಳಲ್ಲಿ ಕಂಡುಬಂದಿದೆ. ಸ್ಕೂಟಿಯ ಹ್ಯಾಂಡಲ್​​ ಲಾಕ್​​ನ ಕಾಲಿನಿಂದ ಮುರಿದು ಆರೋಪಿಗಳು ಕಳ್ಳತನ ನಡೆಸಿದ್ದು, ಹೊಸಕೋಟೆ ಸಂಚಾರಿ ಪೊಲೀಸ್ ಠಾಣಾವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 11:59 am, Wed, 6 May 26

Follow Us
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ
ಮೆಟ್ಟಿಲುಗಳಿಗೆ ಕೈ ಮುಗಿದು ವಿಧಾನಸೌಧಕ್ಕೆ ಸಮರ್ಥ್​ ಎಂಟ್ರಿ
ಮೆಟ್ಟಿಲುಗಳಿಗೆ ಕೈ ಮುಗಿದು ವಿಧಾನಸೌಧಕ್ಕೆ ಸಮರ್ಥ್​ ಎಂಟ್ರಿ
ಉಡುಪಿಯಲ್ಲಿ ಅಬ್ಬರಿಸಿದ ವರುಣ: ರಸ್ತೆಯಲ್ಲೇ ನೀರು ನಿಂತು ಸವಾರರ ಪರದಾಟ
ಉಡುಪಿಯಲ್ಲಿ ಅಬ್ಬರಿಸಿದ ವರುಣ: ರಸ್ತೆಯಲ್ಲೇ ನೀರು ನಿಂತು ಸವಾರರ ಪರದಾಟ
ಸ್ಟ್ರಾಂಗ್‌ ರೂಮ್‌ವೊಂದರ ಬೀಗ ಕಳೆದಿರೋದನ್ನು ನಾವು ಎಂದೂ ಕೇಳಿರಲಿಲ್ಲ
ಸ್ಟ್ರಾಂಗ್‌ ರೂಮ್‌ವೊಂದರ ಬೀಗ ಕಳೆದಿರೋದನ್ನು ನಾವು ಎಂದೂ ಕೇಳಿರಲಿಲ್ಲ
IPL ಫೈನಲ್ ಬೆಂಗಳೂರಿನಿಂದ ಸ್ಥಳಾಂತರಗೊಂಡಿದ್ದೇಕೆ? ಅಸಲಿ ಕಾರಣ ಇಲ್ಲಿದೆ
IPL ಫೈನಲ್ ಬೆಂಗಳೂರಿನಿಂದ ಸ್ಥಳಾಂತರಗೊಂಡಿದ್ದೇಕೆ? ಅಸಲಿ ಕಾರಣ ಇಲ್ಲಿದೆ
ಚುನಾವಣಾ ರಾಜಕೀಯಕ್ಕೆ ವಿಶ್ವನಾಥ್ ಕುಟುಂಬ ವಿದಾಯ
ಚುನಾವಣಾ ರಾಜಕೀಯಕ್ಕೆ ವಿಶ್ವನಾಥ್ ಕುಟುಂಬ ವಿದಾಯ
ಪೋಕ್ಸೋ ಪ್ರಕರಣವಿದೆ: ಯಡಿಯೂರಪ್ಪ ಅಭಿಮಾನೋತ್ಸವ ಸರಿಯಲ್ಲ ಎಂದ ಬಿಜೆಪಿ ನಾಯಕ
ಪೋಕ್ಸೋ ಪ್ರಕರಣವಿದೆ: ಯಡಿಯೂರಪ್ಪ ಅಭಿಮಾನೋತ್ಸವ ಸರಿಯಲ್ಲ ಎಂದ ಬಿಜೆಪಿ ನಾಯಕ
ಕಲಬುರಗಿ: ಕಾಣೆಯಾಗಿದ್ದ 1.44 ಕೋಟಿ ರೂ. ಮೌಲ್ಯದ 785 ಮೊಬೈಲ್‌ಗಳ ಹಸ್ತಾಂತರ!
ಕಲಬುರಗಿ: ಕಾಣೆಯಾಗಿದ್ದ 1.44 ಕೋಟಿ ರೂ. ಮೌಲ್ಯದ 785 ಮೊಬೈಲ್‌ಗಳ ಹಸ್ತಾಂತರ!
ಮೈಲಾರಿ ಹೋಟೆಲ್‌ನಲ್ಲಿ ರಾಜಣ್ಣ ಜತೆ ಕುಳಿತು ದೋಸೆ ಸವಿದ ಸಿಎಂ ಸಿದ್ದರಾಮಯ್ಯ
ಮೈಲಾರಿ ಹೋಟೆಲ್‌ನಲ್ಲಿ ರಾಜಣ್ಣ ಜತೆ ಕುಳಿತು ದೋಸೆ ಸವಿದ ಸಿಎಂ ಸಿದ್ದರಾಮಯ್ಯ