ಸಮಯಕ್ಕೆ ಸರಿಯಾಗಿ ಬಾರದ ಆಂಬ್ಯುಲೆನ್ಸ್; ನಡು ರಸ್ತೆಯಲ್ಲಿ ನೋವಿನಿಂದ ನರಳಾಡಿದ ವ್ಯಕ್ತಿ
ಇಂದು (ನ.28) ಬೆಳಿಗ್ಗೆ ಕೊಟ್ಟೂರು ಬಸ್ ನಿಲ್ದಾಣ ಬಳಿ ಹೋಗುತ್ತಿದ್ದರು. ಈ ವೇಳೆ ಚಾಲಕನ ಅಜಾಗರೂಕತೆಯಿಂದ ಕೆಎಸ್ಆರ್ಟಿಸಿ ಬಸ್ ಬಸವರಾಜಪ್ಪ ಅವರಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಬಸವರಾಜಪ್ಪ ಅವರ ಎಡಗಾಲಿಗೆ ಗಂಭೀರ ಗಾಯವಾಗಿದೆ. ಈ ಹಿನ್ನೆಲೆಯಲ್ಲಿ ಸ್ಥಳಿಯರು ಆಂಬ್ಯುಲೆನ್ಸ್ಗೆ ಕರೆ ಮಾಡಿದ್ದಾರೆ. ಆದರೆ ಎಷ್ಟು ಹೊತ್ತಾದರೂ ಆಂಬ್ಯುಲೆನ್ಸ್ ಸ್ಥಳಕ್ಕೆ ಬರಲಿಲ್ಲ.
ವಿಜಯನಗರ ನ.28: ಸಮಯಕ್ಕೆ ಸರಿಯಾಗಿ ಆಂಬ್ಯುಲೆನ್ಸ್ ಬಾರದ ಹಿನ್ನೆಲೆಯಲ್ಲಿ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿ ನೋವಿನಿಂದ ನಡು ರಸ್ತೆಯಲ್ಲಿ ನರಳಾಡಿರುವ ಘಟನೆ ಕೂಟ್ಟೂರು (Kottur) ಪಟ್ಟಣದಲ್ಲಿ ನಡೆದಿದೆ. ಬಸವರಾಜಪ್ಪ ಗಾಯಗೊಂಡ ವ್ಯಕ್ತಿ. ಬಸವರಾಜಪ್ಪ ಅವರು ಇಂದು (ನ.28) ಬೆಳಿಗ್ಗೆ ಕೊಟ್ಟೂರು ಬಸ್ ನಿಲ್ದಾಣ ಬಳಿ ಹೋಗುತ್ತಿದ್ದರು. ಈ ವೇಳೆ ಚಾಲಕನ ಅಜಾಗರೂಕತೆಯಿಂದ ಕೆಎಸ್ಆರ್ಟಿಸಿ (KSRTC) ಬಸ್ (Bus) ಬಸವರಾಜಪ್ಪ ಅವರಿಗೆ ಡಿಕ್ಕಿ ಹೊಡೆದಿದೆ.
ಇದರಿಂದ ಬಸವರಾಜಪ್ಪ ಅವರ ಎಡಗಾಲಿಗೆ ಗಂಭೀರ ಗಾಯವಾಗಿದೆ. ಈ ಹಿನ್ನೆಲೆಯಲ್ಲಿ ಸ್ಥಳಿಯರು ಆಂಬ್ಯುಲೆನ್ಸ್ಗೆ ಕರೆ ಮಾಡಿದ್ದಾರೆ. ಆದರೆ ಎಷ್ಟು ಹೊತ್ತಾದರೂ ಆಂಬ್ಯುಲೆನ್ಸ್ ಸ್ಥಳಕ್ಕೆ ಬರಲಿಲ್ಲ. ಹೀಗಾಗಿ ಗಾಯಗೊಂಡಿದ್ದ ಬಸವರಾಜಪ್ಪ ನಡು ರಸ್ತೆಯಲ್ಲಿ ನೋವಿನಿಂದ ನರಳಾಡಿದ್ದಾರೆ. ಕೊನೆಗೆ ಸ್ಥಳೀಯರು ಬಸ್‌ನಲ್ಲಿ ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಸ್ ಚಾಲಕನ ವಿರುದ್ಧ ಕೂಟ್ಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಆಂಬ್ಯುಲೆನ್ಸ್ ಬರಲು ರಸ್ತೆಯೇ ಇಲ್ಲ, ರೋಗಿಯನ್ನ ಕಂಬಳಿಯಲ್ಲಿ ಹೊತ್ತೊಯ್ದ ಗ್ರಾಮಸ್ಥರು: ಕರ್ನಾಟಕದಲ್ಲಿ ಇದೆಂಥಾ ಪರಿಸ್ಥಿತಿ
ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು
ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವಿಜಯನಗರದ ಹಗರಿಬೊಮ್ಮನಹಳ್ಳಿಯ ಮಾಲ್ವಿ ಗ್ರಾಮದ ಬಳಿ ತಡರಾತ್ರಿ ನಡೆದಿದೆ. ಶಿವಕುಮಾರ್ (36) ಮೃತ ದುರ್ದೈವಿ. ಅಪರಿಚ ವಾಹನ ಡಿಕ್ಕಿಯಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಶಿವಕುಮಾರ್ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಘಟನಾ ಸ್ಥಳಕ್ಕೆ ಹಗರಿಬೊಮ್ಮನಹಳ್ಳಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ