2 ಗ್ಯಾರಂಟಿಗಳನ್ನು ಕೈ ಬಿಡಬೇಕೆಂದು ಸಿದ್ದರಾಮಯ್ಯಗೆ ಮನವಿ ಮಾಡ್ತೇವೆ: ಕಾಂಗ್ರೆಸ್​ ಶಾಸಕ

ನಮ್ಮ ಕ್ಷೇತ್ರಕ್ಕೆ ಸರ್ಕಾರದಿಂದ ಯಾವುದೇ ಅನುದಾನ ಬರುತ್ತಿಲ್ಲ ಎಂದು ಹೇಳಿದ್ದ ಕಾಂಗ್ರೆಸ್​ ಶಾಸಕ ಗವಿಯಪ್ಪ ಸರ್ಕಾರ ಮುಜುಗರ ಪಡುವಂತೆ ಮಾಡಿದ್ದರು. ಇದೀಗ, ಐದು ಗ್ಯಾರಂಟಿ ಯೋಜನೆಗಳಲ್ಲಿ ಎರಡನ್ನು ಕೈಬಿಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡುತ್ತೇವೆ ಎಂದು ಹೇಳಿದ್ದಾರೆ.

2 ಗ್ಯಾರಂಟಿಗಳನ್ನು ಕೈ ಬಿಡಬೇಕೆಂದು ಸಿದ್ದರಾಮಯ್ಯಗೆ ಮನವಿ ಮಾಡ್ತೇವೆ: ಕಾಂಗ್ರೆಸ್​ ಶಾಸಕ
ಶಾಸಕ ಗವಿಯಪ್ಪ
Follow us
ವೀರೇಶ್ ದಾನಿ, ಬಳ್ಳಾರಿ-ವಿಜಯನಗರ
| Updated By: ವಿವೇಕ ಬಿರಾದಾರ

Updated on:Nov 26, 2024 | 11:53 AM

ವಿಜಯನಗರ, ನವೆಂಬರ್ 26: ಪಂಚ ಗ್ಯಾರಂಟಿಗಳು (Guarantee) ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ 2.O ಸರ್ಕಾರದ ಮಹತ್ವದ ಯೋಜನೆಗಳಾಗಿವೆ. ಐದು ಗ್ಯಾರಂಟಿಗಳಲ್ಲಿ ಎರಡನ್ನು ಕೈ ಬಿಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡುತ್ತೇನೆ ಎಂದು ಕಾಂಗ್ರೆಸ್​ ಪಕ್ಷದ ಶಾಸಕ ಗವಿಯಪ್ಪ ಹೇಳಿದ್ದಾರೆ.

ಹೊಸಪೇಟೆಯ ಇಪ್ಪಿತೇರಿ ಮಾಗಾಣಿಯಲ್ಲಿ ನಡೆದ ಭೂಮಿಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗ್ಯಾರಂಟಿಗಳಿಂದ ಆಶ್ರಯ ಮನೆಗಳು ಬರುತ್ತಿಲ್ಲ. ಶಕ್ತಿ ಯೋಜನೆ ಸೇರಿದಂತೆ ಇನ್ನೆರೆಡು ಗ್ಯಾರಂಟಿಗಳು ಕಡಿಮೆ ಮಾಡಲು ಮುಖ್ಯಮಂತ್ರಿಗಳಿಗೆ ಹೇಳುತ್ತೇವೆ. ಅವರೇನು ತೀರ್ಮಾನ ಮಾಡುತ್ತಾರೆ ನೋಡೋಣ ಎಂದು ಹೇಳಿದರು.

ಅನುದಾನ ನೀಡಿಲ್ಲ ಎಂದಿದ್ದ ಗವಿಯಪ್ಪ

ನಮ್ಮ ಕ್ಷೇತ್ರಕ್ಕೆ ಸರ್ಕಾರದಿಂದ ಯಾವುದೇ ಅನುದಾನ ಬರುತ್ತಿಲ್ಲ ಎಂದು ಶಾಸಕ ಗವಿಯಪ್ಪ ಹೇಳಿದ್ದರು. ಇದಕ್ಕೆ ಸ್ಥಳೀಯ ಕಾಂಗ್ರೆಸ್ ಮುಖಂಡರೇ ಶಾಸಕರ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ಶಾಸಕ ಹೆಚ್​ಆರ್ ಗವಿಯಪ್ಪ ಹೊಸಪೇಟೆ ಪಾಲಿಗೆ ಶಾಪವಾಗಿದ್ದಾರೆ ಎಂದು ಹುಡಾ ಅಧ್ಯಕ್ಷ ಇಮಾಮ್ ನಿಯಾಜಿ ಕಿಡಿಕಾರಿದ್ದರು. ವಿಜಯನಗರ ಕ್ಷೇತ್ರಕ್ಕೆ ಅಂದಾಜು 150 ಕೋಟಿ ರೂಪಾಯಿ ಅನುದಾನ ಬಂದರೂ ಶಾಸಕ ಗವಿಯಪ್ಪ ಸುಳ್ಳು ಹೇಳುತ್ತಾರೆ ಎಂದು ಇಮಾಮ್ ನಿಯಾಜಿ ಅಸಮಾಧಾನ ಹೊರಹಾಕಿದ್ದರು.

ಇದನ್ನೂ ಓದಿ: ಕರ್ನಾಟಕದಲ್ಲಿ ಮತ್ತೊಂದು ಗ್ಯಾರಂಟಿ ಜಾರಿಯಾಗುತ್ತಾ? ಚರ್ಚೆಗೆ ಗ್ರಾಸವಾದ ವಿದ್ಯಾರ್ಥಿ ಪ್ರಶ್ನೆಗೆ ಡಿಸಿಎಂ ಕೊಟ್ಟ ಉತ್ತರ

ಐದು ಗ್ಯಾರಂಟಿಗಳನ್ನು ಸಮರ್ಪಕವಾಗಿ ನೀಡಲು ಸರ್ಕಾರದ ಬಳಿ ಹಣವಿಲ್ಲ ಎಂದು ವಿಪಕ್ಷಗಳು ಆರೋಪ ಮಾಡುತ್ತಿರುವ ನಡುವೆಯೇ ಸ್ವತಃ ಕಾಂಗ್ರೆಸ್​ ಪಕ್ಷದ ಶಾಸಕರ ಈ ಹೇಳಿಕೆಗಳು ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:07 am, Tue, 26 November 24

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!