ಪದ್ಮಶ್ರೀ ಪ್ರಶಸ್ತಿಯನ್ನು ವಿನಮೃವಾಗಿಯೇ ನಿರಾಕರಿಸಿದ್ದ ಸಿದ್ಧೇಶ್ವರ ಸ್ವಾಮೀಜಿ, ಅಂದು ಮೋದಿಗೆ ಹೇಳಿದ್ದು ಇದೊಂದೇ ಮಾತು

ಪದ್ಮಶ್ರೀ ಪ್ರಶಸ್ತಿ, ಕರ್ನಾಟಕ ವಿಶ್ವವಿದ್ಯಾನಿಲಯ ಅವರಿಗೆ ಗೌರವ ಡಾಕ್ಟರೇಟ್ ಸೇರಿದಂತೆ ತಮಗೆ ಸಂದ ಎಷ್ಟೋ ಪ್ರಶಸ್ತಿ ಮತ್ತು ಪುರಸ್ಕಾರಗಳನ್ನು ಸಿದ್ದೇಶ್ವರ ಸ್ವಾಮೀಜಿ ಅವರು ವಿನಮೃವಾಗಿಯೇ ನಿರಾಕರಿಸಿದ್ದರು. ಇದಕ್ಕೆ ಕಾರಣವೇನು? ಸ್ವಾಮೀಜಿಯನ್ನು ಹತ್ತಿರದಿಂದ ಕಂಡಿರುವವರೊಬ್ಬರು ಹೇಳಿದ್ದ ಮಾತು ಇದು.

ಪದ್ಮಶ್ರೀ ಪ್ರಶಸ್ತಿಯನ್ನು ವಿನಮೃವಾಗಿಯೇ ನಿರಾಕರಿಸಿದ್ದ ಸಿದ್ಧೇಶ್ವರ ಸ್ವಾಮೀಜಿ,  ಅಂದು ಮೋದಿಗೆ ಹೇಳಿದ್ದು ಇದೊಂದೇ ಮಾತು
ಸಿದ್ಧೇಶ್ವರ ಸ್ವಾಮೀಜಿ ಹಾಗೂ ಮೋದಿ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Jan 02, 2023 | 11:36 PM

ವಿಜಯಪುರ: ಕಲೆ, ಶಿಕ್ಷಣ, ಕೈಗಾರಿಕೆ, ಸಾಹಿತ್ಯ, ವಿಜ್ಞಾನ, ಸಮಾಜಸೇವೆ ಮತ್ತು ಸಾರ್ವಜನಿಕ ಜೀವನವನ್ನು ಒಳಗೊಂಡಂತೆ ವಿವಿಧ ಕಾರ್ಯಕ್ಷೇತ್ರಗಳಲ್ಲಿ ವಿಶೇಷ ಕೊಡುಗೆಯನ್ನು ಗೌರವಿಸಲು ಭಾರತ ಸರ್ಕಾರ ನೀಡುವ ನಾಲ್ಕನೇ ಅತಿದೊಡ್ಡ ನಾಗರಿಕ ಪ್ರಶಸ್ತಿ ಪದ್ಮಶ್ರೀ ( padma shri award). ಈ ಪ್ರಶಸ್ತಿಯನ್ನು ಈ ಹಿಂದೆ 2018ರಲ್ಲಿ ನರೇಂದ್ರ ಮೋದಿ ( Narendra Modi) ಸರ್ಕಾರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ(Siddeshwara Swamiji )ಅವರನ್ನು ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಿ ಘೋಷಿಸಿತ್ತು. ಆದ್ರೆ, ಸಿದ್ದೇಶ್ವರ ಸ್ವಾಮೀಜಿ ವಿನಮೃವಾಗಿಯೇ ನಿರಾಕರಿಸಿದ್ದರು.

ಇದನ್ನೂ ಓದಿ: Siddheshwara swamiji funeral: ಉಸಿರು ನಿಲ್ಲಿಸಿದ ನಡೆದಾಡುವ ದೇವರು ಅಂತಿಮ ದರ್ಶನ, ಅಂತ್ಯಕ್ರಿಯೆ ಎಲ್ಲಿ? ಹೇಗೆ? ಇಲ್ಲಿದೆ ಮಾಹಿತಿ

ಮೋದಿಗೆ ಪತ್ರ ಬರೆದಿದ್ದ ಸ್ವಾಮೀಜಿ

ಈ ಬ್ಗಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದ ನಡೆದಾಡುವ ದೇವರು, ಭಾರತ ಸರಕಾರ ನೀಡುವ ಅತ್ಯುನ್ನತ ನಾಗರಿಕ ಗೌರವ ಪ್ರಶಸ್ತಿಗಳ ಮೇಲೆ ನನಗೆ ಅಪಾರ ಗೌರವವಿದೆ. ಪದ್ಮಶ್ರೀ ಪ್ರಶಸ್ತಿ ಘೋಷಿಸಿದ್ದಕ್ಕೆ ಧನ್ಯವಾದಗಳು. ಆದರೆ ನಾನೊಬ್ಬ ಸರಳ ವ್ಯಕ್ತಿ. ಸಾಮಾನ್ಯ ಜೀವನ ನಡೆಸುತ್ತ, ಆಧ್ಯಾತ್ಮಿಕ ಬೋಧನೆಯ ಮೂಲಕ ಜನರ ಜೀವನ ಉದಾತ್ತಗೊಳಿಸುವುದು ಉದ್ದೇಶ ನನ್ನದು. ಹಾಗಾಗಿ ಪ್ರಶಸ್ತಿಗಳ ಅವಶ್ಯತೆಯು ನನಗಿಲ್ಲ. ಎಲ್ಲ ಗೌರವಾಧರಗಳೊಂದಿಗೆ ಈ ಪ್ರಶಸ್ತಿಯನ್ನು ಹಿಂದಿರುಗಿಸುತ್ತಿದ್ದೇನೆ. ಅನ್ಯಥಾ ಭಾವಿಸದಿರಿ ಎಂದು ಪ್ರಶಸ್ತಿಯನ್ನು ನಿರಾಕರಿಸಿದ್ದರು.

ಪ್ರಶಸ್ತಿ ಮತ್ತು ಪುರಸ್ಕಾರಗಳನ್ನು ಅವರು ವಿನಮೃವಾಗಿಯೇ ನಿರಾಕರಿಸಿದ್ದರು

ಕರ್ನಾಟಕ ವಿಶ್ವವಿದ್ಯಾನಿಲಯ ಅವರಿಗೆ ಗೌರವ ಡಾಕ್ಟರೇಟ್ ಪ್ರಕಟಿಸಿತ್ತು. ಅದನ್ನೂ ಶ್ರೀಗಳು ಸ್ವೀಕರಿಸಿರಲಿಲ್ಲ. ಹೀಗೆ ತಮಗೆ ಸಂದ ಎಷ್ಟೋ ಪ್ರಶಸ್ತಿ ಮತ್ತು ಪುರಸ್ಕಾರಗಳನ್ನು ಅವರು ವಿನಮೃವಾಗಿಯೇ ನಿರಾಕರಿಸಿದ್ದರು. ಇದಕ್ಕೆ ಕಾರಣವೇನು? ಎಂಬ ಪ್ರಶ್ನೆಗೆಅವರು ಆಧ್ಯಾತ್ಮ, ಆದರ್ಶ ಮತ್ತು ನೈತಿಕತೆ ಬಗ್ಗೆ ಕೇವಲ ಬೋಧನೆ ಮಾಡುವುದಷ್ಟೇ ಅಲ್ಲ. ಅವುಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಿದ್ದಾರೆ. ನುಡಿದಂತೆ ನಡೆಯುವ ಮತ್ತು ನಡೆದಂತೆಯೇ ನುಡಿಯುವ ವ್ಯಕ್ತಿತ್ವ ಅವರದು ಎಂದು ಸ್ವಾಮೀಜಿಯನ್ನು ಹತ್ತಿರದಿಂದ ಕಂಡಿರುವವರೊಬ್ಬರು ಹೇಳಿದ್ದ ಮಾತು ಇದು.

ಇದನ್ನೂ ಓದಿ: Siddeshwara Swamiji Obituary: ವಿಜಯಪುರದ ಪ್ರಸಿದ್ಧ ಪ್ರವಚನಕಾರ ಆಧ್ಯಾತ್ಮಿಕ ಗುರು ಸಿದ್ದೇಶ್ವರ ಸ್ವಾಮೀಜಿಯವರ ಹುಟ್ಟು, ಬಾಲ್ಯ, ಜೀವನ ಸಾಧನೆ

ಶ್ರೀ ಸಿದ್ದೇಶ್ವರ ಸ್ವಾಮಿಜಿಯವರು ಸರಳವಾದ ಸ್ಪೂರ್ತಿದಾಯಕ ಜೀವನ ಶೈಲಿಯನ್ನು ಹೊಂದಿದ್ದಾರೆ. ತತ್ವಜ್ಞಾನಿ, ಆಲೋಚಕ ಸ್ವಾಮಿಜಿ ಪ್ರಪಂಚದಾದ್ಯಂತ ಆಧ್ಯಾತ್ಮಿಕ ಪ್ರವಚನಗಳನ್ನು ವಿತರಿಸಿದ್ದಾರೆ. ಅವರು ತತ್ವಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಅವರು ಆಧ್ಯಾತ್ಮಿಕತೆಗೆ ಮೀಸಲಿಟ್ಟಿದ್ದಾರೆ ಮತ್ತು ಭಾರತದ ಸಂತರು ಮತ್ತು ಸಿಯರ್ಸ್ ಕೃತಿಗಳ ಆಧಾರದ ಮೇಲೆ ಹಲವಾರು ಪುಸ್ತಕಗಳನ್ನು ಬರೆದಿದ್ದಾರೆ. ವೇದಾಂತ, ಗೀತಾ, ಯೋಗಸೂತ್ರ, ವಚನಗಳ ಕುರಿತಾದ ಶ್ರೀ ಸ್ವಾಮಿಜಿಯವರ ಉಪನ್ಯಾಸಗಳು ಅವುಗಳ ಮೂಲತೆ, ಚಿಂತನೆ, ಅಭಿವ್ಯಕ್ತಿ ಮತ್ತು ಚಿಂತನೆಗಾಗಿ ಹೆಸರುವಾಸಿಯಾಗಿದೆ. ಶ್ರೀ ಸ್ವಾಮೀಜಿ ಅವರು ತಮ್ಮ ಪಂಥಜಿಯವರ “ಪಥಜಲಿಯ ಯೋಗಶಾತ್ರ” ವನ್ನು ಮಹಾನ್ ಪಾಂಡಿತ್ಯಪೂರ್ಣ ಪಾಂಡಿತ್ಯದೊಂದಿಗೆ ಸಂಪಾದಿಸಿದ್ದಾರೆ. ಶ್ರೀ ಸಿದ್ಧೇಶ್ವರ ಸ್ವಾಮಿಜಿಯವರ ಸರಳತೆ, ಬೇರ್ಪಡುವಿಕೆ, ಯೋಗದ ಮನೋಭಾವಗಳು, ಸಹಾನುಭೂತಿ, ಆಧ್ಯಾತ್ಮಿಕ ಸಮಸ್ಯೆಗಳಿಗೆ ಸೃಜನಶೀಲ ವಿಧಾನ ಮತ್ತು ಅವರ ಹೋಲಿಸಲಾಗದ ಶಾಂತ ಮತ್ತು ಸಂಯೋಜನೆ ನಿಜವಾಗಿಯೂ ಪ್ರೇಕ್ಷಕರು ಉತ್ಸಾಹದಿಂದ ಮತ್ತು ಪ್ರಬುದ್ಧರಾಗಿದ್ದಾರೆ. ಅವರ ಪ್ರವಚನವು ಅವರ ನಿಖರತೆ ಮತ್ತು ನುಗ್ಗುವಿಕೆಗೆ ಹೆಸರುವಾಸಿಯಾಗಿದೆ.

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ