ವಿಜಯಪುರ: 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ದುರ್ಘಟನೆ ನಗರದಲ್ಲಿ ನಡೆದಿದೆ. ಮನೆಯ ಬಳಿ ಆಟವಾಡುತ್ತಿದ್ದ ವೇಳೆ ಬಾಲಕಿ ಮೇಲೆ ಅತ್ಯಾಚಾರ ಕೃತ್ಯ ನಡೆಸಲಾಗಿದೆ. ಘಟನೆ ಬಳಿಕ 21 ವರ್ಷದ ಆರೋಪಿ ಪರಾರಿಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ವಿಜಯಪುರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಗೋಲಗುಮ್ಮಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬಳ್ಳಾರಿ: ಅಕ್ರಮವಾಗಿ ಸಾಗಿಸುತ್ತಿದ್ದ ಶ್ರೀಗಂಧದ ತುಂಡು ಜಪ್ತಿ ಅಕ್ರಮವಾಗಿ ಸಾಗಿಸುತ್ತಿದ್ದ ಶ್ರೀಗಂಧ ಮರದ ತುಂಡನ್ನು ಜಪ್ತಿ ಮಾಡಲಾಗಿದೆ. ಸುಶೀಲಾ ನಗರ ಅರಣ್ಯ ಪ್ರದೇಶದಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ಬಳ್ಳಾರಿ ಜಿಲ್ಲೆಯ ಸಂಡೂರು ಸಮೀಪದ ಅರಣ್ಯ ಪ್ರದೇಶದಲ್ಲಿ ಘಟನೆ ನಡೆದಿದೆ. 270 ಕೆಜಿ ತೂಕದ ಶ್ರೀಗಂಧ ಮರದ ತುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೋಲಾರ: ಪೊಲೀಸ್ ಕಾನ್ಸ್ಟೇಬಲ್ ಮೇಲೆ ಹಲ್ಲೆ ಕರ್ತವ್ಯನಿರತ ಕಾನ್ಸ್ಟೇಬಲ್ ಮೇಲೆ ಕುಡುಕರಿಂದ ಹಲ್ಲೆ ನಡೆದ ಘಟನೆ ಕೋಲಾರದ ಅಂತರಗಂಗೆ ಬೆಟ್ಟದಲ್ಲಿ ನಡೆದಿದೆ. ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕುಡುಕರು ಹಲ್ಲೆ ನಡೆಸಿದ್ದಾರೆ. ಪೊಲೀಸ್ ಕಾನ್ಸ್ಟೇಬಲ್ ಶಂಕರ್ ಎಂಬವರ ಮೇಲೆ ಹಲ್ಲೆ ಮಾಡಲಾಗಿದೆ. ಶಂಕರ್, ಕೋಲಾರ ಗ್ರಾಮಾಂತರ ಠಾಣೆ ಕಾನ್ಸ್ಟೇಬಲ್ ಆಗಿದ್ದಾರೆ. ವಿಭೂತಿಪುರದ ಮಂಜುನಾಥ್, ಶ್ರೀನಿವಾಸ್ ಸೇರಿ ನಾಲ್ವರ ವಿರುದ್ಧ ಕಾನ್ಸ್ಟೇಬಲ್ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಮಂಜುನಾಥ್, ಶ್ರೀನಿವಾಸ್ ಪೊಲೀಸರ ವಶಕ್ಕೆ ಸಿಕ್ಕಿಬಿದ್ದಿದ್ದಾರೆ. ಕೋಲಾರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಒಂಬತ್ತು ವರ್ಷದ ಬಾಲಕಿ ಮೇಲೆ 60 ವರ್ಷದ ವೃದ್ಧನಿಂದ ಅತ್ಯಾಚಾರ, ಆರೋಪಿ ವೃದ್ಧ ಅರೆಸ್ಟ್
ಇದನ್ನೂ ಓದಿ: ಅಪ್ಪ ಅಶ್ಲೀಲ ಸಿನಿಮಾ ತೋರಿಸುತ್ತಿದ್ದರು: ಅಪ್ಪ ಸೇರಿದಂತೆ 28 ಮಂದಿ ವಿರುದ್ಧ ಅತ್ಯಾಚಾರ ಆರೋಪ ಹೊರಿಸಿದ ಹದಿಹರೆಯದ ಸಂತ್ರಸ್ತೆ