Vijayanagara News: ವಿಜಯನಗರ ಬಡೇಲಡಕುವಿನಲ್ಲಿ ಕಲುಷಿತ ನೀರು ಸೇವಿಸಿ 10ಕ್ಕೂ ಹೆಚ್ಚು ಮಂದಿ ಅಸ್ವಸ್ಥ

| Updated By: Ganapathi Sharma

Updated on: Jul 03, 2023 | 3:51 PM

ಕರ್ನಾಟಕದ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಬಡೇಲಡಕು ಗೊಲ್ಲರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ 10ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ.

Vijayanagara News: ವಿಜಯನಗರ ಬಡೇಲಡಕುವಿನಲ್ಲಿ ಕಲುಷಿತ ನೀರು ಸೇವಿಸಿ 10ಕ್ಕೂ ಹೆಚ್ಚು ಮಂದಿ ಅಸ್ವಸ್ಥ
ಕಲುಷಿತ ನೀರು ಸೇವಿಸಿ ಅನಾರೋಗ್ಯದಿಂದ ಬಳಲುತ್ತಿರುವ ಜನರನ್ನು ಕೂಡ್ಲಿಗಿ ಶಾಸಕ ಎಸ್‌ಟಿ ಶ್ರೀನಿವಾಸ್ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು
Follow us on

ವಿಜಯನಗರ: ಕರ್ನಾಟಕದ ವಿಜಯನಗರ (Vijayanagara) ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಬಡೇಲಡಕು (Badeladuku)  ಗೊಲ್ಲರಹಟ್ಟಿಯಲ್ಲಿ ಕಲುಷಿತ ನೀರು (contaminated water) ಸೇವಿಸಿ 10ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ಬಡೇಲಡುಕು ಮತ್ತು ಗೊಲ್ಲರಹಳ್ಳಿ ಗ್ರಾಮಗಳ ನಿವಾಸಿಗಳು ಕಲುಷಿತ ನೀರು ಸೇವನೆಯಿಂದ ಹೊಟ್ಟೆನೋವು, ವಾಂತಿ, ಭೇದಿಯಿಂದ ಬಳಲುತ್ತಿದ್ದಾರೆ. ಕುಪ್ಪಿನಕೆರೆ ಗ್ರಾಮದ ಬಳಿ ನೀರು ಸರಬರಾಜು ಮಾಡುವ ಪೈಪ್‌ಲೈನ್‌ ಹಾಳಾಗಿದ್ದರಿಂದ ಗ್ರಾಮಗಳಿಗೆ ಪೂರೈಕೆಯಾಗುವ ನೀರು ಕಲುಷಿತಗೊಂಡಿದೆ. ಸರಬರಾಜು ಪೈಪ್‌ಲೈನ್‌ನ ನೀರನ್ನು ಬಳ್ಳಾರಿ ಪರೀಕ್ಷಾ ಕೇಂದ್ರಕ್ಕೆ ಪರೀಕ್ಷೆಗೆ ಕಳುಹಿಸಲಾಗಿದೆ.

ಕಲುಷಿತ ನೀರು ಸೇವಿಸಿ ಅನಾರೋಗ್ಯದಿಂದ ಬಳಲುತ್ತಿರುವ ಜನರನ್ನು ಕೂಡ್ಲಿಗಿ ಶಾಸಕ ಎಸ್‌ಟಿ ಶ್ರೀನಿವಾಸ್ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಗ್ರಾಮಗಳಲ್ಲಿ ಹಲವಾರು ಬೋರ್‌ವೆಲ್‌ಗಳಿವೆ ಆದರೆ ಆರೋಗ್ಯ ಇಲಾಖೆಯು ಬೋರ್‌ವೆಲ್‌ಗಳ ನೀರು ಕುಡಿಯಲು ಯೋಗ್ಯವಾಗಿಲ್ಲ ಎನ್ನಲಾಗಿದೆ.

2021 ರಲ್ಲಿ ವಿಜಯನಗರ ಜಿಲ್ಲೆಯಲ್ಲಿ ಕಲುಷಿತ ನೀರಿನ ಸೇವನೆಯಿಂದ ಆರು ಮಂದಿ ಸಾವನ್ನಪ್ಪಿದ್ದರು ಮತ್ತು 150 ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದರು.

ಇದನ್ನೂ ಓದಿ: Koppala News: ಕಲುಷಿತ ನೀರು ಸೇವಿಸಿ ಮೂವರ ಸಾವು ಪ್ರಕರಣ; ಪಿಡಿಓ ಅಮಾನತು

ಈ ವರ್ಷದ ಆರಂಭದಲ್ಲಿ, ರಾಜ್ಯದ ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಕಲುಷಿತ ನೀರು ಕುಡಿದು ಜನರು ಅಸ್ವಸ್ಥರಾಗಿದ್ದ ಘಟನೆಗಳು ವರದಿಯಾಗಿದ್ದವು. ಕಲುಷಿತ ನೀರು ಸೇವಿಸಿ ಕೊಪ್ಪಳದಲ್ಲಿ ಇಬ್ಬರು ಹಾಗೂ ರಾಯಚೂರಿನಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಜೂನ್ ಮೊದಲ ವಾರದಲ್ಲಿ ಕರ್ನಾಟಕ ಸರ್ಕಾರವು ರಾಜ್ಯದಲ್ಲಿನ ನೀರಿನ ಮಾಲಿನ್ಯದ ಘಟನೆಗಳ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ವರದಿ ಕೇಳಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ