AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ; 10ನೇ ತರಗತಿ ಪಾಸಾಗಿದ್ರೆ ಸಾಕು!

ವಿಜಯಪುರ ಜಿಲ್ಲಾ ನ್ಯಾಯಾಲಯದಲ್ಲಿ 10ನೇ ತರಗತಿ ಪಾಸಾದವರಿಗೆ ಸೇವಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 30 ಹುದ್ದೆಗಳಿದ್ದು, ಪ್ರತಿ ತಿಂಗಳು 21,700 ರಿಂದ 46,650 ರೂ. ವೇತನ ಶ್ರೇಣಿ ಇರುತ್ತದೆ. ಈ ಹುದ್ದೆಗಳಿಗೆ ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ, ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಸಕ್ತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಡಿಸೆಂಬರ್​ 04ರೊಳಗೆ ಅರ್ಜಿ ಸಲ್ಲಿಸಿ, ಈ ಅವಕಾಶವನ್ನು ಬಳಸಿಕೊಳ್ಳಿ.

ವಿಜಯಪುರ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ; 10ನೇ ತರಗತಿ ಪಾಸಾಗಿದ್ರೆ ಸಾಕು!
ಉದ್ಯೋಗಾವಕಾಶ
ಅಕ್ಷತಾ ವರ್ಕಾಡಿ
|

Updated on: Nov 20, 2026 | 3:08 PM

Share

ವಿಜಯಪುರ ಜಿಲ್ಲಾ ನ್ಯಾಯಾಲಯವು 10ನೇ ತರಗತಿ ಪಾಸಾದ ಅಭ್ಯರ್ಥಿಗಳಿಗೆ ಉತ್ತಮ ಉದ್ಯೋಗಾವಕಾಶವನ್ನು ಒದಗಿಸಿದೆ. ಇಲಾಖೆಯಲ್ಲಿ ಖಾಲಿ ಇರುವ 30 ಸೇವಕ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 21,700 ರಿಂದ 46,650ರೂ. ರವರೆಗೆ ಆಕರ್ಷಕ ವೇತನ ಶ್ರೇಣಿ ಇರುತ್ತದೆ.

ವಿದ್ಯಾರ್ಹತೆ ಮತ್ತು ವಯೋಮಿತಿ:

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ 10ನೇ ತರಗತಿ ಉತ್ತೀರ್ಣರಾಗಿರಬೇಕು. ಕನಿಷ್ಠ 18 ವರ್ಷದಿಂದ ಗರಿಷ್ಠ 40 ವರ್ಷ ವಯೋಮಿತಿ ನಿಗದಿಪಡಿಸಲಾಗಿದ್ದು, ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳ ವಿಶೇಷತೆಯೆಂದರೆ ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ. ಸಂದರ್ಶನ ಹಾಗೂ ದಾಖಲಾತಿ ಪರಿಶೀಲನೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಕರ್ನಾಟಕದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: ಮೊದಲ ಉದ್ಯೋಗ ಪಡೆಯುವುದು ಹೇಗೆ? ಫ್ರೆಶರ್‌ಗಳು ತಿಳಿದುಕೊಳ್ಳಬೇಕಾದ ಪ್ರಮುಖ ವಿಚಾರಗಳಿವು

ಅರ್ಜಿ ಶುಲ್ಕದ ವಿವರ:

ಅರ್ಜಿ ಶುಲ್ಕ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 250ರೂ., 2ಎ/2ಬಿ/3ಎ/3ಬಿ ವರ್ಗದವರಿಗೆ 150 ರೂ. ಆಗಿರುತ್ತದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ನವೆಂಬರ್ 05ರಿಂದ ​ ಪ್ರಾರಂಭವಾಗಿದ್ದು,ಡಿಸೆಂಬರ್​​ 04ರ ವರೆಗೆ ಅವಕಾಶವಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.

ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಸದ್ಯ ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ರಾಜಕೀಯ, ಕ್ರೈಂ ಸುದ್ದಿಗಳನ್ನು ಬರೆಯುತ್ತಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More