AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಮತ್ತೊಂದು ಘೋರ ದುರಂತ:ಕೊಳವೆ ಬಾವಿಗೆ ಬಿದ್ದ 2 ವರ್ಷದ ಬಾಲಕ

ಕರ್ನಾಟಕದಲ್ಲಿ ಮತ್ತೊಂದು ಘೋರ ದುರಂತ ಸಂಭವಿಸಿದೆ. ಎರಡು ವರ್ಷದ ಬಾಲಕ ಆಟವಾಡುತ್ತಾ ತೆರೆದ ಕೊಳವೆ ಬಾವಿಗೆ ಬಿದ್ದಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಇನ್ನು ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ದಳ, ಪೊಲೀಸ್, ತಾಲೂಕು ಆಡಳಿತಾಧಿಕಾರಿಗಳು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.

ಕರ್ನಾಟಕದಲ್ಲಿ ಮತ್ತೊಂದು ಘೋರ ದುರಂತ:ಕೊಳವೆ ಬಾವಿಗೆ ಬಿದ್ದ 2 ವರ್ಷದ ಬಾಲಕ
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on:Apr 03, 2024 | 9:27 PM

Share

ವಿಜಯಪುರ, (ಏಪ್ರಿಲ್ 03): ಎರಡು ವರ್ಷದ ಮಗು ತೆರೆದ ಕೊಳವೆ ಬಾವಿಗೆ (Open Borewel) ಬಿದ್ದ ಘಟನೆ ವಿಜಯಪುರ (Vijayapura) ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ (Lachyana) ಗ್ರಾಮದಲ್ಲಿ ನಡೆದಿದೆ. ಸಾತ್ವಿಕ್ ಮುಜಗೊಂಡ ಆಟವಾಡಲು ಹೋಗಿದ್ದ ವೇಳೆ ಕೊಳವೆ ಬಾವಿಗೆ ಬಿದ್ದಿದ್ದಾನೆ ಎಂದು ತಿಳಿದು ಬಂದಿದೆ. ಸತೀಶ್ ಮತ್ತು ಪೂಜಾ ದಂಪತಿಯ ಮಗನಾಗಿರುವ ಸಾತ್ವಿಕ್ ಇಂದು (ಏಪ್ರಿಲ್ 03) ಸಂಜೆ 6 ಗಂಟೆ ಸುಮಾರಿಗೆ ಆಟವಾಡುತ್ತ ಕೊಳವೆ ಬಾವಿಗೆ ಬಿದ್ದಿದ್ದಾನೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಇಂಡಿ ಗ್ರಾಮಾಂತರ ಠಾಣೆಯ ಪೊಲೀಸರು, ಅಗ್ನಿ ಶಾಮಕ ದಳ, ತಾಲೂಕು ಆಡಳಿತಾಧಿರಿಗಳು ದೌಡಾಯಿಸಿದ್ದು, ರಕ್ಷಣಾ ಕಾರ್ಯಚರಣೆಯಲ್ಲಿ ತೊಡಗಿದ್ದಾರೆ.

ನಿನ್ನೆ(ಏಪ್ರಿಲ್ -02) ಜಮೀನಿನಲ್ಲಿ ಶಂಕರಪ್ಪ ಮುಜಗೊಂಡ ಬೋರ್​ವೆಲ್ ಕೊರೆಸಿದ್ದರು. ಸುಮಾರು 500 ಅಡಿ ಆಳ ಕೊರೆಸಲಾಗಿತ್ತು. ಆದ್ರೆ, ನೀರು ಬಾರದ ಕಾರಣ ಮುಚ್ಚದೆ ಹಾಗೆಯೇ ಬಿಟ್ಟಿದ್ದ. ಇದೀಗ ಶಂಕರಪ್ಪ ಮುಜಗೊಂಡ ಮೊಮ್ಮಗ ಸಾತ್ವಿಕ್ ಕೊಳವೆ ಬಾವಿಗೆ ಬಿದ್ದಿದ್ದಾನೆ. ಸುಮಾರು 15ರಿಂದ 20 ಅಡಿ ಆಳದಲ್ಲಿ ಸಿಲುಕಿರಬಹುದು ಎಂದು ಅಂದಾಜಿಸಲಾಗಿದ್ದು, ಇದೀಗ ಆ್ಯಕ್ಸಿಜನ್​​ ವ್ಯವಸ್ಥೆ ಮಾಡಲಾಗಿದೆ.

ಇನ್ನು ವಿಷಯ ತಿಳಿದಯುತ್ತಿದ್ದಂತೆಯೇ ಸ್ಥಳದಲ್ಲಿ ಜನರ ಸಂಖ್ಯೆ ಕ್ಷಣದಿಂದ ಕ್ಷಣಕ್ಕೆ ಹೆಚ್ಚಾಗುತ್ತಿದೆ. ಮುಂಜಾಗ್ರತ ಕ್ರಮವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಇತ್ತ ಸಾತ್ವಿಕ್ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಸ್ಥಳಕ್ಕೆ ಎಸ್​ಡಿಆರ್​ಎಫ್ ತಂಡ

ಬೋರ್​ವೆಲ್​ ಪಕ್ಕದಲ್ಲಿ 2 JCB ಮೂಲಕ ಹಳ್ಳ ತೆಗೆಯುವ ಕಾರ್ಯ ನಡೆದಿದೆ. ಮಗುವಿನ ರಕ್ಷಣೆಗೆ ಬೆಳಗಾವಿಯಿಂದ ಶ್ರೀಶೈಲ್ ಚೌಗಲಾ ನೇತೃತ್ವದ ರಾಜ್ಯ ವಿಪತ್ತು ನಿರ್ವಹಣಾ ತಂಡ(ಎಸ್​ಡಿಆರ್​ಎಫ್ ) ಸಹ ಘಟನಾ ಸ್ಥಳಕ್ಕೆ ಆಗಮಿಸುತ್ತಿದೆ. ಇನ್ನು ಸ್ಥಳಕ್ಕೆ ವಿಜಯಪುರ ಜಿಲ್ಲಾ ಪಂಚಾಯಿತಿ ಸಿಇಒ, ಎಸ್​ಪಿ ಭೇಟಿ ನೀಡಿ ರಕ್ಷಣಾ ಕಾರ್ಯಚರಣೆಯನ್ನು ಪರಿಶೀಲನೆ ನಡೆಸಿದ್ದಾರೆ. ಮತ್ತೊಂದೆಡೆ ಜಿಲ್ಲಾ ಉಸ್ತುವಾರಿ ಸಚಿವ ಎಂಬಿ ಪಾಟೀಲ್ ಅವರು ಜಿಲ್ಲಾಧಿಕಾರಿಗೆ ಕರೆ ಮಾಡಿ ಘಟನೆ ಸಂಬಂಧ ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೇ ಮಗುವಿನ ರಕ್ಷಣೆ ಮಾಡುವಂತೆ ಸೂಚಿಸಿದ್ದಾರೆ.

ವಿಜಯಪುರ ಜಿಲ್ಲೆಯಲ್ಲಿ ಇದು 3ನೇ ಪ್ರಕರಣ

ಇಂದಿನ ಪ್ರಕರಣಕ್ಕೂ ಮುಂಚೆ ಇಂತಹ ಎರಡು ಪ್ರಕರಣಗಳು ವಿಜಯಪುರ ಜಿಲ್ಲೆಯಲ್ಲಿ ನಡೆದಿದ್ದವು. 2008 ಮತ್ತು 2014ರಲ್ಲಿಕೊಳವೆ ಬಾವಿ ದುರಂತಗಳು ಸಂಭವಿಸಿದ್ದವು. 2008 ರಲ್ಲಿ ಚಡಚಣ ತಾಲೂಕಿನ ದೇವರನಿಂಬರಗಿ ಗ್ರಾಮದಲ್ಲಿ ಕಾಂಚನಾ ಉರ್ಪ್ ಏಗವ್ವ ಎನ್ನುವ ಬಾಲಕಿ ತೆರೆದ ಕೊಳವೆ ಬಾವಿಗೆ ಬಿದ್ದಿದ್ದಳು. ಜೆಸಿಬಿಗಳ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿತ್ತು. ಆದ್ರೆ, ಮಗು ಮೃತಪಟ್ಟಿತ್ತು.

ಬಳಿಕ ಇಂಥದ್ದೇ ಘಟನೆ 2014 ರಲ್ಲಿ ವಿಜಯಪುರ ತಾಲೂಕಿನ ದ್ಯಾಬೇರಿ ಗ್ರಾಮದಲ್ಲಿ ನಡೆದಿತ್ತು. ಆಟವಾಡುವ ವೇಳೆ 3 ವರ್ಷದ ಬಾಲಕಿ ಅಕ್ಷತಾ ಹನುಮಂತ ಪಾಟೀಲ್ ತೆರೆದ ಕೊಳವೆ ಬಾವಿಗೆ ಬಿದ್ದಿದ್ದಳು. ಅಕ್ಷತಾ ರಕ್ಷಣಾ ಕಾರಾಚರಣೆ ನಡೆದರೂ ಫಲ ಸಿಕ್ಕಿರಲಿಲ್ಲ. ಜೆಸಿಬಿಗಳ ಮೂಲಕ ಕಾರ್ಯಾಚರಣೆ ನಡೆಸಿದ್ದರೂ ಅಕ್ಷತಾ ಬದುಕಿ ಬರಲಿಲ್ಲ. ಇದು ಇದೀಗ ಜಿಲ್ಲೆಯಲ್ಲಿ ಮೂರನೇ ಪ್ರಕರಣವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:49 pm, Wed, 3 April 24

Follow Us
ಅಶೋಕ ಯಡಳ್ಳಿ, ವಿಜಯಪುರ
ಅಶೋಕ ಯಡಳ್ಳಿ, ವಿಜಯಪುರ

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್