ವಿಜಯನಗರ: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು(dowry harassment) ಖಾಸಗಿ ಶಾಲೆ ಶಿಕ್ಷಕಿ(private School Teacher) ಆತ್ಮಹತ್ಯೆ(Suicide) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯನಗರ (Vijayanagara)ಜಿಲ್ಲೆ ಹೂವಿನಹಡಗಲಿ ಪಟ್ಟಣದಲ್ಲಿ ನಡೆದಿದೆ. ಶಾಲಾ ಕೊಠಡಿಯಲ್ಲೇ ವಿಷಸೇವಿಸಿ ಶಿಕ್ಷಕಿ ಬಸಮ್ಮ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 10 ವರ್ಷಗಳ ಹಿಂದೆ ಬಸಮ್ಮ ಹಾಗೂ ಅರ್ಜುನ್ ಪ್ರೀತಿಸಿ ಮದುವೆಯಾಗಿದ್ದರು. ಸಹ ಅರ್ಜುನ್ ಶಿಕ್ಷಕನಾಗಿದ್ದ. ಆದರೂ ಅರ್ಜುನ್ ವರದಕ್ಷಿಣೆಗಾಗಿ ಪತ್ನಿಯನ್ನು ಪೀಡಿಸುತ್ತಿದ್ದ ಎನ್ನುವ ಆರೋಪ ಕೇಳಿಬಂದಿದೆ.
ಪ್ರೀತಿಸಿ ಮದುವೆಯಾಗಿದ್ದ ಇಬ್ಬರೂ ಹೂವಿನಹಡಗಲಿ ಪಟ್ಟಣದ ನ್ಯಾಷನಲ್ ಶಾಲೆಯಲ್ಲಿ ಶಿಕ್ಷಕ- ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಆದ್ರೆ, ರವಿವಾರ ಪರೀಕ್ಷೆ ಕೆಲಸದ ವೇಳೆ ಶಾಲೆಗೆ ಬಂದು ಶಿಕ್ಷಕಿ ಬಸಮ್ಮ ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಪತಿ ಅರ್ಜುನ್ ಪರಶೆಟ್ಟಿ, ಅತ್ತೆ ಅಂಬಿಕಾ ಪರಶೆಟ್ಟಿ, ನಾದಿನಿ ಸಂಗೀತಾ ಸೇರಿದಂತೆ 6 ಜನರ ವಿರುದ್ಧ ಹೂವಿನಹಡಗಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾವಿಗೂ ಮುನ್ನ ಬಸಮ್ಮ ಡೆತ್ ನೋಟ್ ಬರೆದಿಟ್ಟು, ಡೆತ್ ನೋಟ್ ಆಧರಿಸಿ ಪೊಲೀಸರು ತನಿಖೆ ನಡೆಸಿದ್ದಾರೆ.
ಕೋಲಾರ: ಶೀಲ ಶಂಕಿಸಿ ಪತ್ನಿಯನ್ನೇ ಹತ್ಯೆ ಮಾಡಿದ ಪತಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಈ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆಯ ಅಮರಾವತಿ ಬಡಾವಣೆಯಲ್ಲಿ ನಡೆದಿದೆ. ಪತಿ ನಾಗರಾಜ್ ಎನ್ನುವಾತ ಪತ್ನಿ ನಂದಿನಿ(34) ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಬಳಿಕ ತಾನೇ ನೇರವಾಗಿ ಬಂಗಾರಪೇಟೆ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಚಿಕ್ಕಮಗಳೂರು: 2 ಅಡಿ ಜಾಗಕ್ಕಾಗಿ ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಇಂದು ತರೀಕೆರೆ ತಾಲೂಕಿನ ದೊಡ್ಡ ಲಿಂಗೇನಹಳ್ಳಿಯಲ್ಲಿ ನಡೆದಿದೆ. ಘಟನೆಯಲ್ಲಿ ಗಾಯಿತ್ರಿ, ಅಮರ್ ನಾಯ್ಕ್, ರಾಮನಾಯ್ಕ್ ಎಂಬುವರಿಗೆ ಗಾಯಗಳಾಗಿವೆ. ಮಂಜುನಾಯ್ಕ್, ಉಮೇಶ್, ಅಣ್ಣಾನಾಯ್ಕ್, ತೇಜು ಎನ್ನುವವರು ಹಲ್ಲೆ ಮಾಡಿ ಪರಾರಿಯಾಗಿದ್ದು, ಕೇಸ್ ದಾಖಲಿಸಿಕೊಳ್ಳಲು ಲಿಂಗದಹಳ್ಳಿ ಪೊಲೀಸರು ಹಿಂದೇಟು ಹಾಕಿದ್ದಾರೆ ಎಂದು ಆರೋಪ ಕೇಳಿಬಂದಿದೆ. ಇದರಿಂದ ಹಲ್ಲೆಗೊಳಗಾದ ಕುಟುಂಬಸ್ಥರು ಎಸ್ಪಿಗೆ ದೂರು ನೀಡಲು ಮುಂದಾಗಿದ್ದಾರೆ.
ಇನ್ನಷ್ಟು ಅಪರಾಧ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ