
ವಿಜಯಪುರ ಜಿಲ್ಲಾ ನ್ಯಾಯಾಲಯವು 10ನೇ ತರಗತಿ ಪಾಸಾದ ಅಭ್ಯರ್ಥಿಗಳಿಗೆ ಉತ್ತಮ ಉದ್ಯೋಗಾವಕಾಶವನ್ನು ಒದಗಿಸಿದೆ. ಇಲಾಖೆಯಲ್ಲಿ ಖಾಲಿ ಇರುವ 30 ಸೇವಕ(Peon) ಹುದ್ದೆಗಳನ್ನು ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 21,700 ರಿಂದ 46,650ರೂ. ರವರೆಗೆ ಆಕರ್ಷಕ ವೇತನ ಶ್ರೇಣಿ ಇರುತ್ತದೆ.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ 10ನೇ ತರಗತಿ ಉತ್ತೀರ್ಣರಾಗಿರಬೇಕು. ಕನಿಷ್ಠ 18 ವರ್ಷದಿಂದ ಗರಿಷ್ಠ 40 ವರ್ಷ ವಯೋಮಿತಿ ನಿಗದಿಪಡಿಸಲಾಗಿದ್ದು, ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.
ಈ ಹುದ್ದೆಗಳ ವಿಶೇಷತೆಯೆಂದರೆ ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ. ಸಂದರ್ಶನ ಹಾಗೂ ದಾಖಲಾತಿ ಪರಿಶೀಲನೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಕರ್ನಾಟಕದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: ಮೊದಲ ಉದ್ಯೋಗ ಪಡೆಯುವುದು ಹೇಗೆ? ಫ್ರೆಶರ್ಗಳು ತಿಳಿದುಕೊಳ್ಳಬೇಕಾದ ಪ್ರಮುಖ ವಿಚಾರಗಳಿವು
ಅರ್ಜಿ ಶುಲ್ಕ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 250ರೂ., 2ಎ/2ಬಿ/3ಎ/3ಬಿ ವರ್ಗದವರಿಗೆ 150 ರೂ. ಆಗಿರುತ್ತದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ನವೆಂಬರ್ 05ರಿಂದ ಪ್ರಾರಂಭವಾಗಿದ್ದು,ಡಿಸೆಂಬರ್ 04ರ ವರೆಗೆ ಅವಕಾಶವಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.
ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:08 pm, Fri, 20 November 26