ಹೊಸಪೇಟೆ: ಟಿಇಟಿ ಪರೀಕ್ಷೆಗೆ ಬುರ್ಖಾ ಧರಿಸಿಕೊಂಡು ಬಂದ ಪರೀಕ್ಷಾರ್ಥಿಗಳು
ಭಾನುವಾರ ರಾಜ್ಯಾದ್ಯಂತ ಶಿಕ್ಷಕರ ಅರ್ಹತಾ ಪರೀಕ್ಷೆ ನಡೆದವು. ಹೊಸಪೇಟೆಯ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ನಡೆದ ಟಿಇಟಿ ಪರೀಕ್ಷೆಗೆ ಇಬ್ಬರು ಪರೀಕ್ಷಾರ್ಥಿಗಳು ಬುರ್ಖಾ ಧರಿಸಿ ಪರೀಕ್ಷಾ ಕೊಠಡಿಗೆ ಪ್ರವೇಶಿಸಿದ್ದರು. ಈ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.
ಹೊಸಪೇಟೆ: ಭಾನುವಾರ ರಾಜ್ಯಾದ್ಯಂತ ಶಿಕ್ಷಕರ ಅರ್ಹತಾ ಪರೀಕ್ಷೆ (TET) ಪರೀಕ್ಷೆ ನಡೆದವು. ಹೊಸಪೇಟೆಯ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ನಡೆದ ಟಿಇಟಿ ಪರೀಕ್ಷೆಗೆ ಇಬ್ಬರು ಪರೀಕ್ಷಾರ್ಥಿಗಳು ಬುರ್ಖಾ (Burqa) ಧರಿಸಿ ಪರೀಕ್ಷಾ ಕೊಠಡಿಗೆ ಪ್ರವೇಶಿಸಿದ್ದರು. ಈ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರದಲ್ಲಿ (Exam Center) ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಈ ವೇಳೆ ಅಧಿಕಾರಿಗಳು ಬುರ್ಕಾ ತೆಗೆದು ಬರುವಂತೆ ಹೇಳಿದರು.
ಈ ವೇಳೆ ಪರೀಕ್ಷಾರ್ಥಿಗಳ ಪೋಷಕರು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನಿಯಮಗಳಲ್ಲಿ ಬುರ್ಖಾ ಧರಿಸುವುದರ ಕುರಿತು ಷರತ್ತುಗಳು ಇವೆಯೇ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು. ಇದಕ್ಕೆ ಅಧಿಕಾರಿಗಳು ಹಾಲ್ ಟಿಕೆಟ್‌ನಲ್ಲಿ ನಿಯಮಗಳನ್ನು ನಮೂದಿಸಲಾಗಿದ್ದು, ಪರೀಕ್ಷಾರ್ಥಿಗಳು ಅದನ್ನು ಅನುಸರಿಸಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದು ಪೋಷಕರಿಗೆ ಮನವರಿಕೆಯಾಗಿದ್ದು, ಪರೀಕ್ಷಾರ್ಥಿಗಳು ಕೂಡ ಬುರ್ಖಾ ತೆಗೆಯಲು ಒಪ್ಪಿದರು. ನಂತರ ಅವರು ಪರೀಕ್ಷೆಗೆ ಹಾಜರಾಗುವ ಮೊದಲು ಕಾಯ್ದಿರಿಸಿದ ತರಗತಿಯಲ್ಲಿ ಬುರ್ಖಾಗಳನ್ನು ತೆಗೆದರು ಎಂದು ಅಧಿಕಾರಿಗಳು ತಿಳಿಸಿದರು.
ಇದನ್ನೂ ಓದಿ: ಬೆಂಗಳೂರು: ಅನ್ಯ ಧರ್ಮದ ಹುಡುಗನ ಜೊತೆ ಹೋಗುತ್ತಿದ್ದ ಯುವತಿಗೆ ಬುರ್ಖಾ ತೆಗೆಯುವಂತೆ ಒತ್ತಾಯ; ಮುಸ್ಲಿಂ ಯುವಕ ಬಂಧನ
ಉಡುಪಿಯಲ್ಲಿ ಆರಂಭವಾಗಿದ್ದ ಹಿಜಾಬ್ ವಿವಾದ
ಉಡುಪಿ ಜಿಲ್ಲೆಯ ಕಾಲೇಜೊಂದರಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ತರಗತಿ ಪ್ರವೇಶಿಸಿದ್ದು 2021-22ರಲ್ಲಿ ವಿವಾದಕ್ಕೆ ಗುರಿಯಾಗಿತ್ತು. ಇದರ ಬೆನ್ನಲ್ಲೇ ಹಿಂದೂ ವಿದ್ಯಾರ್ಥಿಗಳು ಕೇಸರಿನ ಶಾಲ ಧರಿಸಿ ಕಾಲೇಜಿಗೆ ಬಂದಿದ್ದರು. ನಂತರ ವಿವಾದ ರಾಜಕೀಯ ಸ್ವರೂಪ ಪಡೆದುಕೊಂಡಿತ್ತು. ಆನಂತರ ಕೋರ್ಟ್ ಮೆಟ್ಟಿಲೇರಿತ್ತು.
ಈ ಎಲ್ಲ ವಿದ್ಯಮಾನಗಳ ಬೆನ್ನಲ್ಲೇ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ನಿಗದಿಪಡಿಸಿರುವ ಸಮವಸ್ತ್ರವನ್ನೇ ಕಡ್ಡಾಯವಾಗಿ ಧರಿಸಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಖಾಸಗಿ ಶಾಲೆಗಳಲ್ಲಿ ಆಯಾ ಆಡಳಿತ ಮಂಡಳಿ ನಿರ್ಧರಿಸಿರುವ ಸಮವಸ್ತ್ರವನ್ನು ಧರಿಸಬೇಕು. ಪದವಿ ಪೂರ್ವ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿನ ಕಾಲೇಜುಗಳಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಅಥವಾ ಆಡಳಿತ ಮಂಡಳಿ ಮೇಲ್ವಿಚಾರಣಾ ಸಮಿತಿ ನಿರ್ಧರಿಸುವ ಸಮವಸ್ತ್ರ ಧರಿಸಬೇಕು ಎಂದು ಸರ್ಕಾರ ಆದೇಶಿಸಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 1:14 pm, Mon, 4 September 23