ಲಂಚ ಪಡೆಯುವಾಗ ರೆಡ್​ ಹ್ಯಾಂಡೆಡ್ ಲೋಕಾಯುಕ್ತ ಬಲೆಗೆ ಬಿದ್ದ ಪಿಡಬ್ಲ್ಯುಡಿ ಅಧಿಕಾರಿಗಳು!

ವಿಜಯನಗರದಲ್ಲಿ ಲೋಕೋಪಯೋಗಿ ಇಲಾಖೆಯ ಇಬ್ಬರು ಅಧಿಕಾರಿಗಳು 1 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಾಮಗಾರಿ ಬಿಲ್ ಮಂಜೂರಿಗಾಗಿ ಗುತ್ತಿಗೆದಾರರಿಂದ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆ ಗುತ್ತಿಗೆದಾರ ಪೊಲೀಸರಿಗೆ ನೀಡಿದ ದೂರು ನೀಡಿದ್ದರು. ದೂರಿನ ಹಿನ್ನೆಲೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತರ ಬಲೆಗೆ ಪಿಡಬ್ಲ್ಯುಡಿ ಅಧಿಕಾರಿಗಳು ಬಿದ್ದಿದ್ದಾರೆ.

ಲಂಚ ಪಡೆಯುವಾಗ ರೆಡ್​ ಹ್ಯಾಂಡೆಡ್ ಲೋಕಾಯುಕ್ತ ಬಲೆಗೆ ಬಿದ್ದ ಪಿಡಬ್ಲ್ಯುಡಿ ಅಧಿಕಾರಿಗಳು!
ಲೋಕಾ ಬಲೆಗೆ ಬಿದ್ದ ಅಧಿಕಾರಿಗಳು

Updated on: Feb 11, 2026 | 11:08 AM

ವಿಜಯನಗರ, ಫೆಬ್ರವರಿ 11: ಕಾಮಗಾರಿ ಬಿಲ್ ಮಂಜೂರು ಮಾಡಲು 1 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕೋಪಯೋಗಿ ಇಲಾಖೆ (PWD) ಎಕ್ಸಿಕ್ಯೂಟಿವ್ ಎಂಜಿನಿಯರ್ ದೇವದಾಸ್ ಮತ್ತು ಅಕೌಂಟೆಂಟ್ ಮಾರುತಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ವಿಜಯನಗರ (Vijayanagar) ಜಿಲ್ಲೆಯ ಹೊಸಪೇಟೆಯ ಪಿಡಬ್ಲ್ಯುಡಿ ಕಚೇರಿಯಲ್ಲಿ ಈ ಟ್ರ್ಯಾಪ್ ಕಾರ್ಯಾಚರಣೆ ನಡೆದಿದೆ.

ಹೂವಿನ ಹಡಗಲಿಯ ಮಹೇಶ್ ಹಲಗೇರಿ ಎಂಬ ಗುತ್ತಿಗೆದಾರರು ಲೋಕೋಪಯೋಗಿ ಇಲಾಖೆಯ ಕಾಮಗಾರಿ ಟೆಂಡರ್ ಪಡೆದು ಕೆಲಸ ಪೂರ್ಣಗೊಳಿಸಿದ್ದರು. ಆದರೆ ಕಾಮಗಾರಿಯ ಬಿಲ್ ಬಿಡುಗಡೆ ಮಾಡಲು ದೇವದಾಸ್ ಹಾಗೂ ಅಕೌಂಟೆಂಟ್ ಮಾರುತಿ 1 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಇದರಿಂದ ಬೇಸತ್ತ ಮಹೇಶ್ ಹಲಗೇರಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಮೇರೆಗೆ ಲೋಕಾಯುಕ್ತ ಡಿವೈಎಸ್ಪಿ ಸಚಿನ್ ಎಸ್ ಛಲವಾದಿ ನೇತೃತ್ವದಲ್ಲಿ ಪಿಐಗಳಾದ ರಾಜೇಶ್ ಲಮಾಣಿ, ಅಮರೇಶ್ ಹುಬ್ಬಳ್ಳಿ ಹಾಗೂ ಸಿಬ್ಬಂದಿ ಟ್ರ್ಯಾಪ್ ನಡೆಸಿ, ಲಂಚದ ಹಣ ಸ್ವೀಕರಿಸುವಾಗ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಈ ಮೊದಲೂ ಲಂಚ ಪಡೆಯುತ್ತಾ ರೆಡ್​ಹ್ಯಾಂಡೆಡ್ ಆಗಿ ಸಿಕ್ಕಿದ್ದ ಅಧಿಕಾರಿಗಳು

ಕಳೆದ ತಿಂಗಳು ಕಲಬುರಗಿಯಲ್ಲಿ ಕಮಲಾಪುರ ತಹಶೀಲ್ದಾರ್ ಕಚೇರಿಯ ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ) ಶಶಿಕುಮಾರ್ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರಿಂದ ಬಂಧಿಸಲ್ಪಟ್ಟಿದ್ದರು. ಜಮೀನು ದಾಖಲೆಗಳನ್ನು ನೀಡುವ ವಿಚಾರದಲ್ಲಿ ಪುಟ್ಟ ಕಿಶನ್ ರಾಥೋಡ್ ಅವರಿಂದ 20,000 ರೂ.ಗಿಂತ ಹೆಚ್ಚು ಹಣಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿತ್ತು. ಈ ಕುರಿತು ಕಿಶನ್ ನೀಡಿದ ದೂರಿನ ಮೇರೆಗೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು, ಹಣ ಸ್ವೀಕರಿಸುವ ಕ್ಷಣದಲ್ಲೇ ಶಶಿಕುಮಾರ್ ಅವರನ್ನು ರೆಡ್‌ಹ್ಯಾಂಡ್ ಆಗಿ ಹಿಡಿದಿದ್ದರು.

ಇದನ್ನೂ ಓದಿ ಲಂಚ ಪಡೆಯುತ್ತಿರುವಾಗಲೇ ಲೋಕಾಯುಕ್ತ ಕೈಗೆ ಸಿಕ್ಕಿಬಿದ್ದ ಎಫ್​ಡಿಎ!

ಇನ್ನೊಂದು ಪ್ರಕರಣದಲ್ಲಿ ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಗೋವಿಂದರಾಜು 4 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದರು. ಚೀಟಿ ವ್ಯವಹಾರ ಪ್ರಕರಣದಲ್ಲಿ ಬೆದರಿಕೆ ಹಾಕಿ ಒಟ್ಟು 5 ಲಕ್ಷ ರೂ. ಬೇಡಿಕೆ ಇಟ್ಟಿದ್ದರೆಂದು ದೂರಿನಲ್ಲಿ ಉಲ್ಲೇಖವಾಗಿತ್ತು. ಈಗಾಗಲೇ 1 ಲಕ್ಷ ರೂ. ಪಡೆದಿದ್ದ ಅವರು, ಉಳಿದ ಹಣ ಸ್ವೀಕರಿಸುವಾಗ ಟ್ರ್ಯಾಪ್ ಆಗಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
Loading...
Unable to load recommendations.
Follow Us