ಸರ್ಕಾರಿ ಬಸ್ ಡಿಕ್ಕಿ: ಬೈಕ್‌ನಲ್ಲಿದ್ದ ಬ್ಯಾಂಕ್ ಮ್ಯಾನೇಜರ್-ಕ್ಯಾಷಿಯರ್ ಇಬ್ಬರೂ ಸ್ಥಳದಲ್ಲೇ ದುರ್ಮರಣ

| Updated By: preethi shettigar

Updated on: Mar 20, 2021 | 12:22 PM

ಖೇಡಗಿ ಗ್ರಾಮದಲ್ಲಿರುವ ಕೆವಿಜಿ ಬ್ಯಾಂಕ್ ಶಾಖೆಯಲ್ಲಿ ಇವರಿಬ್ಬರೂ ಕಾರ್ಯನಿರ್ವಹಿಸುತ್ತಿದ್ದರು. ಸರ್ಕಾರಿ ಬಸ್ ಮತ್ತು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂಡಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸರ್ಕಾರಿ ಬಸ್ ಡಿಕ್ಕಿ: ಬೈಕ್‌ನಲ್ಲಿದ್ದ ಬ್ಯಾಂಕ್ ಮ್ಯಾನೇಜರ್-ಕ್ಯಾಷಿಯರ್ ಇಬ್ಬರೂ ಸ್ಥಳದಲ್ಲೇ ದುರ್ಮರಣ
ಸರ್ಕಾರಿ ಬಸ್ ಡಿಕ್ಕಿ: ಬೈಕ್‌ನಲ್ಲಿದ್ದ ಬ್ಯಾಂಕ್ ಮ್ಯಾನೇಜರ್-ಕ್ಯಾಷಿಯರ್ ಇಬ್ಬರೂ ಸ್ಥಳದಲ್ಲೇ ದುರ್ಮರಣ
Follow us on

ವಿಜಯಪುರ: ರಾಜ್ಯ ಸರ್ಕಾರಿ ಬಸ್ ಡಿಕ್ಕಿಯಾಗಿ ಬೈಕ್‌ನಲ್ಲಿದ್ದ ಇಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಾಳಸಂಗಿ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಸರ್ಕಾರಿ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್‌ನಲ್ಲಿದ್ದ ಬ್ಯಾಂಕ್ ಮ್ಯಾನೇಜರ್ ಡಿ.ಎಸ್.ಬಿರಾದಾರ್ ಮತ್ತು ಕ್ಯಾಷಿಯರ್ ಚೈತನ್ಯ ಕುಮಾರ್ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ.

ಖೇಡಗಿ ಗ್ರಾಮದಲ್ಲಿರುವ ಕೆವಿಜಿ ಬ್ಯಾಂಕ್ ಶಾಖೆಯಲ್ಲಿ ಇವರಿಬ್ಬರೂ ಕಾರ್ಯನಿರ್ವಹಿಸುತ್ತಿದ್ದರು. ಸರ್ಕಾರಿ ಬಸ್ ಮತ್ತು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂಡಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: 

ಅಪಘಾತದಲ್ಲಿ ಅಗಲಿದ ಕಟ್ಟಾ ಅಭಿಮಾನಿಯ ನೆನೆದು ಬಿಕ್ಕಿ ಬಿಕ್ಕಿ ಅತ್ತ ಹೊನ್ನಾಳಿ ಶಾಸಕ ರೇಣುಕಾಚಾರ್ಯ

Road Accident ಬೆಂಗಳೂರು, ಚಿತ್ರದುರ್ಗದಲ್ಲಿ ಪ್ರತ್ಯೇಕ ಅಪಘಾತ.. ಪಾರ್ಟಿ ಮುಗಿಸಿ ಸ್ನೇಹಿತನ ಹೊಸ ಬೈಕ್​ ಏರಿದ್ದವ ಅಪಘಾತದಲ್ಲಿ ಸಾವು

Published On - 12:14 pm, Sat, 20 March 21