ಮನೆಯವರ ವಿರೋಧ ಕಟ್ಟಿಕೊಂಡು ಮಹಿಳೆ ಜತೆ ಅಕ್ರಮ ಸಂಬಂಧ, ಆಕೆಯಿಂದಲೇ ಪ್ರಾಣ ತೆತ್ತ

ಮನೆಯವರ ವಿರೋಧ ಕಟ್ಟಿಕೊಂಡು ಮಹಿಳೆ ಜತೆ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಯೋರ್ವ ಇದೀಗ ಅದೇ ಮಹಿಳೆಯಿಂದಾಗಿ ಪ್ರಾಣ ತೆತ್ತಿದ್ದಾನೆ.

ಮನೆಯವರ ವಿರೋಧ ಕಟ್ಟಿಕೊಂಡು ಮಹಿಳೆ ಜತೆ ಅಕ್ರಮ ಸಂಬಂಧ, ಆಕೆಯಿಂದಲೇ ಪ್ರಾಣ ತೆತ್ತ
ಸಾಂದರ್ಭಿಕ ಚಿತ್ರ
Edited By:

Updated on: Jul 25, 2023 | 7:55 AM

ವಿಜಯಪುರ, (ಜುಲೈ 25): ವ್ಯಕ್ತಿಯೋರ್ವ ಆತ್ಮಹತ್ಯೆ (Suicide) ಮಾಡಿಕೊಳ್ಳುವುದಾಗಿ ವಾಟ್ಸಾಪ್ ಸ್ಟೇಟಸ್​​ ಹಾಕಿ ನೇಣಿಗೆ ಶರಣಾಗಿರುವ ಘಟನೆ ವಿಜಯಪುರ(Vijayapura) ಜಿಲ್ಲೆಯ ಸಿಂದಗಿ ತಾಲೂಕಿನ ಪಿ.ಹೆಚ್.ಬೂದಿಹಾಳ ಗ್ರಾಮದಲ್ಲಿ ನಡೆದಿದೆ. ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯ ಹೆಸರು ಬರೆದಿಟ್ಟು ಶಿವಣ್ಣ ಚೌಧರಿ(40) ಎನ್ನುವಾತ ಪಿ.ಹೆಚ್.ಬೂದಿಹಾಳ ಗ್ರಾಮದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತನ್ನ ಸಾವಿಗೆ ಅನೈತಿಕ ಸಂಬಂಧವಿರುವ(illicit relationship) ಮಹಿಳೆಯೇ ಕಾರಣವೆಂದು ವಾಟ್ಸಪ್​ ಸ್ಟೇಟಸ್​ನಲ್ಲಿ ಮಹಿಳೆ ಫೋಟೋ ಹಾಕಿ, ಗ್ರಾಮದ ಕೆಲವರ ಹೆಸರು ಉಲ್ಲೇಖಿಸಿದ್ದಾನೆ. ಅಲ್ಲದೇ ಆಕೆಗೆ ನೀಡಿರುವ ಹಣ ನನ್ನ ತನ್ನ ಮಕ್ಕಳಿಗೆ ಕೊಡಿಸಿ ಎಂದು ವಿಡಿಯೋ ಚಿತ್ರೀಕರಿಸಿ, ಡೆತ್​ನೋಟ್ ಬರೆದಿಟ್ಟಿದ್ದಾನೆ.

ಇದನ್ನೂ ಓದಿ: ಹೆಂಡತಿ ಮಕ್ಕಳಿದ್ದರೂ ಪಕ್ಕದ ಮನೆಯಾಕೆ ಜೊತೆ ಮದುವೆಗೆ ಪ್ಲಾನ್, ಪ್ರಶ್ನಿಸಿದ ಯುವತಿಯ ತಾಯಿಗೆ ಚಾಕು ಇರಿತ

ಮನೆಯವರ ವಿರೋಧ ಕಟ್ಟಿಕೊಂಡು ಆಕೆ ಜೊತೆಗಿದ್ದೆ, ಹಣವನ್ನೂ ನೀಡಿದ್ದೆ. ನನ್ನ ಬಳಿ ಹಣ ಖಾಲಿಯಾದ ಬಳಿಕ ನನ್ನನ್ನು ದೂರ ಮಾಡಿದಳೆ. ನನ್ನ ಮೂವರು ಮಕ್ಕಳು ಅನಾಥವಾದರೂ ಪರವಾಗಿಲ್ಲ, ಆಕೆಗೆ ಶಿಕ್ಷೆಯಾಗಬೇಕು. ನಾನು ಆಕೆಗೆ ನೀಡಿರುವ ಹಣ ನನ್ನ ಮಕ್ಕಳಿಗೆ ಕೊಡಿಸಿ ಎಂದು ಮನವಿ ಮಾಡಿರುವ ಶಿವಣ್ಣ, ಆಕೆ ಹಲವರ ಜೊತೆ ಅಕ್ರಮ ಸಂಬಂಧ ಹೊಂದಿದ್ದಾಳೆಂದು ಡೆತ್​ನೋಟ್​ನಲ್ಲಿ ಉಲ್ಲೇಖಿಸಿದ್ದಾನೆ.

ಹಾಗೇ ಪಿ.ಹೆಚ್.ಬೂದಿಹಾಳ ಗ್ರಾಮದ ಕೆಲವರ ಹೆಸರು ಹೇಳಿರುವ ಶಿವಣ್ಣ ಚೌಧರಿ, ಸಿದ್ದು ವಾಲೀಕಾರ ಮಾಟಮಂತ್ರ ಮಾಡಿ ಮಹಿಳೆಯರ ಮೇಲೆ ಅತ್ಯಾಚಾರ ಮಾಡಿದ್ದಾರೆ. ಸಿದ್ದು ವಾಲೀಕಾರಗೆ ಮೊಹಮ್ಮದ್ ಸಾಬ್ ಫತೇಪುರ, ಬಾಬು ನಾಟಿಕಾರ, ಮಲಕಪ್ಪ ಸಹಾಯ ಮಾಡುತ್ತಿದ್ದಾರೆಂದು ವಿಡಿಯೋನಲ್ಲಿ ಹೇಳಿ ಬಳಿಕ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇನ್ನು ಸ್ಥಳಕ್ಕೆ ಸಿಂದಗಿ ಠಾಣೆ ಪೊಲೀಸರ ಭೇಟಿ, ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಅಶೋಕ ಯಡಳ್ಳಿ, ವಿಜಯಪುರ

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Loading...
Unable to load recommendations.
Follow Us