AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ: ವಿಷ ಹಾಕಿ 20ಕ್ಕೂ ಹೆಚ್ಚು ಬೀದಿನಾಯಿಗಳ ಹತ್ಯೆ, ಮಾಂಸಾಹಾರ ತಿಂದು ಎಲ್ಲೊಂದರಲ್ಲಿ ಸತ್ತು ಬಿದ್ದ ಶ್ವಾನಗಳು

ವಿಜಯಪುರ ನಗರದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ಇದನ್ನು ತಡೆಯಲು ಯಾರೋ ದುಷ್ಕರ್ಮಿಗಳು ವಿಚ ಹಾಕಿ 20ಕ್ಕೂ ಹೆಚ್ಚಿ ಬೀದಿನಾಯಿಗಳನ್ನು ಕೊಂದಿದ್ದಾರೆ. ವಿಷ ಬೆರೆಸಿದ ಮಾಂಸಹಾರ ಸೇವಿಸಿದ ಶ್ವಾನಗಳು ಎಲ್ಲೊಂದರಲ್ಲಿ ಸುತ್ತು ಬಿದ್ದಿವೆ.

ವಿಜಯಪುರ: ವಿಷ ಹಾಕಿ 20ಕ್ಕೂ ಹೆಚ್ಚು ಬೀದಿನಾಯಿಗಳ ಹತ್ಯೆ, ಮಾಂಸಾಹಾರ ತಿಂದು ಎಲ್ಲೊಂದರಲ್ಲಿ ಸತ್ತು ಬಿದ್ದ ಶ್ವಾನಗಳು
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on:Dec 02, 2023 | 6:32 PM

Share

ವಿಜಯಪುರ, (ಡಿಸೆಂಬರ್ 02): ವಿಜಯಪುರ (Vijayapura) ನಗರದಲ್ಲಿ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದೆ. 20ಕ್ಕೂ ಹೆಚ್ಚು ಬೀದಿ ನಾಯಿಗಳಿಗೆ(street dogs )ವಿಷ ಪ್ರಾಷಣ (poison) ಮಾಡಿ ಹತ್ಯೆ ಮಾಡಲಾಗಿದೆ. ಮಾಂಸಾಹಾರದಲ್ಲಿ ವಿಷ ಹಾಕಿ ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಕಳೆದ 4 ದಿನಗಳ ಹಿಂದೆ ಮಕ್ಕಳ ಮೇಲೆ ಬೀದಿನಾಯಿಗಳು ದಾಳಿ ಮಾಡಿದ್ದವು. ಇದರ ಬೆನ್ನಲ್ಲೇ ಪಾಲಿಕೆ ನಾಯಿ ಹಿಡಿಯಲು ಕಾರ್ಯಾಚರಣೆ ಶುರು ಮಾಡಿತ್ತು. ಆದ್ರೆ, ಇದೀಗ ಬೀದಿನಾಯಿಗಳು ವಿಷ ಬೆರೆಸಿದ ಆಹಾರ ತಿಂದು ಎಲ್ಲೊಂದರಲ್ಲಿ ಸತ್ತು ಬಿದ್ದಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಮಟನ್ ನಲ್ಲಿ ವಿಷ ಬೆರೆಸಿ ನಾಯಿಗಳಿಗೆ ತಿನ್ನಿಸಿದ್ದಾರೆ. ಈ ವಿಷಯ ತಿಳಿದು ನಗರದ ಕೆಲ ಪ್ರಾಣಿ ಪ್ರೇಮಿ ಯುವಕರು ಕೆಲ ಶ್ವಾನಗಳಿಗೆ ಔಷಧಿ ನೀಡಿ ರಕ್ಷಣೆಗೆ ಯತ್ನಿಸಿದ್ದಾರೆ. ಪಶು ವೈದ್ಯಾಧಕಾರಿಗಳನ್ನು ಸ್ಥಳಕ್ಕೆ ಕರೆಸಿಯಿ ಉಪಚಿರಿಸಿದ್ದಾರೆ. ಆದರೂ ಇಲ್ಲಿಯವರೆಗೆ 20 ನಾಯಿಗಳು ಮೃತಪಟ್ಟಿವೆ. ಮಾಂಸಾಹಾರದಲ್ಲಿ ಯಾರು ವಿಷವಿಕ್ಕಿದ್ಧಾರೆ ಎಂಬುದು ಇನ್ನೂ ನಿಗೂಢವಾಗಿದೆ. ಬೀದಿ ಬದಿಯ ನಾಯಿಗಳ ಕಾಟಕ್ಕೆ ಬೇಸತ್ತು ಸ್ಥಳೀಯರೇ ವಿಷ ಹಾಕಿದ್ದಾರಾ?  ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.

ಇನ್ನು ವಿಷವನ್ನು ಉಂಡ ನಾಯಿಗಳನ್ನು ರಕ್ಷಣೆ ಮಾಡಿದವರು ಮಾತ್ರ ನಾಯಿಗಳ ಸ್ಥಿತಿ ಕಂಡು ಮಮ್ಮಲ ಮರುಗಿದ್ದಾರೆ. ಇದು ಯಾರ ಕೃತ್ಯವೋ ಗೊತ್ತಿಲ್ಲ ಬಹುಶಃ ಕಳ್ಳಕಾಕರ ಕೃತ್ಯವಾಗಿರಬಹುದು ಎಂಬ ಅನುಮಾನವನ್ನೂ ಸಹ ಹೊರ ಹಾಕಿದ್ಧಾರೆ.  ಮೂಕ ಪ್ರಾಣಿ ಶ್ವಾನಗಳಿಗೆ ವಿಷ ಪ್ರಾಷಣ ಮಾಡಿರುವುದು ಯಾರು ಎಂದು ಪತ್ತೆ ಮಾಡಬೇಕೆಂದು ಪ್ರಾಣಿ ಪ್ರಿಯರು ಆಗ್ರಹಿಸಿದ್ದಾರೆ.

ಬೀದಿನಾಯಿಗಳ ಸೆರೆಗೆ ಕಾರ್ಯಾಚರಣೆ ನಡೆಸಿದ್ದ ಪಾಲಿಕೆ

ವಿಜಯಪುರ ನಗರದ ನಗರದ ಬಡೀ ಕಮಾನ್‌ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಬೀದಿ ನಾಯಿಗಳ ಹಾವಳಿ ಜೋರಾಗಿತ್ತು. ಕಳದೆ ಐದಾರು ದಿನಗಳಲ್ಲಿ ಹತ್ತಾರು ಮಕ್ಕಳಿಗೆ ಬೀದಿ ಬದಿಯ ನಾಯಿಗಳು ಕಚ್ಚಿ ಗಾಯಗೊಳಿಸಿದ್ದವು. ಇದು ಮಕ್ಕಳ ಪೋಷಕರಲ್ಲಿ ಬಾರೀ ಭಯಕ್ಕೆ ಕಾರಣವಾಗಿತ್ತು. ಮಕ್ಕಳನ್ನು ಮನೆಯಚೆ ಕಳುಹಿಸಲು ಭಯ ಪಡುವಂತಾಗಿತ್ತು. ಶಾಲೆಗೆ ಮಕ್ಕಳನ್ನು ಪೋಷಕರೇ ಬಿಟ್ಟು ಬರುವಂಥ ಸ್ಥಿತಿ ನಿರ್ಮಾಣವಾಗಿತ್ತು. ಬೀದಿ ಬದಿಯ ನಾಯಿಗಳ ಕಡಿತದಿಂದ ಪುಟ್ಟ ಪುಟ್ಟ ಮಕ್ಕಳು ನೋವು ಅನುಭವಿಸುವಂತಾಗಿತ್ತು. ಈ ಹಿನ್ನೆಲೆಯಲ್ಲಿ ಬೀದಿ ಬದಿಯ ನಾಯಿಗಳನ್ನು ಹಿಡಿಯಬೇಕೆಂದು ಜನರು ಮಹಾನಗರ ಪಾಲಿಕೆಯ ಆಧಿಕಾರಿಗಳಿಗೆ ಒತ್ತಾಯ ಮಾಡಿದ್ದರು. ಈ ನಿಟ್ಟಿನಲ್ಲಿ ಪಾಲಿಕೆ ಆಯಕ್ತ ಸೌದಾಗರ ಬೀದಿ ನಾಯಿಗಳನ್ನು ಹಿಡಿಯಲು ಉತ್ತರಪ್ರದೇಶದ ತಂಡವನ್ನು ಕರೆಸಿ ಕಾರ್ಯಾಚರಣೆಗೆ ಮುಂದಾಗಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:31 pm, Sat, 2 December 23

Follow Us
ಅಶೋಕ ಯಡಳ್ಳಿ, ವಿಜಯಪುರ
ಅಶೋಕ ಯಡಳ್ಳಿ, ವಿಜಯಪುರ

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ