ಕೈ ಕೊಟ್ಟ ಮುಂಗಾರು ಮಳೆ; ಬತ್ತಿ ಹೋಗುತ್ತಿವೆ ಜಲಾಶಯಗಳು

ಕಾಫಿನಾಡಿನಲ್ಲೂ ವರುಣ ಮುನಿಸಿಕೊಂಡಿದ್ದಾನೆ. ಮುಂಗಾರು ಮುಗಿದು ಹಿಂಗಾರು ಆರಂಭವಾದ್ರು ಮಳೆ ಬಾರದ ಹಿನ್ನೆಲೆ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪವಿರುವ ಐತಿಹಾಸಿಕ ಕೆರೆ ಸಂಪೂರ್ಣ ಬತ್ತಿ ಹೋಗಿದೆ.

ಕೈ ಕೊಟ್ಟ ಮುಂಗಾರು ಮಳೆ; ಬತ್ತಿ ಹೋಗುತ್ತಿವೆ ಜಲಾಶಯಗಳು
ಟಿಬಿ ಡ್ಯಾಂ
Follow us
TV9 Web
| Updated By: ಆಯೇಷಾ ಬಾನು

Updated on: Jul 02, 2023 | 8:16 AM

ವಿಜಯನಗರ: ರಾಜ್ಯದಲ್ಲಿ ಮುಂಗಾರು(Monsoon) ಮಳೆ ವಿಳಂಬವಾಗಿ ಅನೇಕ ಜಲಾಶಯಗಳು ಬತ್ತಿ ಹೋಗಿವೆ. ಹೊಸಪೇಟೆಯ ತುಂಗಭದ್ರಾ ಜಲಾಶಯ(Tungabhadra Dam) ಸಂಪೂರ್ಣ ಖಾಲಿ ಖಾಲಿಯಾಗಿದೆ. ಬಳ್ಳಾರಿ, ವಿಜಯನಗರ, ರಾಯಚೂರು, ಕೊಪ್ಪಳ ಸೇರಿದಂತೆ ಆಂಧ್ರ ಪ್ರದೇಶದ ಜೀವನಾಡಿಯಾಗಿರುವ ಟಿಬಿ ಡ್ಯಾಂ ಸಂಪೂರ್ಣ ಖಾಲಿಯಾಗಿದೆ. ಟಿಬಿ ಡ್ಯಾಂನಲ್ಲೀಗ ಕೇವಲ 3.092 TMC ನೀರು ಮಾತ್ರ ಶೇಖರಣೆಯಾಗಿದೆ. 2 ಟಿಎಂಸಿ ಡೆಡ್ ಸ್ಟೋರೇಜ್. ಇನ್ನುಳಿದ ಒಂದು ಟಿಎಂಸಿ ನೀರು ಮಾತ್ರ ಕುಡಿಯಲು ಬಳಕೆಗೆ ಮೀಸಲಿಡಲಾಗಿದೆ.

105 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ ಒಂದು ಟಿಎಂಸಿ ನೀರು ಮಾತ್ರ ಕುಡಿಯಲು ಯೋಗ್ಯ. ಕಳೆದ ವರ್ಷ ಇದೇ ದಿನದ ವೇಳೆಗೆ ಡ್ಯಾಂನಲ್ಲಿ‌ 45.855 ಟಿಎಂಸಿ ನೀರು ಸಂಗ್ರಹಣೆ ಇತ್ತು. ಈ ಭಾರಿ ಮುಂಗಾರು ಮಳೆ ವಿಳಂಬದಿಂದ ಡ್ಯಾಂ ಸಂಪೂರ್ಣ ಖಾಲಿಯಾಗಿದೆ. ಇನ್ನೊಂದು ವಾರದಲ್ಲಿ ಉತ್ತಮವಾಗಿ ಮಳೆಯಾಗದಿದ್ದರೇ ಕುಡಿಯುವ ನೀರಿಗೆ ಹಾಹಾಕಾರ ಎದ್ದುವ ಸಾಧ್ಯತೆ ಇದೆ.

ಚಿಕ್ಕಮಗಳೂರಿನಲ್ಲಿ ಬತ್ತಿ ಹೋದ ಐತಿಹಾಸಿಕ ಕೆರೆ

ಕಾಫಿನಾಡಿನಲ್ಲೂ ವರುಣ ಮುನಿಸಿಕೊಂಡಿದ್ದಾನೆ. ಮುಂಗಾರು ಮುಗಿದು ಹಿಂಗಾರು ಆರಂಭವಾದ್ರು ಮಳೆ ಬಾರದ ಹಿನ್ನೆಲೆ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪವಿರುವ ಐತಿಹಾಸಿಕ ಕೆರೆ ಸಂಪೂರ್ಣ ಬತ್ತಿ ಹೋಗಿದೆ. ನೂರಾರು ಹಳ್ಳಿಗಳ ಜೀವನಾಡಿಯಾಗಿರುವ 2036 ಎಕರೆ ವಿಸ್ತೀರ್ಣದ ಮದಗದ ಕೆರೆ ಸಂಪೂರ್ಣ ಬರಿದಾಗಿದೆ. ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಮಳೆಯಾಗದ ಹಿನ್ನೆಲೆ ಮದಗದ ಕೆರೆ ಖಾಲಿ ಖಾಲಿ.

2016-17 ರಲ್ಲಿ ಬರಗಾಲ ಬಂದಿದ್ರೂ ಕೂಡ ಮದಗದ ಕೆರೆ ಬತ್ತಿ ಹೋಗಿರಲಿಲ್ಲ. ಕಳೆದ ವರ್ಷ ಮದಗದ ಕೆರೆ ತುಂಬಿ ಕೋಡಿ ಬಿದ್ದಿತ್ತು. ಬಯಲು ಸೀಮೆ ಭಾಗದ ಜನರ ಕುಡಿಯುವ ನೀರಿನ ಮೂಲವಾಗಿದೆ.

ಹೇಮಾವತಿ ಜಲಾಶಯದಲ್ಲಿ ನೀರಿನ ಮಟ್ಟ ಕುಸಿತ

ಹಾಸನದ ಕಾವೇರಿ ನದಿ ಪಾತ್ರದ ಪ್ರಮುಖ ಜಲಾಶಯವಾದ ಹೇಮಾವತಿ ಜಲಾಶಯದಲ್ಲಿ ನೀರಿನ‌ ಮಟ್ಟ ಸಂಪೂರ್ಣ ಕುಸಿದಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 2922 ಅಡಿ. ಇಂದಿನ ನೀರಿನ ಮಟ್ಟ 2890.05 ಅಡಿ ಇದೆ. ಕಳೆದ ವರ್ಷ ಇದೇ ದಿನ 2908.31 ಅಡಿ ನೀರಿತ್ತು. ಗರಿಷ್ಠ 37.103 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ 14.079 ಟಿಎಂಸಿ ನೀರು ಸಂಗ್ರಹವಿದೆ. ಕಳೆದ ವರ್ಷ ಇದೇ ದಿನ ಜಲಾಶಯದಲ್ಲಿ 24.426 ಟಿಎಂಸಿ ನೀರಿತ್ತು.

ಕಳೆದ ವರ್ಷ 3556 ಕ್ಯುಸೆಕ್ ನೀರಿನ ಒಳ ಹರಿವು ಇತ್ತು ಇಂದು ಕೇವಲ 85 ಕ್ಯುಸೆಕ್ ನೀರಿನ ಒಳ ಹರಿವು ಇದೆ. ಹೊರ ಹರಿವು 1350. ಕ್ಯುಸೆಕ್ ಇದೆ ಕಳೆದ ವರ್ಷ ಇದೇ ದಿನ 200 ಕ್ಯುಸೆಕ್ ನೀರಿನ ಹೊರ ಹರಿವು ಇತ್ತು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ