ಬಬಲೇಶ್ವರ, ತಿಕೋಟಾದಲ್ಲಿ ಪ್ರತಿ ನಿವಾಸಿಗೆ ದಿನಕ್ಕೆ 135 ಲೀಟರ್ ನೀರು​: ಸಚಿವ ಎಂಬಿ ಪಾಟೀಲ್

ವಿಜಯಪುರ ಜಿಲ್ಲೆಯ ಬಬಲೇಶ್ವರ ಮತ್ತು ತಿಕೋಟಾ ನಗರಗಳಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿದ್ದು, ಪ್ರತಿ ನಿವಾಸಿಗೆ ದಿನಕ್ಕೆ 55 ಲೀಟರ್ ನೀರು ಪೂರೈಸಲು ಯೋಜಿಸಲಾಗುತ್ತಿತ್ತು. ಆದರೆ, ಈಗ ಪಟ್ಟಣ ಪಂಚಾಯಿತಿಗಳಾಗಿ ಮೇಲ್ದರ್ಜೆಗೇರಿಸಿರುವುದರಿಂದ ಪ್ರತಿ ನಾಗರಿಕರಿಗೆ ದಿನಕ್ಕೆ 135 ಲೀಟರ್ ನೀರು ಒದಗಿಸುವ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ.

ಬಬಲೇಶ್ವರ, ತಿಕೋಟಾದಲ್ಲಿ ಪ್ರತಿ ನಿವಾಸಿಗೆ ದಿನಕ್ಕೆ 135 ಲೀಟರ್ ನೀರು​: ಸಚಿವ ಎಂಬಿ ಪಾಟೀಲ್
ಅಧಿಕಾರಿಗಳೊಂದಿಗೆ ಸಚಿವ ಎಂಬಿ ಪಾಟೀಲ್​ ಸಭೆ
Follow us
|

Updated on: Aug 11, 2023 | 5:51 PM

ಬೆಂಗಳೂರು, ಆಗಸ್ಟ್​ 11: ಪಟ್ಟಣ ಪಂಚಾಯಿತಿಗಳಾಗಿ ಮೇಲ್ದರ್ಜೆಗೇರಿರುವ ವಿಜಯಪುರ ಜಿಲ್ಲೆಯ ಬಬಲೇಶ್ವರ ಮತ್ತು ತಿಕೋಟಾ ನಗರಗಳಲ್ಲಿ ಕುಡಿಯುವ ನೀರಿನ ಯೋಜನೆಗಳನ್ನು ಪರಿಷ್ಕರಿಸಲಾಗುವುದು. ಅದೇ ರೀತಿಯಾಗಿ ಪ್ರತಿ ನಾಗರಿಕರಿಗೆ ದಿನಕ್ಕೆ 135 ಲೀಟರ್ ನೀರು ಒದಗಿಸುವ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಬೃಹತ್​ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂಬಿ ಪಾಟೀಲ್​ (Minister MB Patil) ಗುರುವಾರ ಹೇಳಿದರು. ವಿಜಯಪುರ, ಬಾಳೇಶ್ವರ, ತಿಕೋಟ ಕುಡಿಯುವ ನೀರಿನ ಯೋಜನೆಗಳ ಕುರಿತು ವಿಧಾನಸೌಧದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಈ ಹಿಂದೆ ಬಬಲೇಶ್ವರ ಮತ್ತು ತಿಕೋಟಾ ಯೋಜನೆಗಳು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿದ್ದು, ಪ್ರತಿ ನಿವಾಸಿಗೆ ದಿನಕ್ಕೆ 55 ಲೀಟರ್ ಪೂರೈಸಲು ಯೋಜಿಸಲಾಗುತ್ತಿತ್ತು. ಆದರೆ, ಈಗ ಅವುಗಳನ್ನು ಪಟ್ಟಣ ಪಂಚಾಯಿತಿಗಳಾಗಿ ಮೇಲ್ದರ್ಜೆಗೇರಿಸಿರುವುದರಿಂದ ನಗರದಲ್ಲಿ ಕುಡಿಯುವ ನೀರು ಸರಬರಾಜು ಯೋಜನೆಗೆ ಅನುಗುಣವಾಗಿ ಯೋಜನೆಗಳನ್ನು ಪರಿಷ್ಕರಿಸಲಾಗುವುದು ಎಂದರು.

ಇದನ್ನೂ ಓದಿ: ಲಕ್ಷ್ಮಣ ಸವದಿ ಬೇಡಿಕೆಗಳನ್ನು ಹಂತಹಂತವಾಗಿ ಈಡೇರಿಸುತ್ತೇವೆ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಭರವಸೆ

ಕೊಲ್ಹಾರ-ವಿಜಯಪುರ ಕುಡಿಯುವ ನೀರು ಪೈಪ್‌ಲೈನ್‌ನಲ್ಲಿ ಸೋರಿಕೆ 

ಕೊಲ್ಹಾರದಿಂದ ವಿಜಯಪುರ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ 10.74 ಕಿ.ಮೀ ಉದ್ದದ ಕಾಂಕ್ರೀಟ್ ಪೈಪ್‌ಲೈನ್‌ನಲ್ಲಿ ಸೋರಿಕೆ ಉಂಟಾಗುತ್ತಿರುವುದನ್ನು ಗುರುತಿಸಲಾಗಿದ್ದು, ಉತ್ತಮ ಗುಣಮಟ್ಟದ ಎಂಎಸ್ ಪೈಪ್ ಹಾಕಲು ನಿರ್ಧರಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್​ಐ ವರದಿ ಮಾಡಿದೆ.

52 ಕೋಟಿ ರೂ. ವೆಚ್ಚ

ಈ ಯೋಜನೆಗೆ 2018 ರಲ್ಲಿ 32 ಕೋಟಿ ರೂ. ಮಂಜೂರು ಮಾಡಲಾಗಿತ್ತು. ಈಗ ಇದನ್ನು ಪರಿಷ್ಕರಿಸಲಾಗಿದ್ದು, 52 ಕೋಟಿ ರೂ. ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ಇನ್ನು ವಿಳಂಬ ಮಾಡದೆ ಸಚಿವ ಸಂಪುಟದ ಮುಂದೆ ವಿಷಯ ಮಂಡಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: Retirement: ಡಿಸಿಎಂ ಡಿ.ಕೆ. ಶಿವಕುಮಾರ್ ಇದ್ದಕ್ಕಿದ್ದಂತೆ ರಾಜಕೀಯ ನಿವೃತ್ತಿ ಮಾತನ್ನಾಡಿದ್ದೇಕೆ?

ವಿಜಯಪುರ ನಗರ ಅಗಾಧವಾಗಿ ಬೆಳೆಯುತ್ತಿದ್ದು, ಹಾಗಾಗಿ ನಗರದಲ್ಲಿ ಕುಡಿಯುವ ನೀರಿನ ಯೋಜನೆಗಳನ್ನು ಮುಂದಿನ 50 ವರ್ಷಗಳನ್ನು ಗಮನದಲ್ಲಿಟ್ಟುಕೊಂಡು ಯೋಜನೆ ರೂಪಿಸಬೇಕಾಗಿದೆ. ಹೆಚ್ಚಿದ ಸುರಕ್ಷತೆ ಮತ್ತು ವಿದ್ಯುತ್ ಬಳಕೆಯನ್ನು ಕಡಿಮೆ ಮಾಡಲು ಎಲ್ಇಡಿ ಬೀದಿ ದೀಪಗಳನ್ನು ಅಳವಡಿಸಲು ನಿರ್ಧರಿಸಲಾಗಿದೆ.

ಕರ್ನಾಟಕ ನಗರ ನೀರು ಸರಬರಾಜು ಮಂಡಳಿ ಆಯುಕ್ತ ಶರತ್, ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆ ಆಯುಕ್ತ ನಾಗೇಂದ್ರ ಪ್ರಸಾದ್, ಮುಖ್ಯ ಎಂಜಿನಿಯರ್‌ಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.