Hampi Zoo: ಹಂಪಿ ಮೃಗಾಲಯದಲ್ಲಿ ಶೀಘ್ರದಲ್ಲೇ ರಾತ್ರಿ ಸಫಾರಿ; ರಾಜ್ಯದಲ್ಲೇ ಮೊದಲು

ಹಂಪಿ ಮೃಗಾಲಯವು 350 ಎಕರೆ ಪ್ರದೇಶದಲ್ಲಿ ಹರಡಿಕೊಂಡಿದ್ದು, 700 ಎಕರೆ ಅರಣ್ಯ ಪ್ರದೇಶವನ್ನು ಹೊಂದಿದೆ. ಎಲ್ಲವೂ ಅಂದುಕೊಂಡಂತೆಯೇ ನಡೆದರೆ, ಶೀಘ್ರದಲ್ಲೇ ರಾತ್ರಿ ಸಫಾರಿ ಆರಂಭವಾಗಲಿದೆ.

Hampi Zoo: ಹಂಪಿ ಮೃಗಾಲಯದಲ್ಲಿ ಶೀಘ್ರದಲ್ಲೇ ರಾತ್ರಿ ಸಫಾರಿ; ರಾಜ್ಯದಲ್ಲೇ ಮೊದಲು
ಹಂಪಿ ಮೃಗಾಲಯImage Credit source: Hospet.online
Follow us
TV9 Web
| Updated By: ಗಣಪತಿ ಶರ್ಮ

Updated on: Jul 06, 2023 | 7:02 PM

ಬೆಂಗಳೂರು: ಕರ್ನಾಟಕದ ಇತಿಹಾಸ ಪ್ರಸಿದ್ಧ ಪ್ರವಾಸಿ ತಾಣ, ವಿಜಯನಗರ ಜಿಲ್ಲೆಯ ಹಂಪಿ ಮೃಗಾಲಯದಲ್ಲಿ (Hampi zoo) ರಾತ್ರಿ ಸಫಾರಿ ಆರಂಭಿಸುವ ಸಿದ್ಧತೆಗಳು ನಡೆಯುತ್ತಿವೆ. ಎಲ್ಲವೂ ಅಂದುಕೊಂಡಂತೆಯೇ ನಡೆದರೆ, ಶೀಘ್ರದಲ್ಲೇ ರಾತ್ರಿ ಸಫಾರಿ (night safari) ಆರಂಭವಾಗಲಿದೆ. ಈ ಮೂಲಕ ರಾಜ್ಯದಲ್ಲೇ ಮೊದಲ ಬಾರಿ ರಾತ್ರಿ ಸಫಾರಿ ಆರಂಭಿಸಿದ ಹೆಗ್ಗಳಿಗೆ ಹಂಪಿಯ ಕಮಲಾಪುರದ ಅಟಲ್ ಬಿಹಾರಿ ವಾಜಪೇಯಿ ಝೂಲಾಜಿಕಲ್ ಪಾರ್ಕ್ ಅಥವಾ ಹಂಪಿ ಮೃಗಾಲಯ ಪಾತ್ರವಾಗಲಿದೆ ಎಂದು ವರದಿಯಾಗಿದೆ.

ಕರ್ನಾಟಕದ ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಮತ್ತು ಮೃಗಾಲಯ ಪ್ರಾಧಿಕಾರ, ಮೈಸೂರು, ಇದರ ಸದಸ್ಯ ಕಾರ್ಯದರ್ಶಿ ರವಿ ಬಿಪಿ ಅವರು ಮೃಗಾಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಈ ಸುಳಿವು ನೀಡಿರುವುದಾಗಿ ‘ಡೆಕ್ಕನ್ ಹೆರಾಲ್ಡ್’ ವರದಿ ಮಾಡಿದೆ.

ಹೊಸಪೇಟೆ ಮತ್ತು ಹಂಪಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ತಾಪಮಾನವು ತುಂಬಾ ಹೆಚ್ಚಾಗಿದೆ. ಆದ್ದರಿಂದ, ಮೃಗಾಲಯದಲ್ಲಿ ರಾತ್ರಿ ಸಫಾರಿ ನಡೆಸಬಹುದೇ ಎಂದು ಕೇಂದ್ರ ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೇಳಿದ್ದಾರೆ. ಅವರೂ ಇದಕ್ಕಾಗಿ ಮಾರ್ಗಸೂಚಿಗಳನ್ನು ಸಿದ್ಧಪಡಿಸುತ್ತಿದ್ದಾರೆ. ಆದರೆ, ಇದಕ್ಕೂ ಮುನ್ನ ಹಂಪಿಯಲ್ಲಿ ರಾಷ್ಟ್ರಮಟ್ಟದ ಕಾರ್ಯಾಗಾರ ನಡೆಸಬೇಕಾಗಿದೆ ಎಂದು ರವಿ ಹೇಳಿರುವುದಾಗಿ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ರಾಜ್ಯದಲ್ಲಿ ರಾತ್ರಿ ಸಫಾರಿ ಆರಂಭಿಸಿದರೆ ಅದು ಹಂಪಿ ಮೃಗಾಲಯದಲ್ಲಿ ಆಗಬೇಕು. ಈ ಬಗ್ಗೆ ಪ್ರಸ್ತಾವನೆಯನ್ನೂ ಸಲ್ಲಿಸಲಾಗಿದೆ. ಮುಂದಿನ ದಿನಗಳಲ್ಲಿ ಹಂಪಿಯಲ್ಲಿ ರಾಷ್ಟ್ರಮಟ್ಟದ ಕಾರ್ಯಾಗಾರ ಹಮ್ಮಿಕೊಳ್ಳಲಾಗುವುದು. ನಂತರ ರಾತ್ರಿ ಸಫಾರಿ ಆರಂಭಿಸಲು ವಿಶೇಷ ಅನುಮತಿ ಪಡೆಯಲಾಗುವುದು ಎಂದು ಅವರು ಹೇಳಿದ್ದಾರೆ.

ಇಡೀ ಕಲ್ಯಾಣ ಕರ್ನಾಟಕದಲ್ಲಿ ಸಫಾರಿಗೆ ಅವಕಾಶವಿರುವ ಏಕೈಕ ಮೃಗಾಲಯವಾಗಿರುವ ಹಂಪಿ ಝೂ ನಿರ್ಮಾಣವು 2013 ರಲ್ಲಿ ಪ್ರಾರಂಭವಾಗಿತ್ತು ಮತ್ತು 2017 ರಲ್ಲಿ ಪೂರ್ಣಗೊಂಡಿತು. ಆರಂಭದಲ್ಲಿ ಹುಲಿ, ಸಿಂಹ ಮತ್ತು ಚಿರತೆಗಳನ್ನು ಹೊಂದಿರುವ ಉತ್ತರ ಕರ್ನಾಟಕದ ಏಕೈಕ ಮೃಗಾಲಯವಾಗಿ ಇದು ಗುರುತಿಸಿಕೊಂಡಿತ್ತು ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: ಗಣಿ ಉದ್ಯಮಿ ಖಾರದಪುಡಿ ಮಹೇಶ್​ ಪ್ರಕರಣ: 17.24 ಕೋಟಿ ಮೌಲ್ಯದ ಆಸ್ತಿ ಜಪ್ತಿ

ಹಂಪಿ ಮೃಗಾಲಯವು ಸುಸಜ್ಜಿತ ವನ್ಯಜೀವಿ ರಕ್ಷಣಾ ಮತ್ತು ಪುನರ್ವಸತಿ ಕೇಂದ್ರವನ್ನು ಹೊಂದಿದ್ದು ಇದರಲ್ಲಿ, ಗಾಯಗೊಂಡ 20 ಕಾಡು ಕರಡಿಗಳಿಗೆ ಚಿಕಿತ್ಸೆ ನೀಡಿ ನಂತರ ಕಾಡಿಗೆ ಬಿಡಲಾಗಿದೆ ಎಂದು ರವಿ ಅವರು ತಿಳಿಸಿರುವುದನ್ನೂ ವರದಿಯಲ್ಲಿ ತಿಳಿಸಲಾಗಿದೆ.

ಹಂಪಿ ಮೃಗಾಲಯವು 350 ಎಕರೆ ಪ್ರದೇಶದಲ್ಲಿ ಹರಡಿಕೊಂಡಿದ್ದು, 700 ಎಕರೆ ಅರಣ್ಯ ಪ್ರದೇಶವನ್ನು ಹೊಂದಿದೆ. ಆದರೆ, ಮೃಗಾಲಯವನ್ನು ಇಡೀ ಅರಣ್ಯ ಭೂಮಿಗೆ ವಿಸ್ತರಿಸುವ ಯೋಜನೆ ಇಲ್ಲ. ಉಳಿದ ಭೂಮಿಯನ್ನು ಬಫರ್ ವಲಯವಾಗಿ ಉಳಿಸಿಕೊಳ್ಳಲಾಗುವುದು. ಈಗಿರುವ 350 ಎಕರೆ ಜಾಗದಲ್ಲಿ 60 ಕೋಟಿ ರೂಪಾಯಿ ಖರ್ಚು ಮಾಡಿ ಹಂಪಿ ಮೃಗಾಲಯವನ್ನು ಅತ್ಯುತ್ತಮ ಮೃಗಾಲಯವನ್ನಾಗಿ ಮಾಡಬಹುದು ಎಂದು ಅವರು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಧಾನಿ ಮೋದಿಯನ್ನು ಅಪ್ಪುಗೆಯಿಂದ ಬರಮಾಡಿಕೊಂಡ ಇರ್ಫಾನ್ ಅಲಿ
ಪ್ರಧಾನಿ ಮೋದಿಯನ್ನು ಅಪ್ಪುಗೆಯಿಂದ ಬರಮಾಡಿಕೊಂಡ ಇರ್ಫಾನ್ ಅಲಿ
ವೈಲ್ಡ್ ಕಾರ್ಡ್ ಸ್ಪರ್ಧಿಯಿಂದ ಸುರೇಶ್​ಗೆ ಅವಮಾನ; ಮನೆ ಬಿಟ್ಟು ಹೋಗ್ತಾರಾ?
ವೈಲ್ಡ್ ಕಾರ್ಡ್ ಸ್ಪರ್ಧಿಯಿಂದ ಸುರೇಶ್​ಗೆ ಅವಮಾನ; ಮನೆ ಬಿಟ್ಟು ಹೋಗ್ತಾರಾ?
ಸರ್ಫರಾಝ್ ಹಿಡಿದ ಕ್ಯಾಚ್ ನೋಡಿ ಬಿದ್ದು ಬಿದ್ದು ನಕ್ಕಿದ ವಿರಾಟ್ ಕೊಹ್ಲಿ
ಸರ್ಫರಾಝ್ ಹಿಡಿದ ಕ್ಯಾಚ್ ನೋಡಿ ಬಿದ್ದು ಬಿದ್ದು ನಕ್ಕಿದ ವಿರಾಟ್ ಕೊಹ್ಲಿ
ಅರಳಿ ಮರದ ಎಲೆ ದೀಪದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯ ತಿಳಿಯಿರಿ
ಅರಳಿ ಮರದ ಎಲೆ ದೀಪದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯ ತಿಳಿಯಿರಿ
Nithya Bhavishya: ಈ ರಾಶಿಯವರಿಗೆ ಐದು ಗ್ರಹಗಳ ಶುಭ ಫಲವಿದೆ
Nithya Bhavishya: ಈ ರಾಶಿಯವರಿಗೆ ಐದು ಗ್ರಹಗಳ ಶುಭ ಫಲವಿದೆ
ನಿಲ್ಲಿಸಿದ್ದ ಸ್ಕೂಟಿಯಿಂದ ಬುಸ್​ಗುಟ್ಟುತ್ತಾ ಹೊರಬಂದ ವಿಷಕಾರಿ ಹಾವು
ನಿಲ್ಲಿಸಿದ್ದ ಸ್ಕೂಟಿಯಿಂದ ಬುಸ್​ಗುಟ್ಟುತ್ತಾ ಹೊರಬಂದ ವಿಷಕಾರಿ ಹಾವು
ಮನೆಗೆ ನುಗ್ಗಿದ ಚಿರತೆಯಿಂದ ನಾಯಿಯ ಮೇಲೆ ಅಟ್ಯಾಕ್; ಶಾಕಿಂಗ್ ವಿಡಿಯೋ ವೈರಲ್
ಮನೆಗೆ ನುಗ್ಗಿದ ಚಿರತೆಯಿಂದ ನಾಯಿಯ ಮೇಲೆ ಅಟ್ಯಾಕ್; ಶಾಕಿಂಗ್ ವಿಡಿಯೋ ವೈರಲ್
ಮದುವೆ ಹಿಂದಿನ ರಾತ್ರಿ ಡ್ಯಾನ್ಸ್​ ಮಾಡುವಾಗ ಹೃದಯಾಘಾತದಿಂದ ಮದುಮಗ ಸಾವು!
ಮದುವೆ ಹಿಂದಿನ ರಾತ್ರಿ ಡ್ಯಾನ್ಸ್​ ಮಾಡುವಾಗ ಹೃದಯಾಘಾತದಿಂದ ಮದುಮಗ ಸಾವು!
ಶಿವಣ್ಣನ ರೀತಿ ಡೈಲಾಗ್ ಹೇಳಲು ಯಾರಿಗೆ ಸಾಧ್ಯ? ವೇದಿಕೆಯಲ್ಲಿ ಎಲ್ಲರೂ ಸುಸ್ತ್
ಶಿವಣ್ಣನ ರೀತಿ ಡೈಲಾಗ್ ಹೇಳಲು ಯಾರಿಗೆ ಸಾಧ್ಯ? ವೇದಿಕೆಯಲ್ಲಿ ಎಲ್ಲರೂ ಸುಸ್ತ್
ರಾಧಿಕ ಕರಿಯ ಅಂತ ಕರೆದ್ರೆ ಓಕೆ, ಜಮೀರ್ ಕರೆದ್ರೆ ಯಾಕೆ? ತೇಜಸ್ವಿನಿ ಗೌಡ
ರಾಧಿಕ ಕರಿಯ ಅಂತ ಕರೆದ್ರೆ ಓಕೆ, ಜಮೀರ್ ಕರೆದ್ರೆ ಯಾಕೆ? ತೇಜಸ್ವಿನಿ ಗೌಡ