AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತ್ಯೇಕ ಘಟನೆ: ಶಾಲಾ ಕೊಠಡಿಯಲ್ಲೇ ಶಿಕ್ಷಕಿ‌ ಆತ್ಮಹತ್ಯೆ, ಶೀಲ ಶಂಕಿಸಿ ಪತ್ನಿಯನ್ನ ಕೊಂದು ನೇರವಾಗಿ ಪೊಲೀಸ್ ಠಾಣೆಗೆ ಹೋದ ಪತಿ

ಶಾಲಾ ಕೊಠಡಿಯಲ್ಲೇ ಶಿಕ್ಷಕಿ‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನೊಂದೆಡೆ ಶೀಲ ಶಂಕಿಸಿ ಪತ್ನಿಯನ್ನೇ ಹತ್ಯೆ ಮಾಡಿದ ಪತಿ ಬಳಿಕ ತಾನೇ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಪ್ರತ್ಯೇಕ ಘಟನೆಯ ವಿವರ ಈ ಕೆಳಗಿನಂತಿದೆ.

ಪ್ರತ್ಯೇಕ ಘಟನೆ: ಶಾಲಾ ಕೊಠಡಿಯಲ್ಲೇ ಶಿಕ್ಷಕಿ‌ ಆತ್ಮಹತ್ಯೆ, ಶೀಲ ಶಂಕಿಸಿ ಪತ್ನಿಯನ್ನ ಕೊಂದು ನೇರವಾಗಿ ಪೊಲೀಸ್ ಠಾಣೆಗೆ ಹೋದ ಪತಿ
ಡೆತ್​ ನೋಟ್ ಬರೆದಿಟ್ಟು ಶಿಕ್ಷಕಿ ಆತ್ಮಹತ್ಯೆ
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Mar 06, 2023 | 11:18 AM

Share

ವಿಜಯನಗರ: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು(dowry harassment) ಖಾಸಗಿ ಶಾಲೆ ಶಿಕ್ಷಕಿ(private School Teacher)  ಆತ್ಮಹತ್ಯೆ(Suicide) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯನಗರ (Vijayanagara)ಜಿಲ್ಲೆ ಹೂವಿನಹಡಗಲಿ ಪಟ್ಟಣದಲ್ಲಿ ನಡೆದಿದೆ. ಶಾಲಾ ಕೊಠಡಿಯಲ್ಲೇ ವಿಷಸೇವಿಸಿ ಶಿಕ್ಷಕಿ‌ ಬಸಮ್ಮ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 10 ವರ್ಷಗಳ ಹಿಂದೆ ಬಸಮ್ಮ ಹಾಗೂ ಅರ್ಜುನ್ ಪ್ರೀತಿಸಿ ಮದುವೆಯಾಗಿದ್ದರು. ಸಹ ಅರ್ಜುನ್ ಶಿಕ್ಷಕನಾಗಿದ್ದ. ಆದರೂ ಅರ್ಜುನ್ ವರದಕ್ಷಿಣೆಗಾಗಿ ಪತ್ನಿಯನ್ನು ಪೀಡಿಸುತ್ತಿದ್ದ ಎನ್ನುವ ಆರೋಪ ಕೇಳಿಬಂದಿದೆ.

ಪ್ರೀತಿಸಿ ಮದುವೆಯಾಗಿದ್ದ ಇಬ್ಬರೂ ಹೂವಿನಹಡಗಲಿ ಪಟ್ಟಣದ ನ್ಯಾಷನಲ್ ಶಾಲೆಯಲ್ಲಿ ಶಿಕ್ಷಕ- ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಆದ್ರೆ, ರವಿವಾರ ಪರೀಕ್ಷೆ ಕೆಲಸದ ವೇಳೆ ಶಾಲೆಗೆ ಬಂದು ಶಿಕ್ಷಕಿ ಬಸಮ್ಮ ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಪತಿ ಅರ್ಜುನ್ ಪರಶೆಟ್ಟಿ, ಅತ್ತೆ ಅಂಬಿಕಾ ಪರಶೆಟ್ಟಿ, ನಾದಿನಿ ಸಂಗೀತಾ ಸೇರಿದಂತೆ 6 ಜನರ ವಿರುದ್ಧ ಹೂವಿನಹಡಗಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾವಿಗೂ ಮುನ್ನ ಬಸಮ್ಮ ಡೆತ್ ನೋಟ್ ಬರೆದಿಟ್ಟು, ಡೆತ್​ ನೋಟ್ ಆಧರಿಸಿ ಪೊಲೀಸರು ತನಿಖೆ ನಡೆಸಿದ್ದಾರೆ.

ಶೀಲ ಶಂಕಿಸಿ ಪತ್ನಿಯನ್ನೇ ಹತ್ಯೆ ಮಾಡಿದ ಪತಿ

ಕೋಲಾರ: ಶೀಲ ಶಂಕಿಸಿ ಪತ್ನಿಯನ್ನೇ ಹತ್ಯೆ ಮಾಡಿದ ಪತಿ ಪೊಲೀಸ್​ ಠಾಣೆಗೆ ತೆರಳಿ ಶರಣಾಗಿದ್ದಾನೆ. ಈ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆಯ ಅಮರಾವತಿ ಬಡಾವಣೆಯಲ್ಲಿ ನಡೆದಿದೆ. ಪತಿ ನಾಗರಾಜ್​ ಎನ್ನುವಾತ ಪತ್ನಿ ನಂದಿನಿ(34) ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಬಳಿಕ ತಾನೇ ನೇರವಾಗಿ ಬಂಗಾರಪೇಟೆ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

2 ಅಡಿ ಜಾಗಕ್ಕಾಗಿ ಎರಡು ಕುಟುಂಬಗಳ ನಡುವೆ ಮಾರಾಮಾರಿ

ಚಿಕ್ಕಮಗಳೂರು: 2 ಅಡಿ ಜಾಗಕ್ಕಾಗಿ ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಇಂದು ತರೀಕೆರೆ ತಾಲೂಕಿನ ದೊಡ್ಡ ಲಿಂಗೇನಹಳ್ಳಿಯಲ್ಲಿ ನಡೆದಿದೆ. ಘಟನೆಯಲ್ಲಿ ಗಾಯಿತ್ರಿ, ಅಮರ್ ನಾಯ್ಕ್, ರಾಮನಾಯ್ಕ್​ ಎಂಬುವರಿಗೆ ಗಾಯಗಳಾಗಿವೆ. ಮಂಜುನಾಯ್ಕ್, ಉಮೇಶ್, ಅಣ್ಣಾನಾಯ್ಕ್, ತೇಜು ಎನ್ನುವವರು ಹಲ್ಲೆ ಮಾಡಿ ಪರಾರಿಯಾಗಿದ್ದು, ಕೇಸ್​ ದಾಖಲಿಸಿಕೊಳ್ಳಲು ಲಿಂಗದಹಳ್ಳಿ ಪೊಲೀಸರು ಹಿಂದೇಟು ಹಾಕಿದ್ದಾರೆ ಎಂದು ಆರೋಪ ಕೇಳಿಬಂದಿದೆ. ಇದರಿಂದ ಹಲ್ಲೆಗೊಳಗಾದ ಕುಟುಂಬಸ್ಥರು ಎಸ್​ಪಿ​​​​​ಗೆ ದೂರು ನೀಡಲು ಮುಂದಾಗಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ