ನೂರಾರು ಕತ್ತೆ ಸೇಲ್‌ ಮಾಡಿ ಮೋಸ: ಪ್ರಕರಣ ಸಿಐಡಿ ಕೈಗೆ, ಆರೋಪಿಗಳ​ ಪತ್ತೆಗೆ ವಿಶೇಷ ತಂಡ ರಚನೆ

ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಜಿನ್ನಿ ಮಿಲ್ಕ್ ಕಂಪನಿ ನೂರಾರು ರೈತರಿಗೆ ಕತ್ತೆಗಳನ್ನು ಮಾರಾಟ ಮಾಡಿ ಮೋಸ ಮಾಡಿದೆ ಎಂಬ ಆರೋಪ ಕೇಳಿ ಬಂದಿದೆ. ಸದ್ಯ ಈ ಪ್ರಕರಣವನ್ನು ಸಿಐಡಿ ಕೈಗೆತ್ತಿಕೊಂಡಿದ್ದು ವಿಶೇಷ ತಂಡಗಳನ್ನು ರಚಿಸಿ ತನಿಖೆ ನಡೆಸುತ್ತಿದೆ. 13.50 ಕೋಟಿಗೂ ಅಧಿಕ ಹಣ ವಂಚನೆ ಮಾಡಿರುವ ಜಿನ್ನಿ ಮಿಲ್ಕ್ ಕಂಪನಿ ಎಂಡಿ, ಮ್ಯಾನೇಜರ್‌‌ ಇಬ್ಬರು ನಾಪತ್ತೆಯಾಗಿದ್ದಾರೆ.

ನೂರಾರು ಕತ್ತೆ ಸೇಲ್‌ ಮಾಡಿ ಮೋಸ: ಪ್ರಕರಣ ಸಿಐಡಿ ಕೈಗೆ, ಆರೋಪಿಗಳ​ ಪತ್ತೆಗೆ ವಿಶೇಷ ತಂಡ ರಚನೆ
ವಿಜಯನಗರ ಜಿಲ್ಲೆಯಲ್ಲಿ ಕತ್ತೆ ಖರೀದಿ
Follow us
ವಿನಾಯಕ ಬಡಿಗೇರ್​, ಉತ್ತರ ಕನ್ನಡ
| Updated By: ಆಯೇಷಾ ಬಾನು

Updated on: Sep 26, 2024 | 10:08 AM

ವಿಜಯನಗರ, ಸೆ.26: ಕತ್ತೆಗಳನ್ನ (Donkey) ಮಾರಾಟ ಮಾಡಿ ಲಕ್ಷ ಲಕ್ಷ ದೋಚಿದ್ದ ಜಿನ್ನಿ ಮಿಲ್ಕ್ ಕಂಪನಿ ಕಳ್ಳಾಟ ಪ್ರಕರಣಕ್ಕೆ ಸಂಬಂಧಿಸಿ ಕತ್ತೆ ಕಂಪನಿ ಕಳ್ಳಾಟ ಕೇಸನ್ನು ಸಿಐಡಿ (CID)ತನಿಖೆಗೆ ವಹಿಸಲು‌ ಪೊಲೀಸ್‌ ಇಲಾಖೆ ಸಿದ್ಧತೆ ನಡೆಸಿದೆ. ಜಿನ್ನಿ ಮಿಲ್ಕ್ ಕಂಪನಿ ಎಂಡಿ, ಮ್ಯಾನೇಜರ್‌‌ 13.50 ಕೋಟಿಗೂ ಅಧಿಕ ಹಣ ವಂಚನೆ ಮಾಡಿದ್ದಾರೆ. ಈ ಬಗ್ಗೆ Tv9 ವರದಿ ಬಿತ್ತರಿಸಿದ್ದು ಮೊದಲ‌ ದಿನದಿಂದಲೇ ಎಂಡಿ, ಮ್ಯಾನೇಜರ್ ಇಬ್ಬರೂ ನಾಪತ್ತೆಯಾಗಿದ್ದಾರೆ. ಸದ್ಯ ಸಿಐಡಿ ಟೀಂ ಈ ವಂಚನೆ ಜಾಲ ಬೇಧಿಸಲಿದೆ.

ಇನ್ನೆರಡು ದಿನಗಳಲ್ಲಿ ಸಿಐಡಿ‌ ಅಧಿಕಾರಿಗಳ‌ ತಂಡ ಹೊಸಪೇಟೆಗೆ ಭೇಟಿ ನೀಡಲಿದೆ. ಕತ್ತೆ ಹಾಲಿನ ಮೋಸದ ಜಾಲಕ್ಕೆ ಸಿಲುಕಿ 300ಕ್ಕೂ ಅಧಿಕ ಅನ್ನದಾತರು ಪರದಾಡುತ್ತಿದ್ದಾರೆ. ರಾಜ್ಯದ ನಾನಾ ಜಿಲ್ಲೆಗಳಿಂದ ಹೊಸಪೇಟೆ ನಗರ ಠಾಣೆಗೆ ಆಗಮಿಸಿ ನೂರಾರು ರೈತರು ದೂರು ಸಲ್ಲಿಸುತ್ತಿದ್ದಾರೆ. ಬೆಂಗಳೂರು, ಮೈಸೂರು, ಮಂಡ್ಯ, ಹಾಸನ, ತುಮಕೂರು, ಬಾಗಲಕೋಟಿ, ಬಿಜಾಪುರ, ಗದಗ, ರಾಯಚೂರು, ಬಳ್ಳಾರಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ನೂರಾರು ರೈತರು ಹೊಸಪೇಟೆಗೆ ಆಗಮಿಸಿ ಕತ್ತೆ ಖರೀದಿಗೆ ಹಣ ಹೂಡಿ ಒಡಂಬಡಿಕೆ ಬಾಂಡ್ ಸಮೇತ ದೂರು ಸಲ್ಲಿಸುತ್ತಿದ್ದಾರೆ.

ದೂರು ದಾಖಲಾಗಿ 7 ದಿನ ಕಳೆದ್ರೂ ಜಿನ್ನಿ ಮಿಲ್ಕ್ ಕಂಪನಿ ಎಂಡಿ ನೂತಲಪತಿ ಮುರಳಿ, ಮ್ಯಾನೇಜರ್ ಶಂಕರ ರೆಡ್ಡಿ ಪತ್ತೆಯಾಗಿಲ್ಲ. ವಿಜಯನಗರ ಪೊಲೀಸ್ ಇಲಾಖೆ ಪ್ರಕರಣ ಬೇಧಿಸಲು ಮೂರು ವಿಶೇಷ ತಂಡ ರಚಿಸಿದೆ. ಆಂಧ್ರದ ಅನಂತಪುರಂ, ನೆಲ್ಲೂರಿನಲ್ಲಿ ಎರಡು ತಂಡಗಳು ಶೋಧ ನಡೆಸುತ್ತಿವೆ. ಇನ್ನು ಹೊಸಪೇಟೆಯಲ್ಲೂ ಮತ್ತೊಂದು ವಿಶೇಷ ತನಿಖಾ ತಂಡ ಬೀಡು ಬಿಟ್ಟಿದೆ.

ಇದನ್ನೂ ಓದಿ: ನೂರಾರು ಕತ್ತೆ ಸೇಲ್‌ ಮಾಡಿದ್ದ ಕಂಪನಿಗೆ ಬೀಗ: ಕತ್ತೆಗಳನ್ನ ನಂಬಿ ಬಂಡವಾಳ ಹೂಡಿದ್ದವರು ಕಂಗಾಲು!

ಏನಿದು ಘಟನೆ?

ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಕಳೆದ ಆರು ತಿಂಗಳ ಹಿಂದೆ ‘ಜಿನ್ನಿ ಮಿಲ್ಕ್’ ಎಂಬ ಕಂಪನಿಯು ಆಫೀಸ್‌ಯೊಂದನ್ನ ತೆರೆದು ಕತ್ತೆಗಳ ಸಾಕಾಣಿಕೆ ಮಾಡಿ, ಹೈನುಗಾರಿಕೆಯಿಂದ ತಿಂಗಳಿಗೆ ಲಕ್ಷಾಂತರ ರೂಪಾಯಿ ದುಡಿಯಿರಿ ಎಂದು ಸ್ಲೋಗನ್ ಹಾಕಿ ರೈತರಿಗೆ ಕತ್ತೆಗಳನ್ನ ಮಾರಾಟ ಮಾಡಿತ್ತು. ರೈತರು ಅದನ್ನ ನಂಬಿ ಮೂರು ಲಕ್ಷ ರೂಗೆ ಮೂರು ಕತ್ತೆ ಹಾಗೂ ಮೂರು ಕತ್ತೆ ಮರಿಗಳನ್ನ ಖರೀದಿ ಮಾಡಿದ್ದರು. ಮೊದಲಿಗೆ ಒಂದು ಲೀಟರ್ ಕತ್ತೆ ಹಾಲಿಗೆ 2300 ರೂ ಕೊಟ್ಟು ಜಿನ್ನಿ ಕಂಪನಿಯೇ ಖರೀದಿ ಮಾಡುತ್ತಿತ್ತು. ಆದ್ರೆ, ಕಂಪನಿ ಟ್ರೇಡ್ ಲೈಸೆನ್ಸ್ ಹೊಂದಿಲ್ಲ ಎಂದು ವಿಜಯನಗರ ಜಿಲ್ಲಾಡಳಿತ ಆ ಆಫೀಸನ್ನ ಕ್ಲೋಸ್ ಮಾಡಿಸಿದೆ. ಲಕ್ಷಾಂತರ ಬಂಡವಾಳ ಹಾಕಿದ ಜನ್ರಿಗೆ ಜಿನ್ನಿ ಕಂಪನಿ ಮೋಸ ಮಾಡಿದೆ ಎನ್ನುವ ಆರೋಪ ಕೇಳಿಬಂದಿದೆ.

ಕಂಪನಿಯ ಲಕ್ಷಾಂತರ ಬಂಡವಾಳ ಹಾಕಿದ ಜನ್ರಿಗೆ ಜಿನ್ನಿ ಕಂಪನಿ ಮೋಸ ಮಾಡಿದೆ ಎನ್ನುವ ಆರೋಪ ಕೇಳಿಬಂದಿದೆ. ಜಿನ್ನಿ ಮಿಲ್ಕ್ ಕಂಪನಿ ವಿರುದ್ಧ ನೂರಾರು ರೈತರು ದೂರು ದಾಖಲಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!