Hampi: ರೀಲ್ಸ್​ಗಾಗಿ ಹಂಪಿ ಸ್ಮಾರಕ ಏರಿ ಪ್ರವಾಸಿಯ ನೃತ್ಯ; ಪ್ರಕರಣ ದಾಖಲಿಸಿದ ಪೊಲೀಸರು, ಆರೋಪಿಗಾಗಿ ಹುಡುಕಾಟ

ಘಟನೆ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಕಳೆದ ವಾರವಷ್ಟೇ ವಿದೇಶಿಯರ ಗುಂಪೊಂದು ಹಂಪಿಯ ಐತಿಹಾಸಿಕ ಪುರಂದರ ಮಂಟಪದಲ್ಲಿ ಪಾರ್ಟಿ ಮಾಡಿದ್ದ ಬಗ್ಗೆ ವರದಿಯಾಗಿತ್ತು.

Follow us
Ganapathi Sharma
|

Updated on:Feb 28, 2023 | 8:46 PM

ಹೊಸಪೇಟೆ: ಪ್ರವಾಸಿಯೊಬ್ಬರು ರೀಲ್ಸ್​ಗಾಗಿ ಹಂಪಿ(Hampi) 14ನೇ ಶತಮಾನದ ಸ್ಮಾರಕವನ್ನೇರಿ ನೃತ್ಯ ಮಾಡಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ. ಇದೀಗ ಅಪರಿಚಿತ ಪ್ರವಾಸಿಗನ ವಿರುದ್ಧ ಭಾರತೀಯ ಪುರಾತತ್ವ (Archaeological Survey of India) ನಿಯಮಗಳನ್ನು ಉಲ್ಲಂಘಿಸಿದ ಆರೋಪದಲ್ಲಿ ಹಂಪಿ ಪೊಲೀಸರು ಸ್ವಯಂಪ್ರೇರಿತರಾಗಿ ಪ್ರಕರಣ ದಾಖಲಿಸಿಕೊಂಡಿದ್ದು, ಆತನ ಹುಡುಕಾಟದಲ್ಲಿದ್ದಾರೆ. ಪ್ರವಾಸಿಯು ಹಂಪಿಯ ಹೇಮಕೂಟದದಲ್ಲಿರುವ ಮಂಟಪ ಏರಿ ನೃತ್ಯ ಮಾಡುತ್ತಿರುವ ವಿಡಿಯೋ ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೆಯಾಗಿತ್ತು. ಘಟನೆ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಕಳೆದ ವಾರವಷ್ಟೇ ವಿದೇಶಿಯರ ಗುಂಪೊಂದು ಹಂಪಿಯ ಐತಿಹಾಸಿಕ ಪುರಂದರ ಮಂಟಪದಲ್ಲಿ ಪಾರ್ಟಿ ಮಾಡಿದ್ದ ಬಗ್ಗೆ ವರದಿಯಾಗಿತ್ತು. ಇಂಥ ಕೃತ್ಯಗಳನ್ನು ತಡೆಯಲು ಹೆಚ್ಚುವರಿ ಗಾರ್ಡ್​​ಗಳನ್ನು ನಿಯೋಜಿಸಬೇಕು ಎಂದು ಸ್ಥಳಿಯರು ಆಗ್ರಹಿಸಿದ್ದಾರೆ.

ಭಾರತೀಯ ಪುರಾತತ್ವ ಇಲಾಖೆ ಮತ್ತು ಹಂಪಿ ವಿಶ್ವ ಪಾರಂಪರಿಕ ತಾಣ ನಿರ್ವಹಣಾ ಪ್ರಾಧಿಕಾರದ ನಿಯಮಗಳ ಅಡಿಯಲ್ಲಿ ಸ್ಮಾರಕ ಒಳ ಪ್ರವೇಶಿಸುವುದು ಅಥವಾ ಮೇಲೇರುವುದು ನಿಷಿದ್ಧ. ರೀಲ್ಸ್​ ಮಾಡಲು ನಿಯಮ ಉಲ್ಲಂಘಿಸಿದವರ ವಿರುದ್ಧ ಈ ಹಿಂದೆಯೂ ಹಲವು ಬಾರಿ ಪೊಲೀಸರು ಪ್ರಕರಣಗಳನ್ನು ದಾಖಲಿಸಿದ್ದರು ಎಂದು ‘ದಿ ನ್ಯೂ ಇಂಡಿಯನ್ ಎಕ್ಸ್​ಪ್ರೆಸ್’ ವರದಿ ಮಾಡಿದೆ.

ಇದನ್ನೂ ಓದಿ: Hampi Festival: ಪ್ರವಾಸಿಗರ ಅನುಕೂಲಕ್ಕಾಗಿ ಇನ್ನು ಮುಂದೆ ಮೈಸೂರು ದಸರಾ ನಂತರ ನಡೆಯಲಿದೆ ಹಂಪಿ ಉತ್ಸವ

ಘಟನೆ ಬಗ್ಗೆ ವರದಿಯಾದ ಬೆನ್ನಲ್ಲೇ ಹಂಪಿಗೆ ಭೇಟಿ ನೀಡಿ ಸ್ಥಳೀಯರ ಬಳಿ ವಿಚಾರಿಸಿದ್ದೇನೆ ಎಂದು ವಿಜಯನಗರ ಜಿಲ್ಲೆ ಡಿಸಿ ಟಿ ವೆಂಕಟೇಶ ತಿಳಿಸಿದ್ದಾರೆ.

ಪುರಂದರ ಮಂಟಪದೊಳಗೆ ವಿದೇಶಿಯರು ನಿಯಮ ಉಲ್ಲಂಘಿಸಿ ಮದ್ಯ ಸೇವಿಸಿದ್ದ ಬಗ್ಗೆಯೂ ತಿಳಿದುಕೊಂಡೆ. ಸ್ಮಾರಕದ ಮೇಲೆ ನೃತ್ಯ ಮಾಡಿದ್ದಕ್ಕೆ ಸಂಬಂಧಿಸಿ ತನಿಖೆ ನಡೆಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಹಂಪಿ ಯುನೆಸ್ಕೋ ಮತ್ತು ಭಾರತೀಯ ಪುರಾತತ್ವ ಇಲಾಖೆ ಸಂರಕ್ಷಿತ ಪಾರಂಪರಿಕ ತಾಣವಾಗಿದ್ದು ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:34 pm, Tue, 28 February 23

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್