ವಿಜಯನಗರ, ಅಕ್ಟೋಬರ್ 09: 2 ಲಾರಿ ಮತ್ತು ಕ್ರೂಸರ್ ನಡುವೆ ಭೀಕರ ಅಪಘಾತ (Accident) ಸಂಭವಿಸಿದ ಪರಿಣಾಮ ಒಂದೇ ಕುಟುಂಬದ 7 ಜನ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಹೊಸಪೇಟೆ ಹೊರವಲಯದಲ್ಲಿ ನಡೆದಿದೆ. ಅಪಘಾತದಲ್ಲಿ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಉಮಾ(45), ಕೆಂಚವ್ವ(80), ಭಾಗ್ಯ( 32), ಅನಿಲ್(30), ಗೋಣಿಬಸಪ್ಪ(65), ಯುವರಾಜ(4) ಮತ್ತು ಭೀಮಲಿಂಗ(50) ಮೃತರು. ಲಾರಿ ಆಕ್ಸಲ್ ಕಟ್ ಆಗಿ ಭೀಕರ ದುರಂತ ಸಂಭವಿಸಿದೆ ಎನ್ನಲಾಗುತ್ತಿದೆ. ಸ್ಥಳಕ್ಕೆ ಹೊಸಪೇಟೆ, ಮರಿಯಮ್ಮನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಸದ್ಯ 7 ಶವಗಳನ್ನು ಹೊರತೆಗೆದು ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಮೂವರ ಸ್ಥಿತಿ ಗಂಭೀರವಾಗಿದ್ದು, ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದಲ್ಲಿ ಮೃತರೆಲ್ಲರೂ ಹೊಸಪೇಟೆ ಮೂಲದವರು. ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕೂಲಹಳ್ಳಿ ಗೋಣಿಬಸವೇಶ್ವರ ದೇವಸ್ಥಾನಕ್ಕೆ ಹೋಗಿ ಬರುತ್ತಿದ್ದರು. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಬೆಂಗಳೂರು: ಮಿಸ್ ಫೈರಿಂಗ್ ಆಗಿ ಇಬ್ಬರು ಕಾನ್ಸ್ಟೇಬಲ್ಗಳಿಗೆ ಗಂಭೀರ ಗಾಯವಾಗಿರುವಂತಹ ಘಟನೆ ಬೆಂಗಳೂರಿನ ಕೂಡ್ಲು ಬಳಿಯ ಕೆಎಸ್ಆರ್ಪಿ ಕ್ಯಾಂಪಸ್ನಲ್ಲಿ ನಡೆದಿದೆ. ಹಳೇ ಗುಂಡುಗಳ ಮೇಲಿನ ತಾಮ್ರ ತೆಗೆಯುತ್ತಿದ್ದಾಗ ಮಿಸ್ ಫೈರಿಂಗ್ ಆಗಿದೆ. ಪೊಲೀಸ್ ಕಾನ್ಸ್ಟೇಬಲ್ ಗಣೇಶ್ ಸೇರಿ ಇಬ್ಬರಿಗೆ ಗಂಭೀರ ಗಾಯವಾಗಿದ್ದು, ನಾರಾಯಣ ಹೆಲ್ತ್ ಸಿಟಿ ಟ್ರಾಮಾ ಸೆಂಟರ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ: ಹುಬ್ಬಳ್ಳಿ: ಚಿನ್ನಾಭರಣ ತೊಳೆದುಕೊಡುವುದಾಗಿ ಹೇಳಿ 1.45 ಲಕ್ಷ ರೂ. ಮೌಲ್ಯದ ಆಭರಣ ಎಗರಿಸಿದ ಖದೀಮರು, ಮಹಿಳೆ ಕಂಗಾಲು
ಮತ್ತೊಂದು ಪ್ರಕರಣಲ್ಲಿ ಬೈಕ್, ಆಟೋ ಗ್ಯಾಸ್ ಸಿಲಿಂಡರ್ ಕಳ್ಳತನ ಮಾಡುತ್ತಿದ್ದ ಇಮ್ರಾನ್ ಪಾಷಾ, ಹಿದಾಯತ್, ನಾಸಿರ್, ಸೈಯದ್ ಜುಬೇರ್ನನ್ನು ಕೆಂಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾತ್ರಿ ಸಮಯದಲ್ಲಿ ಹೊಂಚು ಹಾಕಿ ಕಳ್ಳತನ ಮಾಡುತ್ತಿದ್ದರು.
ನೆಲಮಂಗಲ: ಮನೆ ಬಾಗಿಲು ಮುರಿದು ಕಳ್ಳತನ ಮಾಡಿದ್ದ ನೇಪಾಳ ಮೂಲದ ಮೋಹನ್(29), ಗೋರಾಕ್ ಕಾಲೋ (38) ಸೋಲದೇವನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರ ಬಳಿ ಇದ್ದ 10.3 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ಬೆಳ್ಳಿ ವಸ್ತುಗಳ ಜಪ್ತಿ ಮಾಡಲಾಗಿದೆ. ಸೋಲದೇವನಹಳ್ಳಿ ಪೊಲೀಸ್ ಠಾಣೆ ಪ್ರಕರಣ ದಾಖಲು ಮಾಡಲಾಗಿದೆ.
ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆಯಲ್ಲಿ ಡೆಂಘೀ ಜ್ವರಕ್ಕೆ ನವ ವಿವಾಹಿತೆ ಬಲಿಯಾಗಿದ್ದಾರೆ. ಮಧುರಾ(31) ಮೃತ ಮಹಿಳೆ. ಕಳೆದೊಂದು ವಾರದಿಂದ ಡೆಂಘೀ ಜ್ವರದಿಂದ ಬಳಲುತ್ತಿದ್ದ ಮಧುರಾ ಸಾಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಹೆಚ್ಚಿನ ಚಿಕಿತ್ಸೆ ಶಿವಮೊಗ್ಗಕ್ಕೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾಳೆ. 6 ತಿಂಗಳ ಹಿಂದೆ ಅಷ್ಟೇ ಮಂಜುನಾಥ್ ಜೊತೆ ವಿವಾಹವಾಗಿತ್ತು.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 5:49 pm, Mon, 9 October 23