ವಿಜಯನಗರ, (ಸೆಪ್ಟೆಂಬರ್ 13): ವಿಧಾನಸಭೆ ಟಿಕೆಟ್ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸಿಸಿಬಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಈಗಾಗಲೇ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ, ಪ್ರಜ್ವಲ್ ಹಾಗೂ ಶ್ರೀಕಾಂತ್ ಎನ್ನುವರನ್ನು ಬಂಧಿಸಿ ಬೆಂಗಳೂರಿಗೆ ಕರೆದುತಂದಿದ್ದಾರೆ. ಇನ್ನು ಈ ಪ್ರಕರಣದಲ್ಲಿ ಸ್ವಾಮೀಜಿಯೊಬ್ಬರ ಹೆಸರು ಕೇಳಿಬಂದಿದೆ. ಹಗಡಲಿ ತಾಲೂಕಿನ ಹಿರೇಹಡಗಲಿ ಹಾಲು ಮಠದ ಅಭಿನವ ಹಾಲಶ್ರೀ A3 ಆರೋಪಿಯಾಗಿದ್ದು, ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಹಾಲಶ್ರೀ ಯಾರ ಕೈಗೂ ಸಿಗದೇ ಅಜ್ಞಾತ ಸ್ಥಳಕ್ಕೆ ತರಳಿದ್ದಾರೆ.
ಉದ್ಯಮಿ ಗೋವಿಂದ್ ಬಾಬು ಕಡೆದಿಂದ ಕೋಟ್ಯಂತರ ರೂಪಾಯಿ ಪಡೆದು ವಂಚನೆ ಕೇಸ್ನಲ್ಲಿ ಮೂರು ಆರೋಪಿಗಳ ಬಂಧನವಾಗುತ್ತಿದ್ದಂತೆಯೇ 3ನೇ ಆರೋಪಿಯಾಗಿರುವ ಹಿರೇಹಡಗಲಿ ಹಾಲ ಮಠದ ಅಭಿನವ ಹಾಲಶ್ರೀ ನಾಪತ್ತೆಯಾಗಿದ್ದಾರೆ. ಹಾಲ ಮಠಕ್ಕೂ ಬಾರದೇ, ಯಾರ ಸಂಪರ್ಕಕ್ಕೂ ಸಿಗದ ಅಜ್ಞಾತ ಸ್ಥಳಕ್ಕೆ ತರಳಿದ್ದಾರೆ. ಇನ್ನು ಬೆಳಗಿನಿಂದ ಹಾಲಶ್ರೀ ಮೊಬೈಲ್ ಸ್ವೀಚ್ ಆಫ್ ಆಗಿದೆ.
ಇದನ್ನೂ ಓದಿ: ಚೈತ್ರಾ ಕುಂದಾಪುರಗೆ ಮನೆಯಲ್ಲಿ ಆಶ್ರಯ ನೀಡಿದ್ದ ಕಾಂಗ್ರೆಸ್ ಮಾಧ್ಯಮ ವಕ್ತಾರೆಗೂ ಸಂಕಷ್ಟ
ಚೈತ್ರಾ ಕುಂದಾಪುರ ತನ್ನ ಸಂಗಡಿಗರೊಂದಿಗೆ ಸೇರಿಕೊಂಡು ಬೈಂದೂರಿನ ಉದ್ಯಮಿಯೊಬ್ಬರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ್ದರು ಎಂಬ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಕುರಿತು ಉದ್ಯಮಿ ಬೆಂಗಳೂರು ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಚೈತ್ರಾಳನ್ನು ನಿನ್ನೆ (ಸೆಪ್ಟೆಂಬರ್ 12) ರಾತ್ರಿ ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿ ಇದೀಗ ಬೆಂಗಳೂರಿಗೆ ಕರೆದುಕೊಂಡು ಬಂದಿದ್ದು, ಮೂವರು ಆರೋಪಿಗಳ ಮೆಡಿಕಲ್ ಚೆಕಪ್ ಮಾಡಿ ಬಳಿಕ ಸಂಜೆ ವೇಳೆಗೆ ನ್ಯಾಯಾಲಕ್ಕೆ ಹಾಜರುಪಡಿಸಲಿದ್ದಾರೆ.
ಮತ್ತಷ್ಟು ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ