AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಮತ್ತೊಂದು ಬ್ಯಾಂಕ್ ದರೋಡೆ: ಮನಗೂಳಿ ಕೆನರಾ ಬ್ಯಾಂಕ್ ದೋಚಿದ ಖದೀಮರು

ಬೀದರ್​​ನಲ್ಲಿ ಎಟಿಎಂಗೆ ಹಣ ತುಂಬಿಸಲು ಬಂದ ಸಿಬ್ಬಂದಿಯನ್ನು ಹಾಡ ಹಗಲೇ ದರೋಡೆಕೋರರು ಶೂಟ್ ಮಾಡಿ ಹಣ ಸಮೇತ ಪರಾರಿಯಾಗಿದ್ದರು. ಬಳಿಕ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿಯೂ ಬ್ಯಾಂಕ್ ದರೋಡೆ ನಡೆದಿತ್ತು. ಈ ಬೆನ್ನಲ್ಲೇ ಇದೀಗ ವಿಜಯಪುರ ಜಿಲ್ಲೆಯು ಬಸವನಬಾಗೇವಾಡಿ ತಾಲೂಕಿನ ಮನಗೂಳಿಯಲ್ಲಿನ ಕೆನರಾ ಬ್ಯಾಂಕ್​ ದರೋಡೆ ಮಾಡಲಾಗಿದೆ.

ಕರ್ನಾಟಕದಲ್ಲಿ ಮತ್ತೊಂದು ಬ್ಯಾಂಕ್ ದರೋಡೆ: ಮನಗೂಳಿ ಕೆನರಾ ಬ್ಯಾಂಕ್ ದೋಚಿದ ಖದೀಮರು
ಮನಗೂಳಿ ಕೆನರಾ ಬ್ಯಾಂಕ್​
ಅಶೋಕ ಯಡಳ್ಳಿ, ವಿಜಯಪುರ
| Edited By: ವಿವೇಕ ಬಿರಾದಾರ|

Updated on:May 25, 2025 | 6:53 PM

Share

ವಿಜಯಪುರ, ಮೇ 25: ಬಸವನಬಾಗೇವಾಡಿ (Basavan Bagewadi) ತಾಲೂಕಿನ ಮನಗಳಿ ಪಟ್ಟಣದಲ್ಲಿನ ಕೆನರಾ ಬ್ಯಾಂಕ್ (Canara Bank) ದರೋಡೆ ಮಾಡಲಾಗಿದೆ. ಬ್ಯಾಂಕ್​ ಬಾಗಿಲಿನ ಕೀ ಮುರಿದು ಹಾಗೂ ಕಿಟಕಿ ಸರಳು ಮುರಿದು ಒಳ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಚಿನ್ನಾಭರಣ ಕದ್ದು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಶನಿವಾರ (ಮೇ.24) ತಡರಾತ್ರಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಶನಿವಾರ ಮತ್ತು ಭಾನುವಾರ ಎರಡು ದಿನ ರಜೆ ಇದ್ದ ಹಿನ್ನೆಲೆಯಲ್ಲಿ ಸಿಬ್ಬಂದಿ ಬ್ಯಾಂಕ್​ಗೆ ಬಂದಿಲ್ಲ.

ಇನ್ನು, ಬ್ಯಾಂಕ್ ಕಳ್ಳತನವಾದ ಸುದ್ದಿ ತಿಳಿದು, ಸಿಬ್ಬಂದಿ, ಮನಗೂಳಿ ಠಾಣೆ ಪೊಲೀಸರು ಮತ್ತು ಶ್ವಾನದಳ ಸ್ಥಳಕ್ಕೆ ಆಗಮಿಸಿದೆ. ಶ್ವಾನದಳ ಹಾಗೂ ಪೋಲಿಸರು ಸ್ಥಳದಲ್ಲಿ ಪರಿಶೀಲನೆ ನಡೆಸಿದರು. ಸ್ಥಳಕ್ಕೆ ಎಸ್ಪಿ ಲಕ್ಷ್ಮಣ ನಿಂಬರಗಿ ಎಎಸ್ಪಿ ರಾಮನಗೌಡ ಹಟ್ಟಿ ಹಾಗೂ ಇತರೆ ಅಧಿಕಾರಿಗಳು ಭೇಟಿ ನೀಡಿ ಮಾಹಿತಿ ಕಲೆಹಾಕುತ್ತಿದ್ದಾರೆ.

ಇದನ್ನೂ ಓದಿ: ಬಸವನಬಾಗೇವಾಡಿ ಮನಗೂಳಿ ಬಳಿ ಭೀಕರ ಅಪಘಾತ: 6 ಮಂದಿ ಸಾವು

ಸರಣಿ ಮನೆಗಳ್ಳತನ

ಬಾಗಲಕೋಟೆ: ಬಾದಾಮಿ ತಾಲೂಕಿನ ಕುಳಗೇರಿ ಕ್ರಾಸ್ ಬಳಿ ಇದ್ದ ನಾಲ್ಕು ಮನೆಗಳಲ್ಲಿ ಕಳ್ಳತನವಾಗಿದೆ. ಶಿಕ್ಷಕ ಜಕಾತಿ ಮನೆ ಸೇರಿದಂತೆ ನಾಲ್ವರ ಮನೆಗಳಲ್ಲಿ ಕಳ್ಳತನವಾಗಿದೆ. ಎರಡು ಮನೆಗಳಲ್ಲಿದ್ದ ಹಣ, ಒಡವೆ ದೋಚಿ ಕಳ್ಳರು ಪರಾರಿಯಾಗಿದ್ದಾರೆ. ಕಳ್ಳರು ಕೈಯಲ್ಲಿ ರಾಡ್ ಹಿಡಿದುಕೊಂಡು ಮುಸುಕುಧಾರಿಯಾಗಿ ಬಂದಿದ್ದರು ಎಂದು ಮಾಹಿತಿ ಲಭ್ಯವಾಗಿದೆ. ಟಾರ್ಚ್ ಹಿಡಿದು ಕಳ್ಳರು ರಾಜಾರೋಷವಾಗಿ ಓಡಾಡುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕರ್ನಾಟಕದ ಇನ್ನಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:53 pm, Sun, 25 May 25

Follow Us
Ashok Yadalli
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು