Karnataka Weather: ಕರ್ನಾಟಕದಾದ್ಯಂತ ಕೊರೆಯುವ ಚಳಿ, ಒಣಹವೆ ಮುಂದುವರಿಕೆ

ಕರ್ನಾಟಕದಾದ್ಯಂತ ಕೊರೆಯುವ ಚಳಿ ಶುರುವಾಗಿದೆ, ರಾಜ್ಯದೆಲ್ಲೆಡೆ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಜಯಪುರದಲ್ಲಿ 10.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ, ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಕನಿಷ್ಠ ಉಷ್ಣಾಂಶ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್​ ಕಡಿಮೆಯಾಗುವ ಸಾಧ್ಯತೆ ಇದೆ.

Karnataka Weather: ಕರ್ನಾಟಕದಾದ್ಯಂತ ಕೊರೆಯುವ ಚಳಿ, ಒಣಹವೆ ಮುಂದುವರಿಕೆ
Image Credit source: Hindustan Times

Updated on: Dec 24, 2023 | 12:11 PM

ಕರ್ನಾಟಕದಾದ್ಯಂತ ಕೊರೆಯುವ ಚಳಿ ಶುರುವಾಗಿದೆ, ರಾಜ್ಯದೆಲ್ಲೆಡೆ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಜಯಪುರದಲ್ಲಿ 10.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ, ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಕನಿಷ್ಠ ಉಷ್ಣಾಂಶ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್​ ಕಡಿಮೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣವಿರಲಿದೆ, ಕೆಲವು ಕಡೆಗಳಲ್ಲಿ ಬೆಳಗಿನ ಜಾವ ದಟ್ಟ ಮಂಜು ಮುಸುಕುವ ಸಾಧ್ಯತೆಗಳಿವೆ.
ಎಚ್​ಎಎಲ್​ನಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕ ಹವಾಮಾನ ರಾಜ್ಯಾದ್ಯಂತ ಮೈಕೊರೆವ ಚಳಿ, ಅಲ್ಲಲ್ಲಿ ಮಳೆ ಸಾಧ್ಯತೆ
ನಗರಗಳ ಹವಾಮಾನ ವರದಿ
ಮಂಗಳೂರು: 32-23
ಶಿವಮೊಗ್ಗ: 30-17
ಬೆಳಗಾವಿ: 28-16
ಕೋಲಾರ: 26-16
ತುಮಕೂರು: 28-18
ಉಡುಪಿ: 32-23
ಕಾರವಾರ: 33-23
ಮಂಡ್ಯ: 30-19
ಮಡಿಕೇರಿ: 30-18
ರಾಮನಗರ: 29-19
ಚಿಕ್ಕಮಗಳೂರು: 26-16
ದಾವಣಗೆರೆ: 29-17
ಚಿತ್ರದುರ್ಗ: 27-16
ಹಾವೇರಿ: 30-18
ಬಳ್ಳಾರಿ: 29-18
ಹಾಸನ: 28-17
ಚಾಮರಾಜನಗರ: 31-19
ಚಿಕ್ಕಬಳ್ಳಾಪುರ: 27-17
ಯಾದಗಿರಿ: 30-17
ವಿಜಯಪುರ: 30-17
ಬೀದರ್: 29-15 ಡಿಗ್ರಿ ಸೆಲ್ಸಿಯಸ್​ ದಾಖಲಾಗಿದೆ.

ಕೊಡಗು, ದಕ್ಷಿಣ ಕನ್ನಡ ಜಿಲ್ಲೆಗಳು, ಮೈಸೂರು, ಚಿಕ್ಕಮಗಳೂರು, ಹಾಸನದಲ್ಲೂ ಚಳಿ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ರಾಯಚೂರು, ವಿಜಯಪುರ ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ ಮತ್ತು ಯಾದಗಿರಿಯಲ್ಲಿ ಒಣಹವೆ ಕಂಡುಬರುವ ಸಾಧ್ಯತೆ ಇದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Published On - 7:16 am, Sun, 24 December 23

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us