AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯನಗರ ತ್ರಿವಳಿ ಕೊಲೆಗೆ ಟ್ವಿಸ್ಟ್​​: ಮೂವರನ್ನ ಮನೆಯಲ್ಲೇ ಹೂತುಹಾಕಿದ್ದ, ಲವ್​​ ಮ್ಯಾಟರ್​ ಹತ್ಯೆಗೆ ಕಾರಣವಾಯ್ತಾ?

ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ ನಡೆದ ಭೀಕರ ತ್ರಿವಳಿ ಕೊಲೆ ಪ್ರಕರಣ ಸದ್ಯ ಸಂಚಲನ ಸೃಷ್ಟಿಸಿದೆ. ವ್ಯಕ್ತಿಯೋರ್ವ ತಂದೆ, ತಾಯಿ ಮತ್ತು ಸಹೋದರಿಯನ್ನು ಕೊಲೆ ಮಾಡಿ ಬಾಡಿಗೆ ಮನೆಯಲ್ಲೇ ಹೂತುಹಾಕಿದ್ದ. ಜನವರಿ 27ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮನೆ ಮಾಲಿಕರನ್ನು ಕಳೆದುಕೊಂಡ ಸಾಕು ನಾಯಿ ಕೂಡ ರೋಧಿಸಿದೆ.

ವಿಜಯನಗರ ತ್ರಿವಳಿ ಕೊಲೆಗೆ ಟ್ವಿಸ್ಟ್​​: ಮೂವರನ್ನ ಮನೆಯಲ್ಲೇ ಹೂತುಹಾಕಿದ್ದ, ಲವ್​​ ಮ್ಯಾಟರ್​ ಹತ್ಯೆಗೆ ಕಾರಣವಾಯ್ತಾ?
ಬಾಡಿಗೆ ಮನೆ, ಆರೋಪಿ ಅಕ್ಷಯ್Image Credit source: tv9 kannada
ವಿನಾಯಕ ಬಡಿಗೇರ್​
| Edited By: |

Updated on:Jan 30, 2026 | 8:32 PM

Share

ವಿಜಯನಗರ, ಜನವರಿ 30: ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ ಘೋರವೇ ನಡೆದು ಹೋಗಿದೆ. ವ್ಯಕ್ತಿಯೊಬ್ಬ ತನ್ನ ತಂದೆ, ತಾಯಿ ಹಾಗೂ ಸಹೋದರಿಯನ್ನೇ ಕೊಂದು ಹಾಕಿದ್ದಾನೆ. ಅಕ್ಷಯ್ ಎಂಬಾತ ತನ್ನ ತಂದೆ ಭೀಮರಾಜ್, ತಾಯಿ ಜಯಲಕ್ಷ್ಮೀ ಹಾಗೂ ಸಹೋದರಿ ಅಮೃತಾ ಅವರನ್ನ ಜನವರಿ 27 ರಂದೇ ಕೊಲೆ (murder) ಮಾಡಿದ್ದಾನೆ. ಮೂವರ ಶವಗಳನ್ನ ಬಾಡಿಗೆ ಮನೆಯಲ್ಲಿ ಸಮಾಧಿ ಮಾಡಿದ್ದಾನೆ. ವಿಜಯನಗರ ಎಸ್​ಪಿ ಜಾಹ್ನವಿ, ಕೂಡ್ಲಿಗಿ DySP ಮಲ್ಲೇಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಮನೆಯಲ್ಲೇ ಸಮಾಧಿ

ಮೂಲತಃ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ದೊಡ್ಡಕಿಟ್ಟದಹಳ್ಳಿಯ ಅಕ್ಷಯ್ ಕುಟುಂಬ ಸದ್ಯ ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲೇ ನೆಲಸಿತ್ತು. ಬಾಡಿಗೆ ಮನೆಯಲ್ಲಿ ವಾಸಗಿದ್ದು, ರಿ ಬಟನ್ ಶಾಪ್ ಇಟ್ಟುಕೊಂಡಿದ್ದರು. ಆದರೆ ಮನೆಯಲ್ಲಿ ಅದೇನ್ ಆಯ್ತೋ ಏನೋ, ಜನವರಿ 27 ರಂದು ಮೂವರ ಕತೆ ಮುಗಿಸಿದ್ದಾನೆ. ಮನೆಯಲ್ಲೇ ಮೂವರು ಶವಗಳನ್ನ ಹೂತು ಹಾಕಿ, ಬೆಂಗಳೂರಿಗೆ ಎಸ್ಕೇಪ್ ಆಗಿದ್ದ.

ಇದನ್ನೂ ಓದಿ: ತನ್ನ ತಂದೆ-ತಾಯಿ, ಸಹೋದರಿಯನ್ನು ಕೊಂದ ಯುವಕ: ಮಿಸ್ಸಿಂಗ್ ಕೇಸ್ ಕೊಡಲು ಹೋಗಿ ಸತ್ಯ ಕಕ್ಕಿದ ಭೂಪ!

ಹೀಗೆ ಬೆಂಗಳೂರಿಗೆ ಬಂದವನು ನೇರ ತಿಲಕ್​ನಗರ ಠಾಣೆಗೆ ಹೋದ ಅಕ್ಷಯ್​​ ನನ್ನ ತಂದೆ ತಾಯಿ, ಸಹೋದರಿ ನಾಪತ್ತೆ ಆಗಿದ್ದಾರೆ ಅಂತಾ ಕಂಪ್ಲೇಂಟ್‌ ಕೊಟ್ಟಿದ್ದ. ಪೊಲೀಸರು ಪ್ರಶ್ನೆ ಮಾಡ್ತಿದ್ದಂತೆ ನಾನೇ ಕೊಂದಿರೋದಾಗಿ ಹೇಳಿದ್ದಾನೆ. ಒಮ್ಮೆ ಸಂಡೂರಿನಲ್ಲಿ ಶವ ಎಸೆದಿರೋದಾಗಿ ಹೇಳಿದರೆ, ಮತ್ತೊಮ್ಮೆ ಮನೆಯಲ್ಲೇ ಶವ ಹೂತಿದ್ದಾಗಿ ಹೇಳಿದ್ದ.

ಸಹೋದರಿ ಪ್ರೀತಿಯೇ ಹತ್ಯೆಗೆ ಕಾರಣವಾಯ್ತಾ?

ಅಕ್ಷಯ್ ಸಹೋದರಿ ಅಮೃತಾ ವ್ಯಕ್ತಿಯೊಬ್ಬನನ್ನು ಪ್ರೀತಿಸುತ್ತಿದ್ದಳಂತೆ. ಅಮೃತಾ ಪ್ರೀತಿಗೆ ತಂದೆ, ತಾಯಿ ಸಪೋರ್ಟ್ ಮಾಡುತ್ತಿದ್ದರಂತೆ. ಇದೇ ವಿಚಾರಕ್ಕೆ ಗಲಾಟೆಯಾಗಿ ತಂದೆ, ತಾಯಿ, ಸಹೋದರಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಸಂಬಂಧಿ ವಾಣಿ ಹೇಳಿದ್ದಿಷ್ಟು

ಸಂಬಂಧಿ ವಾಣಿ ಎಂಬುವವರು ಮಾತನಾಡಿದ್ದು, ಅಕ್ಷಯ್ ಕುಟುಂಬ ಚಿತ್ರದುರ್ಗದಲ್ಲಿ ರಿ ಬಟನ್ ಶಾಪ್ ಇಟ್ಟುಕೊಂಡಿದ್ದರು. ನಂತರ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಸ್ವಾಮಿಹಳ್ಳಿಯಲ್ಲಿ ಶಾಪ್ ಇಟ್ಟಿದ್ದರು. ಆನಂತರ ದಾವಣಗೆರೆ ಜಿಲ್ಲೆಯ ಜಗಳೂರಿಗೆ ಸ್ಥಳಾಂತರವಾಗಿದ್ದರು. ಜಗಳೂರಿನಲ್ಲಿ ಒಂದೂವರೆ ಕೋಟಿ ರೂ. ಮೌಲ್ಯದ ಮನೆ ನಿರ್ಮಿಸಿದ್ದರು. 2 ವರ್ಷದ ಹಿಂದೆ ವಿಜಯನಗರ ಜಿಲ್ಲೆಯ ಕೊಟ್ಟೂರಿಗೆ ಶಿಫ್ಟ್ ಆಗಿದ್ದರು. ದಂಪತಿ, ಮಕ್ಕಳು ಅನ್ಯೋನ್ಯವಾಗಿದ್ದರು ಎಂದು ಹೇಳಿದ್ದಾರೆ. ಇನ್ನು ಮನೆ ಮಾಲಿಕರನ್ನು ಕಳೆದುಕೊಂಡ ಸಾಕು ನಾಯಿ ಕೂಡ ರೋಧಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:31 pm, Fri, 30 January 26

Follow Us
ವಿನಾಯಕ ಬಡಿಗೇರ್​
ವಿನಾಯಕ ಬಡಿಗೇರ್​
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್