ಹಾಲಿನ ದರ ಏರಿಕೆ ಬಗ್ಗೆ ಕೊನೆಗೂ ಸ್ಪಷ್ಟನೆ ನೀಡಿದ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್
ಪರಿಷ್ಕರಣೆಗೆ ಕರ್ನಾಟಕ ಹಾಲು ಮಾರಾಟ ಮಹಾಮಂಡಳ (KMF) ಚಿಂತನೆ ನಡೆಸಿದೆ ಎನ್ನುವ ಮಾತು ಕೇಳಿಬಂದಿವೆ. ಇನ್ನು ಈ ಬಗ್ಗೆ ಕೆಎಂಎಫ್ ಅಧ್ಯಕ್ಷ ಸ್ಪಷ್ಟನೆ ನೀಡಿ ಎಲ್ಲಾ ಗೊಂದಲಿಗೆ ತೆರೆ ಎಳೆದಿದ್ದಾರೆ.

ಬೆಂಗಳೂರು, (ಡಿಸೆಂಬರ್ 15): ಕರ್ನಾಟಕದಲ್ಲಿ ಮತ್ತೆ ನಂದಿನಿ ಹಾಲಿ ಬೆಲೆ ಹೆಚ್ಚಿಸಲು ಕೆಎಂಎಫ್ ಚಿಂತನೆ ನಡೆಸಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಇದರ ಮಧ್ಯೆ ಕೆಎಂಎಫ್ (KMF) ಅಧ್ಯಕ್ಷ ಭೀಮಾನಾಯ್ಕ್ ಇಂದು ಹೊಸಪೇಟೆಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ದರ ಕಡಿಮೆ ಇದೆ. ಎಲ್ಲಾ ರಾಜ್ಯಕ್ಕಿಂತ ನಂದಿನಿ ಹಾಲಿನ ದರ 12-16 ರೂ. ಕಡಿಮೆ ಇದೆ. ದರ ಏರಿಕೆ ಬಗ್ಗೆ ಸರ್ಕಾರದೊಂದಿಗೆ ಚರ್ಚಿಸಿ ನಿರ್ಧಾರ ಮಾಡುತ್ತೇವೆ ಎಂದರು,
ಸದಸನದಲ್ಲಿ ವೆಂಕಟೇಶ್ ಅಣ್ಣರ್ ಏನ್ ಮಾತಾಡಿದ್ದಾರೋ ಗೊತ್ತಿಲ್ಲ.ಸರ್ಕಾರ ಬಂದು ಒಂದೇ ತಿಂಗಳಲ್ಲಿ ಮೂರು ರೂಪಾಯಿ ಹೆಚ್ಚಳ ಮಾಡಿದ್ದಾರೆ. ಸದ್ಯಕ್ಕೆ ಯಾವುದೇ ದರ ಏರಿಕೆ ಬೇಡಿಕೆ ಇಟ್ಟಿಲ್ಲ. ಭಾರತ ದೇಶದಲ್ಲಿ ನಾವು ಬಹಳ ಕಮ್ಮಿ ದರದಲ್ಲಿ ಹಾಲು ಮಾರುತ್ತಿದ್ದೇವೆ. ಎಲ್ಲಾ ರಾಜ್ಯಕ್ಕಿಂತ 12 ರಿಂದ 16 ರೂಪಾಯಿ ಕಮ್ಮಿ ಇದೆ. ದರ ಏರಿಕೆ ಬಗ್ಗೆ ಸರ್ಕಾರದೊಂದಿಗೆ ಚರ್ಚಿಸಿ ನಿರ್ಧಾರ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.
ಜನವರಿಯಲ್ಲಿ ಒಕ್ಕೂಟಗಳ ಸಭೆ
ಆರ್ಥಿಕ ನಷ್ಟದ ಹಿನ್ನೆಲೆ ಈ ಹಿಂದೆ 5 ರೂ. ಹೆಚ್ಚಳ ಮಾಡುವಂತೆ ಸರ್ಕಾರಕ್ಕೆ ಕೆಎಂಎಫ್ ಮನವಿ ಮಾಡಿತ್ತು. ಆದರೆ ಸರ್ಕಾರ ಅಕ್ಟೋಬರ್‌ನಲ್ಲಿ ಕೇವಲ 3 ರೂಪಾಯಿ ಮಾತ್ರ ಏರಿಕೆ ಮಾಡಿತ್ತು. ಈಗ 14 ಹಾಲು ಒಕ್ಕೂಟ ಗಳಿಂದ ಮನವಿ ಬಂದಲ್ಲಿ ಕೂಡಲೇ ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಲು ಕೆಎಂಎಫ್ ತಯಾರಿ ನಡೆಸುತ್ತಿದೆ. ಕಳೆದ ಬಾರಿ 3 ರೂ. ನೇರವಾಗಿ ರೈತರಿಗೆ ನೀಡಿದ ಹಿನ್ನೆಲೆ ಒಕ್ಕೂಟಗಳಿಗೆ ನಷ್ಟದ ಸರಿದೂಗಿಸಲು ದರ ಪರಿಷ್ಕರಣೆ ಅನಿವಾರ್ಯ ಎನ್ನುತ್ತಿದ್ದಾರೆ ಕೆಎಂಎಫ್ ಅಧಿಕಾರಿಗಳು. ಸದ್ಯ ಜನವರಿಯಲ್ಲಿ ಹಾಲು ಒಕ್ಕೂಟಗಳ ಸಭೆ ಕರೆದು ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಲು ಕೆಎಂಎಫ್ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.