ಒಂಟೆಗಳನ್ನು ಹುಡುಕಿಕೊಂಡು ಹೋದ ಮೂವರು ಮಕ್ಕಳು ನಾಪತ್ತೆ: ಶವವಾಗಿ ಪತ್ತೆ

ಯುಜಿಡಿ ತ್ಯಾಜ್ಯ ನೀರಿನ ಸಂಸ್ಕರಣಾ ಘಟಕದಲ್ಲಿ ಬಿದ್ದು ಮೂವರು ಮಕ್ಕಳು ಸಾವನ್ನಪ್ಪಿರುವಂತಹ ಘಟನೆ ವಿಜಯಪುರದಲ್ಲಿ ನಡೆದಿದೆ. ನಿನ್ನೆ ಒಂಟೆಗಳನ್ನು ಹುಡುಕಿಕೊಂಡು ಮನೆಯಿಂದ ಹೋದವರು ಇಂದು ಶವವಾಗಿ ಪತ್ತೆ ಆಗಿದ್ದಾರೆ. ಮಹಾನಗರ ಪಾಲಿಕೆಯ ಅಧಿಕಾರಿಗಳು, ಸಿಬ್ಬಂದಿಗಳು ಇದಕ್ಕೆ ಕಾರಣವೆಂದು ಮಕ್ಕಳ ಕುಟುಂಬಸ್ಥರು ಆರೋಪಿಸಿದ್ದಾರೆ. ಎಪಿಎಂಸಿ ಪೊಲೀಸ್ ಠಾಣೆಗೆ ಕುಟುಂಬಸ್ಥರು ದೂರು ನೀಡಲಾಗಿತ್ತು. 

ಒಂಟೆಗಳನ್ನು ಹುಡುಕಿಕೊಂಡು ಹೋದ ಮೂವರು ಮಕ್ಕಳು ನಾಪತ್ತೆ: ಶವವಾಗಿ ಪತ್ತೆ
ಒಂಟೆಗಳನ್ನು ಹುಡುಕಿಕೊಂಡು ಹೋದ ಮೂವರು ಮಕ್ಕಳು ನಾಪತ್ತೆ: ಶವವಾಗಿ ಪತ್ತೆ
Follow us
ಅಶೋಕ ಯಡಳ್ಳಿ, ವಿಜಯಪುರ
| Updated By: ಗಂಗಾಧರ​ ಬ. ಸಾಬೋಜಿ

Updated on: May 13, 2024 | 2:55 PM

ವಿಜಯಪುರ, ಮೇ 13: ನಿನ್ನೆ ಮನೆಯಿಂದ ಕಾಣೆಯಾಗಿದ್ದ ಮೂವರು ಮಕ್ಕಳು ಇಂದು ಶವವಾಗಿ ಪತ್ತೆ (dead) ಆಗಿದ್ದಾರೆ. ನಗರದ ಇಂಡಿ ರಸ್ತೆಯಲ್ಲಿರುವ ಯುಜಿಡಿ ತ್ಯಾಜ್ಯದ ನೀರಿನ ಸಂಸ್ಕರಣಾ ಘಟಕದ ಶವಗಳು ಪತ್ತೆ ಆಗಿವೆ. ಗದಗ ಮೂಲದ ಅನುಷ್ಕಾ ಅನೀಲ ದಹಿಂಡೆ (9) ವಿಜಯ ಅನಿಳ ದಹಿಂಡೆ (7) ಮತ್ತು ವಿಜಯಪುರ (Vijayapura) ಮೂಲದ ಮಿಹಿರ್ ಶ್ರೀಕಾಂತ ಜಾನಗೌಳಿ (7) ಮೃತ ಬಾಲಕರು ಹಾಗೂ ಬಾಲಕಿ. ಗದಗ ಮೂಲದ ಅನುಷ್ಕಾ ಹಾಗೂ ವಿಜಯ ಬೇಸಿಗೆ ರಜೆಗಾಗಿ ವಿಜಯಪುರದಲ್ಲಿರುವ ಮಾವನ ಮನೆಗೆ ಬಂದಿದ್ದರು. ನಿನ್ನೆ ಬೆಳಿಗ್ಗೆ 10 ಗಂಟೆ ಸುಮಾರಿಗೆ ವಿಜಯಪುರದ ಚಾಬಕಸಾಬ್ ದರ್ಗಾದ ಬಳಿಯ ಮನೆಯ ಮುಂದೆ ಒಂಟೆ ಸವಾರಿ ಮಾಡಿದ್ದಾರೆ. ನಂತರ ಒಂಟೆಗಳನ್ನು ಹುಡುಕಿಕೊಂಡು ಮನೆಯಿಂದ ಹೋಗಿದ್ದರು.

ಮಕ್ಕಳು ಮನೆಯಿಂದ ಆಚೆ ಹೋಗುವ ವಿಡಿಯೋ ಕೆಲ ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿತ್ತು. ಬಹಳ ಸಮಯವಾದರೂ ಮನೆಗೆ ಮಕ್ಕಳು ಬಾರದ ಕಾರಣ ಮನೆಯವರು ಹುಡುಕಾಡಿದ್ದಾರೆ. ಸಂಜೆ ಎಪಿಎಂಸಿ ಪೊಲೀಸ್ ಠಾಣೆಗೆ ಕುಟುಂಬಸ್ಥರು ದೂರು ನೀಡಿದ್ದಾರೆ. ನಿನ್ನೆಯಿಂದಲೇ ಕುಟುಂಬಸ್ಥರು ಪೊಲೀಸರು ಮಕ್ಕಳಿಗಾಗಿ ಹುಡುಕಾಟ ನಡೆಸಿದ್ದರು. ಆದರೆ ಇಂದು ಮಧ್ಯಾಹ್ನದ ವೇಳೆ ಯುಜಿಡಿ ತ್ಯಾಜ್ಯದ ನೀರಿನ ಸಂಸ್ಕರಣಾ ಘಟಕದ ನೀರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಇದನ್ನೂ ಓದಿ: ವಿಜಯಪುರ: ಸಾಲ ಬಾಧೆ ತಾಳಲಾರದೆ ರೈತ ಮಹಿಳೆ ಆತ್ಮಹತ್ಯೆ

ಮಕ್ಕಳ ಶವಗಳನ್ನು ಕಂಡು ಪೋಷಕರ ರೋಧನೆ ಮುಗಿಲು ಮಟ್ಟಿದೆ. ಯುಜಿಸಿ ತ್ಯಾಜ್ಯ ಜಲದ ಸಂಸ್ಕರಣಾ ಘಟಕದಲ್ಲಿ ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡಿಲ್ಲ. ತ್ಯಾಜ್ಯ ಘಟಕಕ್ಕೆ ತಡೆ ಗೋಡೆ ಅಥವಾ ಬೇಲಿ ಹಾಕಿಲ್ಲ. ಹೀಗಾಗಿ ಮೂವರು ಮಕ್ಕಳು ತ್ಯಾಜ್ಯ ಜಲದ ಘಟಕದ ಕಂದಕದಲ್ಲಿರುವ ನೀರಲ್ಲಿ ಮುಳುಗಿ ಮೃತಪಟ್ಟಿವೆ. ಮಹಾನಗರ ಪಾಲಿಕೆಯ ಅಧಿಕಾರಿಗಳು, ಸಿಬ್ಬಂದಿಗಳು ಇದಕ್ಕೆ ಕಾರಣವೆಂದು ಮಕ್ಕಳ ಕುಟುಂಬಸ್ಥರು ಆರೋಪಿಸಿದ್ದಾರೆ.

ಮೃತ ಮಕ್ಕಳ ಪೋಷಕರಿಂದ ಪ್ರತಿಭಟನೆ

ಯುಜಿಡಿ ತ್ಯಾಜ್ಯ ನೀರು ಸಂಸ್ಕರಣಾ ಘಟಕದ ಎದುರು ಮೃತ ಮಕ್ಕಳ ಪೋಷಕರಿಂದ ಪ್ರತಿಭಟನೆ ಮಾಡಿದ್ದು, ಪೊಲೀಸರೊಂದಿಗೆ ವಾಗ್ವಾದ ನಡೆದಿದೆ. ಮಹಾನಗರ ಪಾಲಿಕೆ ಅಧಿಕಾರಿಗಳು, ಸಿಬ್ಬಂದಿಗಳ ನಿರ್ಲಕ್ಷ್ಯವೇ ಮಕ್ಕಳ ಸಾವಿಗೆ ಕಾರಣವೆಂದು ಶವಗಳನ್ನು ತೆಗೆದುಕೊಂಡು ಹೋಗಲು ಬಿಡದೇ ಗಲಾಟೆ ಮಾಡಲಾಗಿದೆ. ಸಂಸ್ಕರಣಾ ಘಟಕಕ್ಕೆ ಸೆಕ್ಯೂರಿಟಿ ಇಲ್ಲದೆ ಇರುವುದಕ್ಕೆ ಈ ದುರಂತ ಸಂಭವಿಸಿದೆ. ಮಕ್ಕಳ ಸಾವಿಗೆ ನ್ಯಾಯ ನೀಡಬೇಕೆಂದು ರಸ್ತೆ ತಡೆದು ಪ್ರತಿಭಟಿಸಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ