AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳ ಪ್ರಿಯಕರನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ರಾ? ಯುವತಿ ಪೋಷಕರ ವಿರುದ್ಧ ಗಂಭೀರ ಆರೋಪ

ಮಗಳ ಪ್ರಿಯಕರನಿಗೆ ಪೋಷಕರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಆರೋಪ ಕೇಳಿಬಂದಿದೆ. ವಿಜಯಪುರ ಜಿಲ್ಲೆ ಮುದ್ದೇಬಿಹಾಳದಲ್ಲಿ ನಿನ್ನೆ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಸುಟ್ಟಗಾಯಗಳಿಂದ ಬಳಲ್ತಿರುವ ಯುವಕ ರಾಹುಲ್ ಬಿರಾದಾರ್ ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಯುವಕ ಹಾಗೂ ಯುವತಿ ಮನೆಯವರಿಬ್ಬರಿಂದಲೂ ದೂರು ನೀಡಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಮಗಳ ಪ್ರಿಯಕರನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ರಾ? ಯುವತಿ ಪೋಷಕರ ವಿರುದ್ಧ ಗಂಭೀರ ಆರೋಪ
ಮಗಳ ಪ್ರಿಯಕರನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ರಾ? ಯುವತಿ ಪೋಷಕರ ವಿರುದ್ಧ ಗಂಭೀರ ಆರೋಪ
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: May 27, 2024 | 10:47 PM

Share

ವಿಜಯಪುರ, ಮೇ 27: ಮಗಳನ್ನು ಪ್ರೀತಿಸಿದ್ದ ಯುವಕನಿಗೆ (lover) ಪೆಟ್ರೋಲ್ ಸುರಿದು ಬೆಂಕಿ (fire) ಹಚ್ಚಿದ್ದಾರೆ ಎಂದು ಯುವತಿ ಪೋಷಕರ ವಿರುದ್ಧ ಆರೋಪ ಕೇಳಿಬಂದಿದೆ. ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ನಿನ್ನೆ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಯುವಕ ರಾಹುಲ್ ಬಿರಾದಾರ್​ಗೆ ಸುಟ್ಟ ಗಾಯಗಳಾಗಿದ್ದು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವತಿ ಐಶ್ವರ್ಯ ಮದರಿ ತಂದೆ, ಚಿಕ್ಕಪ್ಪ, ಚಿಕ್ಕಮ್ಮ ಹಾಗೂ ಮನೆಗೆಲಸ ಮಾಡುತ್ತಿದ್ದವನಿಂದ‌ ಕೃತ್ಯವೆಂದ ಆರೋಪಿಸಲಾಗಿದೆ.

ರಾಹುಲ್​​ಗೆ ಬೆಂಕಿ ಹಚ್ಚುವ ವೇಳೆ ಯುವತಿಯ ಚಿಕ್ಕಪ್ಪ, ಚಿಕ್ಕಮ್ಮ ಹಾಗೂ ಮನೆಗೆಲಸ ಮಾಡುತ್ತಿದ್ದವನಿಗೂ ಬೆಂಕಿ ತಾಗಿದ್ದು, ಮೂವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಐದಾರು ವರ್ಷಗಳಿಂದ ರಾಹುಲ್ ಹಾಗೂ ಐಶ್ವರ್ಯ ಪರಸ್ಪರ ಪ್ರೀತಿಸುತ್ತಿದ್ದರು. ಈ ವಿಚಾರ ಎರಡೂ ಮನೆಯವರಿಗೆ ಗೊತ್ತಾಗಿ ಕಳೆದ ಒಂದು ವರ್ಷದ ಹಿಂದೆಯೇ ಹಿರಿಯರು ರಾಜಿ ಮಾಡಿದ್ದರು.

ಇದನ್ನೂ ಓದಿ: ಪ್ರತ್ಯೇಕ ಘಟನೆ: ಲವರ್ಸ್ ಬೈಕ್​​ಗೆ ಲಾರಿ ಡಿಕ್ಕಿಯಾಗಿ ಪ್ರಿಯಕರ ಸಾವು, ಬಸ್​ ಡಿಕ್ಕಿಯಾಗಿ ರೈತರಿಬ್ಬರ ದುರ್ಮರಣ

ಆಗ ಐಶ್ವರ್ಯ ಪ್ರಿಯಕರ ರಾಹುಲ್​​ನನ್ನು ಮದುವೆ ಆಗಲ್ಲ, ಪೋಷಕರು ಹೇಳಿದ ಯುವಕನನ್ನು ಮದುವೆ ಆಗುವೆ ಎಂದು ಬ್ರೇಕ್ ಅಪ್ ಮಾಡಿಕೊಂಡಿದ್ದಳು. ಕಳೆದ ಒಂದು ವರ್ಷದಿಂದ ಇಬ್ಬರ ಲವ್ ಬ್ರೇಕ್ ಅಪ್ ಆಗಿತ್ತು. ಇದರಿಂದ ತೀವ್ರ ಆಕ್ರೋಶಗೊಂಡಿದ್ದ ರಾಹುಲ್, ಐದಾರು ವರ್ಷ ನನ್ನ ಜೊತೆಗೆ ಓಡಾಡಿ ಹಣ ಖರ್ಚು ಮಾಡಿಸಿದ್ದೀಯಾ ಎಂದು ಯುವತಿ ಮೇಲೆ ಸಿಟ್ಟಾಗಿದ್ದ.

ಇತ್ತೀಚೆಗೆ ಯುವತಿ ಮನೆ ಬಳಿ ಹೆಚ್ಚು ಓಡಾಡುತ್ತಿದ್ದ. ಯಾಕೆ ಓಡಾಡುತ್ತಿದ್ದೀಯಾ ಎಂದು ಯುವತಿ ಮನೆಯವರು ರಾಹುಲ್​​ಗೆ ನಿನ್ನೆ ಕರೆ ಮಾಡಿ ಪ್ರಶ್ನಿಸಿದ್ದಾರೆ. ಮಾತಿಗೆ ಮಾತು ಬೆಳೆದು ನಿಮ್ಮ ಮನೆಗೆ ಬರುವೆ ಎಂದು ಯುವತಿ ಮನೆಗೆ ಹೋಗಿದ್ದಾನೆ. ಆಗ ಐಶ್ವರ್ಯ ಮನೆಯವರೊಂದಿಗೆ ಮಾತನಾಡುತ್ತಿದ್ದ. ಈ ವೇಳೆ ಯುವತಿ ತಂದೆ ಅಪ್ಪು ಮದರಿ ರಾಹುಲ್ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಮುಖ್ಯಶಿಕ್ಷಕಿ ಸೂಚನೆ ಮೇರೆಗೆ ಸರ್ಕಾರಿ ಶಾಲೆಯಲ್ಲಿ ಕಳ್ಳತನ: ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದ ಸಿಬ್ಬಂದಿ

ಯುವಕನೇ ಪೆಟ್ರೋಲ್ ತಂದು ನಮಗೆ, ನಮ್ಮ ಮಗಳಿಗೆ ಬೆಂಕಿ ಹಚ್ಚಿ ಕೊಲೆ ಮಾಡಲು ಪ್ರಯತ್ನ ಪಟ್ಟಿದ್ದು, ನಮ್ಮ ಮನೆಯಲ್ಲಿ ಮೂವರಿಗೆ ಬೆಂಕಿ ತಗುಲಿದೆ. ಆತನಿಗೂ ಬೆಂಕಿ ತಗುಲಿದೆ ಎಂದು ಯುವತಿ ತಂದೆ ದೂರು ನೀಡಿದ್ದಾರೆ. ಅತ್ತ ಯುವಕ ರಾಹುಲ್ ತಂದೆ ಕೂಡ ದೂರು ನೀಡಿದ್ದು, ನಮ್ಮ ಮಗನನ್ನು ಮನೆಗೆ ಕರೆಯಿಸಿ ಪೆಟ್ರೋಲ್ ಸುರಿದು ಕೊಲೆ ಮಾಡಲು ಯತ್ನಿಸಿದ್ದಾರೆ ಎಂದಿದ್ದಾರೆ.

ಸದ್ಯ ಸ್ಥಳಕ್ಕೆ ಮುದ್ದೇಬಿಹಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಯುವಕ ಹಾಗೂ ಯುವತಿ ಮನೆಯವರಿಂದ ದೂರು ಸ್ವೀಕರಿಸಿದ್ದು, ಪೊಲೀಸರ ತನಿಖೆ ಮುಂದುವರೆದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಅಶೋಕ ಯಡಳ್ಳಿ, ವಿಜಯಪುರ
ಅಶೋಕ ಯಡಳ್ಳಿ, ವಿಜಯಪುರ

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!