ವಿಜಯನಗರ: ಬೀದಿ ದೀಪ ಸರಿಪಡಿಸಲು ಹೋಗಿ ವಿದ್ಯುತ್ ಪ್ರವಹಿಸಿ ವ್ಯಕ್ತಿ ಸಾವು
ಪ್ರತ್ಯೇಕ ಘಟನೆ: ಬೀದಿ ದೀಪ ಸರಿಪಡಿಸಲು ಹೋಗಿ ವಿದ್ಯುತ್ ಪ್ರವಹಿಸಿ ವ್ಯಕ್ತಿ ಮೃತಪಟ್ಟಿರುವ ಘಟನೆ ಹರಪನಹಳ್ಳಿ ತಾಲೂಕಿನ ಒಡೆಯರಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯದ ನೆಹರುನಗರ ಪೂರ್ವ ಬಡಾವಣೆಯಲ್ಲಿ ನಡೆದಿದೆ.
ವಿಜಯನಗರ, ಜನವರಿ 21: ಬೀದಿ ದೀಪ (Street light) ಸರಿಪಡಿಸಲು ಹೋಗಿ ವಿದ್ಯುತ್ ಪ್ರವಹಿಸಿ ವ್ಯಕ್ತಿ ಮೃತಪಟ್ಟಿರುವ ಘಟನೆ ಹರಪನಹಳ್ಳಿ ತಾಲೂಕಿನ ಒಡೆಯರಹಳ್ಳಿ ಗ್ರಾಮದಲ್ಲಿ ನಡೆದಿದೆ. ರೇಣುಕಪ್ಪ (37) ಮೃತದುರ್ದೈವಿ. ಗ್ರಾಮ ಪಂಚಯಾತಿ (Gram Panchayat) ಸಿಬ್ಬಂದಿ ಸೂಚನೆ ಮೇರೆಗೆ ರೇಣುಕಪ್ಪ ವಿದ್ಯುತ್ ಕಂಬ ಹತ್ತಿ ದೀಪ ಸರಿಪಡಿಸುತ್ತಿದ್ದರು. ಈ ವೇಳೆ ತಂತಿ ತಗುಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಹರಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇನ್ನು ರೇಣುಕಪ್ಪ ಗ್ರಾಮದಲ್ಲಿ ವಿದ್ಯುತ್ ಪಂಪ್ ಸೆಟ್ ಹಾಗೂ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕೆಲಸ ಮಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಸಿಬ್ಬಂದಿ ರೇಣಕಪ್ಪ ಅವರಿಗೆ ಬೀದಿ ದೀಪ ಸರಿಪಡಿಸುವಂತೆ ಸೂಚಿಸಿದ್ದಾರೆ ಎಂದು ಹೇಳಲಾಗಿದೆ.
ಇದನ್ನೂ ಓದಿ: ಶಿವಮೊಗ್ಗ: ವಿದ್ಯುತ್ ಶಾಕ್‌ನಿಂದ ಬಾಲಕನಿಗೆ ಗಂಭೀರ ಗಾಯ ಕೇಸ್: 5 ಲಕ್ಷ ರೂ. ಪರಿಹಾರ ವಿತರಣೆ
ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ, ಕೊಲೆ ಆರೋಪ
ಮಂಡ್ಯ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯದ ನೆಹರುನಗರ ಪೂರ್ವ ಬಡಾವಣೆಯಲ್ಲಿ ನಡೆದಿದೆ. ಪದ್ಮ (36) ಮೃತ ದುರ್ದೈವಿ. ಪತಿ ಸಿದ್ದರಾಜು ಪತ್ನಿಯನ್ನು ಕೊಲೆ ಮಾಡಿದ್ದಾನೆ ಎಂದು ಪದ್ಮ ತವರು ಮನೆಯವರು ಆರೋಪ ಮಾಡಿದ್ದಾರೆ. ರಾಮನಗರ ತಾಲೂಕಿನ ಅಂಕನಹಳ್ಳಿ ಗ್ರಾಮದ ಪದ್ಮ ಮತ್ತು ಮಂಡ್ಯದ ಸಿದ್ದರಾಜು ಪ್ರೀತಿಸಿ ಮದುವೆಯಾಗಿದ್ದಾರೆ. ಇವರು ಮದುವೆಯಾಗಿ 13 ವರ್ಷಗಳು ಕಳೆದಿವೆ.
ಸಿದ್ದರಾಜು ಪೇಟಿಂಗ್ ಕೆಲಸ ಮಾಡುತ್ತಿದ್ದು, ಪತ್ನಿ ಪದ್ಮಾಳಿಗೆ ಹಣಕ್ಕಾಗಿ ನಿತ್ಯ ಕಿರುಕುಳ ನೀಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ. ಇದೀಗ ಪದ್ಮ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆದರೆ ಪದ್ಮರನ್ನು ಕೊಲೆ ಮಾಡಿ ನಂತರ ನೇಣು ಬಿಗಿಯಲಾಗಿದೆ ಎಂದು ತವರು ಮನೆಯವರು ಆರೋಪ ಮಾಡಿದ್ದಾರೆ. ಸ್ಥಳಕ್ಕೆ ಮಂಡ್ಯ ಪೂರ್ವ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಪತಿ ಸಿದ್ದರಾಜು ಅವರನ್ನು ವಶಕ್ಕೆ ಪಡೆದು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮಂಡ್ಯ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ