AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯನಗರ: ಪ್ಯಾಲೆಸ್ಟೀನ್​ ಬೆಂಬಲಿಸಿ ಸ್ಟೇಟಸ್​ ಹಾಕಿದ್ದ ಯುವಕನನ್ನು ವಶಕ್ಕೆ ಪಡೆದ ಪೊಲೀಸ್​​

ಪ್ಯಾಲೆಸ್ಟೀನ್​ ಬೆಂಬಲಿಸಿ ವಿಡಿಯೋ ಹಂಚಿಕೊಂಡಿದ್ದ ಮುಸ್ಲಿಂ ಯುವಕನ  ವಿರುದ್ಧ ಸುಮುಟೋ ಪ್ರಕರಣ ದಾಖಲು ಮಾಡಲಾಗಿದೆ. ಆಲಂ ಬಾಷಾ ವಿವಾದಾತ್ಮಕ ಪೋಸ್ಟ್ ಹಂಚಿಕೊಂಡಿದ್ದ ಯುವಕ. ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯ PSI ಮುನಿರತ್ನ ನೀಡಿದ ದೂರಿನ ಆಧಾರದ ಮೇಲೆ CRPC 108-151 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಯುವಕನನ್ಮು ಪೊಲೀಸರು ವಶಕ್ಕೆ ಪಡೆದಿದ್ದಾರೆ. 

ವಿಜಯನಗರ: ಪ್ಯಾಲೆಸ್ಟೀನ್​ ಬೆಂಬಲಿಸಿ ಸ್ಟೇಟಸ್​ ಹಾಕಿದ್ದ ಯುವಕನನ್ನು ವಶಕ್ಕೆ ಪಡೆದ ಪೊಲೀಸ್​​
ಯುವಕ ಹಂಚಿಕೊಂಡಿರುವ ಪೋಸ್ಟ್
TV9 Web
| Edited By: |

Updated on:Oct 13, 2023 | 5:31 PM

Share

ವಿಜಯನಗರ, ಅಕ್ಟೋಬರ್​​​​ 13: ಪ್ಯಾಲೆಸ್ಟೀನ್ (Palestine)​ ಬೆಂಬಲಿಸಿ ವಿಡಿಯೋ ಹಂಚಿಕೊಂಡಿದ್ದ ಮುಸ್ಲಿಂ ಯುವಕನ  ವಿರುದ್ಧ ಸುಮುಟೋ ಪ್ರಕರಣ ದಾಖಲು ಮಾಡಲಾಗಿದೆ. ಆಲಂ ಬಾಷಾ ವಿವಾದಾತ್ಮಕ ಪೋಸ್ಟ್ ಹಂಚಿಕೊಂಡಿದ್ದ ಯುವಕ. ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯ PSI ಮುನಿರತ್ನ ನೀಡಿದ ದೂರಿನ ಆಧಾರದ ಮೇಲೆ CRPC 108-151 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಯುವಕನನ್ಮು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇಸ್ರೇಲ್​​ ಮತ್ತು ಪ್ಯಾಲೆಸ್ಟೀನ್​ ಮಧ್ಯೆ ಯುದ್ಧ ನಡೆಯುತ್ತಿದೆ. ಭಾರತ ಯುದ್ಧ ಪೀಡಿತ ಇಸ್ರೇಲ್​ಗೆ ಬೆಂಬಲ ಘೋಷಣೆ ಮಾಡಿದೆ. ಆದರೆ ಭಾರತೀಯ ಮುಸ್ಲಿಂ ಆಗಿ ಪ್ಯಾಲೆಸ್ಟೀನ್​ ಹಾಗೂ ಹಮಾಸ್ ಉಗ್ರರಿಗೆ ಬೆಂಬಲಿಸಿ ಆಲಂ ಬಾಷಾ ಪೋಸ್ಟ್​ ಹಂಚಿಕೊಂಡಿದ್ದ.

ಇದನ್ನೂ ಓದಿ: ಇಸ್ರೇಲ್ ಮತ್ತು ಹಮಾಸ್ ಸಂಘರ್ಷ: ಇಸ್ರೇಲ್​​ನಿಂದ ಆಗಮಿಸಿದ ಕನ್ನಡಿಗ ಈರಣ್ಣ ಹೇಳಿದ್ದಿಷ್ಟು

ವಾಟ್ಸಾಪ್​​​ ಸ್ಟೇಟಸ್​ನಲ್ಲಿ ಯುದ್ಧ ಪೀಡಿತ ಪ್ಯಾಲೆಸ್ಟೀನ್ ಭಾವಚಿತ್ರ ಹಾಕಿ ವಿಡಿಯೋ ಹಂಚಿಕೊಂಡಿದ್ದು, ನಾವು ಪ್ಯಾಲೆಸ್ಟೀನ್ ಪರವಾಗಿದ್ದೇವೆ. ಪ್ಯಾಲೆಸ್ಟೀನ್ ಜಿಂದಾಬಾದ್ ಅಂತ ಬರೆಯಲಾಗಿದೆ.

ಆಲಂ ಬಾಷಾ ಹೊಸಪೇಟೆಯ ಸಿದ್ದಲಿಂಗಪ್ಪ ಚೌಕಿಯ ನಿವಾಸಿ ಆಗಿದ್ದು, ಅಲ್ಪಸಂಖ್ಯಾತ ಇಲಾಖೆ ಕಚೇರಿಯಲ್ಲಿ ಅಟೆಂಡರ್​ ಕೆಲಸ ಮಾಡುತ್ತಿದ್ದ.

ಇಸ್ರೇಲ್ ಮತ್ತು ಹಮಾಸ್ ಯುದ್ಧ ಪೀಡಿತ ಪ್ರದೇಶಗಳಲ್ಲಿ ಸಿಕ್ಕಿಬಿದ್ದ ನಾಗರಿಕರನ್ನು ಮರಳಿ ಭಾರತಕ್ಕೆ  ಕರೆತರಲಾಗುತ್ತಿದ್ದು, ಇದಕ್ಕಾಗಿ ‘ಆಪರೇಷನ್ ಅಜಯ್’ ಕೂಡ ಪ್ರಾರಂಭಿಸಲಾಗಿದೆ. ನಿನ್ನೆ ನಿನ್ನೆ ರಾತ್ರಿ ಇಸ್ರೇಲ್​​​ನಿಂದ 212 ಭಾರತೀಯರನ್ನು ಹೊತ್ತ ಮೊದಲ ವಿಮಾನ ಭಾರತಕ್ಕೆ ಆಗಮಿಸಿದೆ.

ಇದನ್ನೂ ಓದಿ: ಇಸ್ರೇಲ್​ನಲ್ಲಿ ಸಿಲುಕಿದ ಬಾಗಲಕೋಟೆ ಯುವತಿ: ಕುಟುಂಬಸ್ಥರಿಗೆ ಧೈರ್ಯ ತುಂಬಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಏರ್​ಪೋರ್ಟ್​​ಗೆ ಆಗಮಿಸಿದ ವಿಜಯಪುರ ಮೂಲದ ಈರಣ್ಣ ಪ್ರತಿಕ್ರಿಯೆ ನೀಡಿದ್ದು, ಇಸ್ರೇಲ್​ನಲ್ಲಿ ಯಾವುದೇ ಆತಂಕದ ಪರಿಸ್ಥಿತಿ ಇಲ್ಲ. ಗಾಜಾ ಗಡಿಯಿಂದ 300 ಕಿ.ಮಿ‌ ದೂರದ ಪ್ರದೇಶದಲ್ಲಿ ಇದ್ದೆವು . ನಾವಿದ್ದ ಪ್ರದೇಶದಲ್ಲಿ ಯಾವುದೆ ದಾಳಿ ಇರಲಿಲ್ಲ. ಆದರೆ ಮೊದಲ ಬಾರಿಗೆ ಸೈರನ್ ಮೊಳಗಿತ್ತು.

ನಾಲ್ಕು ವರ್ಷದಲ್ಲಿ ಮೊದಲ ಬಾರಿ ನಾನು ಸೈರನ್ ಕೇಳಿದ್ದು. ಸೈರನ್ ಕೇಳಿದಾಗ ಸ್ವಲ್ಪ ಭಯ ಆಗಿತ್ತು. ಯಾವುದೇ ದಾಳಿ ನಡೆಯಲಿಲ್ಲ. ನಾವೆಲ್ಲ ಸೇಫಾಗಿ ಇದ್ದೆವು. ಮನೆಯವರ ಜೊತೆ ಮಾತಾಡಿದ್ದೇವೆ. ಡಿಸೆಂಬರ್​ಗೆ ವಾಪಾಸ್ ಹೋಗುತ್ತೇನೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:21 pm, Fri, 13 October 23

Follow Us
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ