AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಮಾತೀರದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು: ಆಸ್ತಿ ವಿವಾದಕ್ಕೆ 6 ಮಂದಿಯ ಬರ್ಬರ ಕೊಲೆ

ವಿಜಯಪುರದ ಭೀಮಾತೀರದಲ್ಲಿ ಆಸ್ತಿ ವಿವಾದದ ಹಿನ್ನೆಲೆ ನ್ಯಾಯ ಪಂಚಾಯತಿಗೆಂದು ತೆರಳಿದ್ದವರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. 6 ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡಿಟ್ಟು ಹತ್ಯೆ ಮಾಡಲಾಗಿದ್ದು, ಚಡಚಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದಿದೆ. ಭೀಕರ ಕೊಲೆ ಕಂಡು ಸ್ಥಳೀಯರು ಬೆಚ್ಚಿ ಬಿದ್ದಿದ್ದು, ಅಮಾನುಷ ಕೃತ್ಯ ಭಾರಿ ಚರ್ಚೆಗೂ ಗ್ರಾಸವಾಗಿದೆ.

ಭೀಮಾತೀರದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು: ಆಸ್ತಿ ವಿವಾದಕ್ಕೆ 6 ಮಂದಿಯ ಬರ್ಬರ ಕೊಲೆ
ಸಾಂದರ್ಭಿಕ ಚಿತ್ರImage Credit source: Getty Images
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on:May 29, 2026 | 7:49 PM

Share

ವಿಜಯಪುರ, ಮೇ 29: ಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದು ಮೊಳಗಿದ್ದು, ಆಸ್ತಿ ವಿವಾದ ಹಿನ್ನೆಲೆ 6 ಜನರ ಭೀಕರ ಹತ್ಯೆ ಮಾಡಲಾಗಿದೆ. ಕುಟುಂಬಗಳ ನಡುವಿನ ಕಲಹ ವಿಕೋಪಕ್ಕೆ ಹೋದ ಪರಿಣಾಮ ವಿಜಯಪುರ ಜಿಲ್ಲೆ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ಅಮಾನುಷ ಕೃತ್ಯ ನಡೆದಿದೆ. ಚಂದು ನಿರಾಳೆ, ದುಂಡಪ್ಪ ನಿರಾಳೆ, ಶಿವಪುತ್ರ ನಿರಾಳೆ, ರಾಹುಲ್ ನಿರಾಳೆ, ಸಮರ್ಥ ನಿರಾಳೆ, ಶಬ್ಬೀರ್ ನದಾಫ್ ಸೇರಿದಂತೆ 6 ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬಳಿಕ ಗುಂಡಿಟ್ಟು ಹತ್ಯೆ ಮಾಡಲಾಗಿದೆ.

ಮುಖ್ಯಾಂಶಗಳು

  • ಭೀಮಾತೀರದಲ್ಲಿ ಮತ್ತೆ ಮೊಳಗಿದ ಬಂದೂಕಿನ ಸದ್ದು
  • ಕುಟುಂಬಗಳ ನಡುವಿನ ಆಸ್ತಿ ವಿವಾದಕ್ಕೆ 6 ಮಂದಿ ಬಲಿ
  • ಮಾರಕಾಸ್ತ್ರಗಳಿಂದ ಕೊಚ್ಚಿ ಬಳಿಕ ಗುಂಡಿಟ್ಟು ಹತ್ಯೆ

ಈ ಹಿಂದೆ ನಡೆದಿದ್ದ ರಾಜಿ ಪಂಚಾಯತಿ

ಜಮಿನು ವಿಚಾರವಾಗಿ ಅಪ್ಪುಗೌಡ ಪಾಟೀಲ್ ಹಾಗೂ ರೇವಣಸಿದ್ದಪ್ಪ‌ನಿರಾಳೆ ಕುಟುಂಬದ ಮಧ್ಯೆ ಜಗಳವಿತ್ತು. ಕಳೆದ ಕೆಲ ದಿನಗಳ ಹಿಂದೆ ಎರಡೂ ಕುಟುಂಬಗಳ ಮಧ್ಯೆ ಈ ಸಂಬಂಧ ನ್ಯಾಯ ಪಂಚಾಯತಿ ಕೂಡ ಆಗಿತ್ತು. 15-20 ಜನರನ್ನು ಒಳಗೊಂಡ ದುರ್ಷರ್ಮಿಗಳ ಗುಂಪು ಹೊಲದಲ್ಲಿ ಕೆಲಸ ಮಾಡುತ್ತಿದ್ದ ನಿರಾಳೆ ಕುಟುಂಬದವರ ಮೇಲೆ ಏಕಾಏಕಿ ದಾಳಿ ನಡೆಸಿದೆ ಎನ್ನಲಾಗಿದ್ದು, ಅಟ್ಟಾಡಿಸಿ 6 ಮಂದಿಯನ್ನು ಕೊಲೆ ಮಾಡಲಾಗಿದೆ.

ಇದನ್ನೂ ಓದಿ: ‘ಮಗ, ಸೊಸೆ-ಮೊಮ್ಮಕ್ಕಳು ಬೆಳಗಾಗೋದ್ರೊಳಗೆ ಸತ್ತೋದ್ರು’; ವಿಜಯಪುರ ದುರಂತ, ತಾಯಿಯ ಕಣ್ಣೀರ ಮಾತು

ನಿರಾಳೆ ಕುಟುಂಬದವರು ಗೋವಿಂದಪುರ ಗ್ರಾಮದ ವ್ಯಕ್ತಿಯೊಬ್ಬರಿಗೆ ಸೇರಿದ 24 ಎಕರೆ ವಿವಾದಿತ ಜಮೀನನ್ನು ಆರು ತಿಂಗಳ ಹಿಂದೆ ಖರೀದಿ ಮಾಡಿದ್ದರು.ಈ ಸಂದರ್ಭದಲ್ಲಿ ವಿವಾದಿತ ಜಮೀನು ಖರೀದಿಸದಂತೆ ಊರಿನ ಅಪ್ಪುಗೌಡ ಪಾಟೀಲ್ ಹಾಗೂ ಕೊಲೆ ಮಾಡಿದ ಆರೋಪಿಗಳು ಎಚ್ಚರಿಕೆ ನೀಡಿದ್ದರು ಎಂದು ತಿಳಿದು ಬಂದಿದೆ. ಆದರೂ ಅದನ್ನು ನಿರ್ಲಕ್ಷಿಸಿ ನಿರಾಳೆ ಕುಟುಂಬದವರು ಜಮೀನು ಖರೀದಿ ಮಾಡಿದ್ದರು. ಅಲ್ಲದೇ, ಇದೀಗ ಟ್ರ್ಯಾಕ್ಟರ್, ಜೆಸಿಬಿ ಮೂಲಕ ಹೊಲವನ್ನು ಸ್ವಚ್ಛಗೊಳಿಸಿ ಕೃಷಿಗೆ ಸಜ್ಜುಗೊಳಿಸುತ್ತಿದ್ದ ವೇಳೆ ಕುಟುಂಬಸ್ಥರ ಮೇಲೆ ಆರೋಪಿಗಳು ದಾಳಿ ನಡೆಸಿರುವುದಾಗಿ ಪ್ರಾಥಮಿಕ ಮಾಹಿತಿ ಲಭಿಸಿದೆ. ಚಡಚಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ಲಕ್ಷ್ಮಣ ನಿಂಬರಗಿ ಸೇರಿದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ‌. ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 6:33 pm, Fri, 29 May 26

Follow Us
ಅಶೋಕ ಯಡಳ್ಳಿ, ವಿಜಯಪುರ
ಅಶೋಕ ಯಡಳ್ಳಿ, ವಿಜಯಪುರ

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ