ವಿಜಯನಗರ: ಕಲುಷಿತ ನೀರು ಸೇವಿಸಿ ಹೊಸಪೇಟೆಯ 18 ಜನರು ಅಸ್ವಸ್ಥ
ಕಲುಷಿತ ನೀರು ಸೇವಿಸಿ ಪರಿಣಾಮ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ನಲ್ಲಾಪುರದ ಗ್ರಾಮದ 18 ಜನರು ಅಸ್ವಸ್ಥಗೊಂಡಿದ್ದಾರೆ. ಗ್ರಮಾಕ್ಕೆ ಜಿಲ್ಲಾ ಪಂಚಾಯತ್ ಸಿಇಒ ಸದಾಶಿವ ಪ್ರಭು ಮತ್ತು ಜಿಲ್ಲಾ ಆರೋಗ್ಯಾಧಿಕಾರಿ ಶಂಕರ್ ನಾಯ್ಕ್ ಭೇಟಿ ನೀಡಿದ್ದಾರೆ.
ವಿಜಯನಗರ, ಮಾರ್ಚ್ 25: ವರ್ಷದ ಆರಂಭದಲ್ಲೇ ಹೊಸಪೇಟೆ ಪುರಸಭೆ ವ್ಯಾಪ್ತಿಯ ಕಾರಗನೂರು ಗ್ರಾಮದಲ್ಲಿ ಕಲಷಿತ ನೀರು ಕುಡಿದು ಮಹಿಳೆಯೊಬ್ಬರು ಮೃತಪಟ್ಟಿದ್ದು, 35 ಮಂದಿ ಅಸ್ವಸ್ಥರಾಗಿದ್ದರು. ಇದು ಮಾಸುವ ಮುನ್ನ ಜಿಲ್ಲೆಯಲ್ಲಿ ಇಂತಹದ್ದೇ ಮತ್ತೊಂದು ಘಟನೆ ನಡೆದಿದೆ. ಕಲುಷಿತ ನೀರು (Polluted Water) ಸೇವಿಸಿ ಹೊಸಪೇಟೆ (Hospet) ತಾಲೂಕಿನ ನಲ್ಲಾಪುರದ 18 ಜನರು ಅಸ್ವಸ್ಥಗೊಂಡಿದ್ದಾರೆ. ಇಬ್ಬರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಉಳಿದವರ ಆರೋಗ್ಯದಲ್ಲಿ ಸುಧಾರಣೆ ಕಂಡಿದೆ. ಪೈಪ್ಲೈನ್ ಮೂಲಕ ಕಲುಷಿತ ನೀರು ಪೂರೈಕೆಯಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಗ್ರಾಮಕ್ಕೆ ಜಿಲ್ಲಾ ಪಂಚಾಯತ್ ಸಿಇಒ ಸದಾಶಿವ ಪ್ರಭು, ಜಿಲ್ಲಾ ಆರೋಗ್ಯಾಧಿಕಾರಿ ಶಂಕರ್ ನಾಯ್ಕ್ ಭೇಟಿ ನೀಡಿ, ನೀರಿನ ಸ್ಯಾಂಪಲ್ ಪಡೆದು ಪರಿಶೀಲನೆಗೆ ಕಳುಹಿಸಿದರು.
ಕಲುಷಿತ ನೀರು ಸೇವಿಸಿ ಸಾವು 6 ಸಾವು
2023 ಅಗಸ್ಟ್ನಲ್ಲಿ ಕೋಟೆನಾಡು ಚಿತ್ರದುರ್ಗ ನಗರದ ಕವಾಡಿಗರಹಟ್ಟಿ ಬಡಾವಣೆಯಲ್ಲಿ ಕಲುಷಿತ ನೀರು ಸೇವಿಸಿ ಆರು ಜನ ಸಾವಿಗೀಡಾಗಿದ್ದು, 200 ಹೆಚ್ಚು ಜನರು ಅಸ್ವಸ್ಥರಾಗಿದ್ದರು. ಈ ದುರಂತ ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಈ ಅವಘಡಕ್ಕೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕೆರೆಬಿಳಚಿ ಬಳಿ ಇರುವ ಏಷ್ಯಾದ ಎರಡನೇ ಅತಿ ದೊಡ್ಡ ಸೂಳೆಕೆರೆ ನೀರು ಕಾರಣವಾಯಿತಾ ಎಂಬ ಅನುಮಾನ ವ್ಯಕ್ತವಾಗಿತ್ತು.
ಇದನ್ನೂ ಓದಿ: ಕಲುಷಿತ ನೀರು ಸೇವಿಸಿ ಮಹಿಳೆ ಸಾವು ಕೇಸ್: ಹೊಸಪೇಟೆ ಕಮಿಷನರ್ ಸೇರಿ ಮೂವರ ಅಮಾನತು
ಹೀಗಾಗಿ ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಯ ವೈದ್ಯರು ನೀರನ್ನು ಪರೀಕ್ಷಿಸಿ ಸೂಳೆಕೆರೆ ನೀರು ಕುಡಿಯಲು ಯೋಗ್ಯವಲ್ಲವೆಂದು ವರದಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ನೀರು ಪೂರೈಕೆಯನ್ನು ಸ್ಥಗಿತಗೊಳಿಸಲಾಗಿತ್ತು. ಆದರೆ ಬರಗಾಲ ಆವರಿಸಿದ್ದರಿಂದ ನೀರಿಗೆ ಹಾಹಾಕಾರ ಶರುವಾಗಿದೆ. ಈ ಸಂಬಂಧ ಪುರಸಭೆ ಮತ್ತೆ ನೀರು ಪೂರೈಕೆ ಮಾಡುತ್ತಿದೆ. ಆದರೆ ಸೂಳೆಕೆರೆ ನೀರು ಕುಡಿಯಲು ಯೋಗ್ಯ ಎಂದು ಇನ್ನೂ ವರದಿ ಬಂದಿಲ್ಲ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 12:04 pm, Mon, 25 March 24