AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯನಗರ: ರಾಜ್ಯಮಟ್ಟದ ಕಬಡ್ಡಿ ಆಟಗಾರ ಬೈಕ್ ಅಪಘಾತದಲ್ಲಿ ಸಾವು

ರಾಜ್ಯಮಟ್ಟದ ಕಬಡ್ಡಿ ಆಟಗಾರ ಎನ್ ಸತೀಶ್ (22) ಎಂಬಾತ ಹೊಸಪೇಟೆಯ ಕಾಲೇಜು ರಸ್ತೆಯಲ್ಲಿ ನಡೆದ ಅಪಘಾತ ಬೈಕ್ ಅಪಘಾತದಲ್ಲಿ ಸಾವನ್ನಪ್ಪಿದ್ದಾನೆ.

ವಿಜಯನಗರ: ರಾಜ್ಯಮಟ್ಟದ ಕಬಡ್ಡಿ ಆಟಗಾರ ಬೈಕ್ ಅಪಘಾತದಲ್ಲಿ ಸಾವು
ಮೃತ ಕ್ರೀಡಾಪಟು ಎನ್ ಸತೀಶ್ (22)
ಕಿರಣ್ ಹನುಮಂತ್​ ಮಾದಾರ್
|

Updated on: Mar 06, 2023 | 2:48 PM

Share

ವಿಜಯನಗರ: ರಸ್ತೆ ಅಪಘಾತದಲ್ಲಿ ರಾಜ್ಯಮಟ್ಟದ ಕಬಡ್ಡಿ ಆಟಗಾರ ಸಾವನ್ನಪ್ಪಿರುವ ಘಟನೆ ಹೊಸಪೇಟೆಯ ಕಾಲೇಜು ರಸ್ತೆಯಲ್ಲಿ ನಡೆದಿದೆ.  ಎನ್ ಸತೀಶ್ (22) ಮೃತ ಕಬ್ಬಡ್ಡಿ ಆಟಗಾರ. ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಪುತ್ರ ಸಿದ್ದಾರ್ಥ ಸಿಂಗ್ ಅವರ ನೇತೃತ್ವದಲ್ಲಿ ಕಲ್ಯಾಣ ಕರ್ನಾಟಕದ ಪುರುಷರ ಮತ್ತು ಮಹಿಳೆಯರ ಹೊನಲು ಬೆಳಕು ಪಂದ್ಯಾವಳಿ ಆಯೋಜಿಸಲಾಗಿತ್ತು.

ಮರಿಯಮ್ಮನಹಳ್ಳಿ ತಂಡದಿಂದ ಎನ್. ಸತೀಶ್ ಭಾಗವಹಿಸಿದ್ದು, ಕಬ್ಬಡ್ಡಿ ಆಟ ಮುಗಿಸಿ, ಊಟಕ್ಕೆ ಹೊರಡುವಾಗ ಎರಡು ಬೈಕ್​ಗಳ ಮಧ್ಯೆ ಪರಸ್ಪರ ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ.  ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಹೊಸಪೇಟೆ ತಾಲೂಕಿನ ಚಿಲಕನಹಟ್ಟಿ ಗ್ರಾಮದ ಎನ್ ಸತೀಶ್​ನನ್ನ, ಕೊಪ್ಪಳ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇಂದು (ಮಾ.6) ಬೆಳಗ್ಗೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾನೆ.,  ಇನ್ನು ಈ ಕುರಿತು ಹೊಸಪೇಟೆಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:Maharashtra: ಯೂಟ್ಯೂಬ್​ ನೋಡಿ ಶಿಶುವಿಗೆ ಜನ್ಮ ನೀಡಿ, ಬಳಿಕ ಮಗುವಿನ ಕತ್ತು ಹಿಸುಕಿ ಕೊಲೆ ಮಾಡಿದ ಅಪ್ರಾಪ್ತ ಬಾಲಕಿ

ವಿಷ ಸೇವಿಸಿ ಪತಿ ಆತ್ಮಹತ್ಯೆ, ಪತ್ನಿ ವಿರುದ್ಧ ಪೊಲೀಸರಿಗೆ ದೂರು

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಉಗ್ಗೆಹಳ್ಳಿ ಗ್ರಾಮದ ಜಗದೀಶ್ ಎಂಬಾತ ಎರಡು ದಿನದ ಹಿಂದೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದ. ಇದಕ್ಕೆ ಆತನ ಪತ್ನಿಯೇ ಕಾರಣ ಎಂದು ಮೃತನ ಕುಟುಂಬಸ್ಥರು ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ನೇತ್ರಾವತಿ ವಿರುದ್ಧ ದೂರು ನೀಡಿದ್ದರು. ನಿನ್ನೆ(ಮಾ.5) ಮನೆಯಿಂದ ನಾಪತ್ತೆಯಾಗಿದ್ದ ಮೃತನ ಪತ್ನಿ ನೇತ್ರಾವತಿ, ಮನನೊಂದು ಮನೆಯ ಸಮೀಪದ ಕಾಫಿ ತೋಟದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಕುರಿತುಪ್ರಕರಣ ದಾಖಲಾಗಿತ್ತು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!