AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಯಮತ್ತೂರು ಬಾಂಬ್​ ಸ್ಫೋಟದ ಆರೋಪಿ 27 ವರ್ಷದ ಬಳಿಕ ಕರ್ನಾಟಕದಲ್ಲಿ ಅರೆಸ್ಟ್

1998ರ ಕೊಯಮತ್ತೂರು ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಸಿದ್ದಿಕಿ ರಾಜ್​ನನ್ನು ವಿಜಯಪುರದಲ್ಲಿ ಬಂಧಿಸಲಾಗಿದೆ. ತಮಿಳುನಾಡಿನಿಂದ ತಲೆಮರೆಸಿಕೊಂಡಿದ್ದ ಸಿದ್ದಿಕಿ ರಾಜ್, ವಿಜಯಪುರದಲ್ಲಿ ತರಕಾರಿ ವ್ಯಾಪಾರ ಮಾಡುತ್ತಿದ್ದ. ಕೊಯಮತ್ತೂರು ಪೊಲೀಸರು ಆತನನ್ನು ಬಂಧಿಸಿದ್ದು, ಕೋಮು ಗಲಭೆ ಮತ್ತು ಹತ್ಯೆಗೆ ಸಂಬಂಧಿಸಿದ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ. ​

ಕೊಯಮತ್ತೂರು ಬಾಂಬ್​ ಸ್ಫೋಟದ ಆರೋಪಿ 27 ವರ್ಷದ ಬಳಿಕ ಕರ್ನಾಟಕದಲ್ಲಿ ಅರೆಸ್ಟ್
ಕೊಯಮತ್ತೂರು ಬಾಂಬ್​ ಸ್ಫೋಟ
ಅಶೋಕ ಯಡಳ್ಳಿ, ವಿಜಯಪುರ
| Updated By: ವಿವೇಕ ಬಿರಾದಾರ|

Updated on:Jul 10, 2025 | 8:06 PM

Share

ವಿಜಯಪುರ, ಜುಲೈ 10: ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ 1998ರ ಸರಣಿ ಬಾಂಬ್​ ಸ್ಫೋಟ (Coimbatore Bomb blast) ಪ್ರಕರಣದ ಪ್ರಮುಖ ಆರೋಪಿಯನ್ನು ವಿಜಯಪುರದಲ್ಲಿ (Vijayapura) ಬಂಧಿಸಲಾಗಿದೆ. ಬಾಂಬ್​ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಸಿದ್ದಿಕಿ ರಾಜ್​​ನನ್ನು ಕೊಯಮತ್ತೂರು ಪೊಲೀಸರು ಬಂಧಸಿದ್ದಾರೆ. ಸ್ಫೋಟ ಬಳಿಕ ತಮಿಳುನಾಡಿನಿಂದ (Tamilunadu) ಮರೆಸಿಕೊಂಡಿದ್ದ ಆರೋಪಿ ಸಿದ್ದಿಕಿ ರಾಜ್​​ ಕಳೆದ 27 ವರ್ಷಗಳಿಂದ ಬೇರೆ ಬೇರೆ ಸ್ಥಳಗಳಲ್ಲಿ ಅಡಗಿಕೊಂಡಿದ್ದನು. ಕೊನೆಗೆ ವಿಜಯಪುರ ನಗರದಲ್ಲಿ ಗುಪ್ತವಾಗಿ ಠಿಕಾಣಿ ಹೂಡಿದ್ದನು.

ಮೂಲತಃ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯವನಾದ ಸಿದ್ದಿಕಿ ರಾಜ್​ 1998ರಲ್ಲಿ ಕೊಯಮತ್ತೂರಿನಲ್ಲಿ ನಡೆದ ಸರಣಿ ಬಾಂಬ್​ ಸ್ಫೋಟದ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾನೆ. ಆರೋಪಿ ಸಿದ್ದಿಕಿ ರಾಜ್​ ಹುಬ್ಬಳ್ಳಿ ಮೂಲದ ಮಹಿಳೆಯೊಂದಿಗೆ ವಿವಾಹವಾಗಿದ್ದಾನೆ. ಸರಣಿ ಸ್ಫೋಟ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಸಿದ್ದಿಕಿ ರಾಜ್​ ಕಳೆದ 12 ವರ್ಷಗಳಿಂದ ವಿಜಯಪುರದಲ್ಲಿ ತರಕಾರಿ ಮಾರಾಟ ಮಾಡಿಕೊಂಡು ಜೀವನ ನಡೆಸಿತ್ತಿದ್ದನು.

ಈತನಿಗಾಗಿ ಹುಡುಕಾಟ ನಡೆಸುತ್ತಿದ್ದ ಪೊಲೀಸರಿಗೆ ಆರೋಪಿ ಸಿದ್ದಿಕಿ ರಾಜ್​ ವಿಜಯಪುರದಲ್ಲಿ ಅಡಗಿರುವುದು ಗೊತ್ತಾಗಿದೆ. ಕೂಡಲೇ ವಿಜಯಪುರಕ್ಕೆ ಬಂದ ಪೊಲೀಸರು, ಆರೋಪಿ ಸಿದ್ದಿಕಿ ರಾಜ್​ನನ್ನು ಪತ್ತೆ ಮಾಡಿ, ಬಂಧಿಸಿ ಕರೆದುಕೊಂಡು ಹೋಗಿದ್ದಾರೆ. ಆರೋಪಿ ಸಿದ್ದಿಕಿ ರಾಜ್​ ಕೊಯಮತ್ತೂರು ಸರಣಿ ಬಾಂಬ್​ ಸ್ಫೋಟ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಬೇಕಾಗಿದ್ದಾನೆ. ಬಂಧಿತ ಆರೋಪಿ ವಿರುದ್ಧ ಕೋಮು ಗಲಭೆ, ಹತ್ಯೆಗೆ ಸಂಬಂಧಿಸಿದ ಹಲವು ಪ್ರಕರಣಗಳಿವೆ.

ಇದನ್ನೂ ಓದಿ: ವಿಜಯಪುರ ಕೆನರಾ ಬ್ಯಾಂಕಿಗೆ ಕನ್ನ ಹಾಕಿದ್ದೇ ಮ್ಯಾನೇಜರ್… 58 ಕೆಜಿ ಚಿನ್ನ ಕಳ್ಳ ಸಿಕ್ಕಿಬಿದ್ದ

ಸಾಧಿಕ್​ ಬಂಧನದ ಮೂಲಕ ಕೊಯಮತ್ತೂರು ಬಾಂಬ್​ ಸ್ಫೋಟ ಪ್ರಕರಣದಲ್ಲಿ ಮೂರನೇ ಪ್ರಮುಖ ಆರೋಪಿ ಸೆರೆಯಾದಂತಾಗಿದೆ. ಕೆಲವು ವಾರಗಳ ಹಿಂದೆಯಷ್ಟೇ ಮೋಸ್ಟ್​ ವಾಂಟೆಡ್​ ಕ್ರಿಮಿನಲ್​ಗಳಾದ ಅಬುಬಕರ್ ಸಿದ್ದಿಕ್​ ಮತ್ತು ಮೊಹಮ್ಮದ್​ ಅಲಿ ಆಲಿಯಾಸ್​ ಯೂನಸ್​ನನ್ನು ಆಂಧ್ರಪದೇಶದಲ್ಲಿ ಬಂಧಿಸಲಾಗಿತ್ತು.

ಏನಿದು ಕೊಯಮತ್ತೂರು ಬಾಂಬ್​ ಸ್ಫೋಟ ಪ್ರಕರಣ

1998ರ ಫೆಬ್ರವರಿ 14 ರಂದು ಕೊಯಮತ್ತೂರಿನಲ್ಲಿ ಸರಣಿ ಬಾಂಬ್​ ಸ್ಫೋಟ ನಡೆದಿದ್ದವು. ಸ್ಫೋಟದಲ್ಲಿ 59 ಜನರು ಮೃತಪಟ್ಟಿದ್ದು, ಸುಮಾರು 231 ಜನರು ಗಾಯಗೊಂಡಿದ್ದರು. ಬಿಜೆಪಿಯ ಹಿರಿಯ ಮುಖಂಡ ಎಲ್​.ಕೆ. ಅಡ್ವಾಣಿ ಅವರನ್ನು ಕೊಲ್ಲಲು ಸಂಚು ರೂಪಿಸಲಾಗಿತ್ತು ಎಂದು ಪೊಲೀಸರು ಹೇಳಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:01 pm, Thu, 10 July 25