ವಿಜಯನಗರದಲ್ಲಿ ಎರಡು ಆಟೋ-ಲಾರಿ ನಡುವೆ ಅಪಘಾತ ಪ್ರಕರಣ: ಮೃತರ ಸಂಖ್ಯೆ ಎಂಟಕ್ಕೆ ಏರಿಕೆ

ಎರಡು ಆಟೋ ಮತ್ತು ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ವಡ್ಡರಹಳ್ಳಿ ಬ್ರಿಡ್ಜ್ ಬಳಿ ನಡೆದಿದೆ.

ವಿಜಯನಗರದಲ್ಲಿ ಎರಡು ಆಟೋ-ಲಾರಿ ನಡುವೆ ಅಪಘಾತ ಪ್ರಕರಣ: ಮೃತರ ಸಂಖ್ಯೆ ಎಂಟಕ್ಕೆ ಏರಿಕೆ
ಹೊಸಪೇಟೆ ತಾಲೂಕಿನ ವಡ್ಡರಹಳ್ಳಿ ಬ್ರೀಡ್ಜ್ ಬಳಿ ಎರಡು ಆಟೋ ಮತ್ತು ಲಾರಿ ನಡುವೆ ಅಪಘಾತ
Follow us
| Updated By: Rakesh Nayak Manchi

Updated on:Jun 30, 2023 | 10:47 PM

ಹೊಸಪೇಟೆ: ವಿಜಯನಗರ (Vijayanagara) ಜಿಲ್ಲೆಯ ಹೊಸಪೇಟೆ ತಾಲೂಕಿನ ವಡ್ಡರಹಳ್ಳಿ ಬ್ರಿಡ್ಜ್ ಬಳಿ ನಡೆದ ಎರಡು ಆಟೋ ಮತ್ತು ಲಾರಿ ನಡುವಿನ ಭೀಕರ ಅಪಘಾತದಲ್ಲಿ (Accident) ಮೃತಪಟ್ಟವರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ. ಯಾಸ್ಮೀನ್ (45), ಜಹೀರಾ (16), ಸಪ್ರಾಭೀ (55), ಕೌಸರಬಾನು (35), ಇಬ್ರಾಹಿಂ (33), ಉಮೇಶ್ (27), ಶಾಮ್ (40) ಸ್ಥಳದಲ್ಲೇ ಸಾವನ್ನಪ್ಪಿದ್ದರು. ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸಾಹಿರಾ (25) ಇದೀಗ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾಳೆ. ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಏಳು ಮಂದಿ ಗಾಯಗೊಂಡಿದ್ದು, ವಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬಳ್ಳಾರಿಯಿಂದ ಎರಡು ಆಟೋದಲ್ಲಿ 19 ಜನರು ತುಂಗಭದ್ರಾ ಡ್ಯಾಮ್​ಗೆ ಕಡೆಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಹೊಸಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಗಾಯಾಳುಗಳು ದಾಖಲಾಗಿರುವ ಹೊಸಪೇಟೆಯ ಸರ್ಕಾರಿ ಆಸ್ಪತ್ರೆಗೆ ಶಾಸಕ ಗವಿಯಪ್ಪ, ಎಸ್​ಪಿ ಶ್ರೀಹರಿಬಾಬು, ಎಸಿ ಸಿದ್ದರಾಮೇಶ್ವರ ಭೇಟಿ ಮಾಹಿತಿ ಸಂಗ್ರಹಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು-ಮೈಸೂರು ಹೆದ್ದಾರಿ ಮದ್ದೂರು ಬಳಿ ಲೋಕಲ್ ಬಾರ್ ಆಯ್ತೇ? ‘ಕುಡುಕ ಮುಕ್ತ ಹೈವೇ’ಗೆ ಎಡಿಜಿಪಿ ಅಲೋಕ್ ಕುಮಾರ್ ಸೂಚನೆ

ಮೃತರ ಕುಟುಂಬಗಳಿಗೆ ಪರಿಹಾರ ಘೋಷಣೆ

ಘಟನೆ ಬಗ್ಗೆ ಟಿವಿ9 ಜೊತೆ ಮಾತನಾಡಿದ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ನಾಗೇಂದ್ರ, ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ. ಮೃತಪಟ್ಟವರು ಬಳ್ಳಾರಿಯ ಕೌಲಬಜಾರ್​ನ ನಿವಾಸಿಗಳಾಗಿದ್ದಾರೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:27 pm, Fri, 30 June 23