ವಿಜಯಪುರ: ಸಾಲ ಬಾಧೆ ತಾಳಲಾರದೆ ರೈತ ಮಹಿಳೆ ಆತ್ಮಹತ್ಯೆ

ರೈತರ ಗೋಳು ಕೇಳುವವರಾರು ಎಂಬಂತಾಗಿದೆ. ಹೌದು, ಭೀಕರ ಬರಗಾಲಕ್ಕೆ ರೈತರು ನಲುಗಿದ್ದಾರೆ. ಅದರಂತೆ ಇಂದು (ಮೇ.12) ಬಬಲೇಶ್ವರ (Babaleshwar) ತಾಲೂಕಿನ ಅರ್ಜುಣಗಿ ಗ್ರಾಮದಲ್ಲಿ ಸಾಲ ಬಾಧೆ ತಾಳಲಾರದೇ ರೈತ ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ವಿಜಯಪುರ: ಸಾಲ ಬಾಧೆ ತಾಳಲಾರದೆ ರೈತ ಮಹಿಳೆ ಆತ್ಮಹತ್ಯೆ
ಮೃತ ಮಹಿಳೆ
Follow us
ಅಶೋಕ ಯಡಳ್ಳಿ, ವಿಜಯಪುರ
| Updated By: ಕಿರಣ್ ಹನುಮಂತ್​ ಮಾದಾರ್

Updated on: May 12, 2024 | 7:24 PM

ವಿಜಯಪುರ, ಮೇ.12: ಸಾಲ ಬಾಧೆ ತಾಳಲಾರದೇ ರೈತ ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ(Babaleshwar) ತಾಲೂಕಿನ ಅರ್ಜುಣಗಿ ಗ್ರಾಮದಲ್ಲಿ ನಡೆದಿದೆ. ರುಕ್ಮವ್ವ ದುಂಡಪ್ಪ ಬಾಡಿಗಿ ಆತ್ಮಹತ್ಯೆಗೆ ಶರಣಾದ ರೈತ ಮಹಿಳೆ. ಇನ್ನು ಈ ಮಹಿಳೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಗದ್ಯಾಳ ಗ್ರಾಮದಲ್ಲಿ ಜಮೀನು ಹೊಂದಿದ್ದರು.

ಗದ್ಯಾಳ ಪ್ರಾಥಮಿಕ ಕೃಷಿ ಸಹಕಾರಿ ಬ್ಯಾಂಕಿನಲ್ಲಿ 1 ಲಕ್ಷ,  ವಿಜಯಪುರ ಎಚ್​ಡಿಎಫ್​ಸಿ ಬ್ಯಾಂಕಿನಲ್ಲಿ 2.5 ಲಕ್ಷ, ಬಬಲೇಶ್ವರದ ಚೈತನ್ಯ ಪೈನಾನ್ಸ್​ನಲ್ಲಿ 50‌ ಸಾವಿರ ಹಾಗೂ ಖಾಸಗಿಯಾಗಿ 6 ಲಕ್ಷ ಸಾಲ ಸೇರಿ 10 ಲಕ್ಷ ಸಾಲ ಮಾಡಿಕೊಂಡಿದ್ದರು. ಸ್ಥಳಕ್ಕೆ ಬಬಲೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ:ಫೇಲ್ ಆದ ವಿಚಾರ ಅಪ್ಪನಿಗೆ ತಿಳಿಯುತ್ತೆ ಎಂದು ಹೆದರಿ ಆತ್ಮಹತ್ಯೆ ಮಾಡಿಕೊಂಡ ಇಂಜಿನಿಯರಿಂಗ್ ವಿದ್ಯಾರ್ಥಿ

ಸಿಡಿಲು ಬಡಿದು ಬೈಕ್ ಸವಾರ ಯುವಕ ಸಾವು

ಬಾಗಲಕೋಟೆ: ತಾಲೂಕಿನ ಹಳ್ಳೂರು ಗ್ರಾಮದ ಬಳಿ ಸಿಡಿಲು ಬಡಿದು ಬೈಕ್​ ಸವಾರ ಸಾವನ್ನಪ್ಪಿದ ಘಟನೆ ನಡೆದಿದೆ. ಬೇವೂರು ಗ್ರಾಮದ ನಿವಾಸಿ ಪ್ರಕಾಶ್ ವಗ್ಗರ್(21) ಮೃತ ರ್ದುದೈವಿ. ಮತ್ತೊಬ್ಬನಿಗೆ ಗಾಯವಾಗಿದ್ದು, ಬಾಗಲಕೋಟೆ ‌ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೂಲತಃ ವಿಜಯಪುರ ಜಿಲ್ಲೆಯ ಗೋನಾಳ ಗ್ರಾಮದವನಾದ ಪ್ರಕಾಶ್​, ಬೇವೂರು ಗ್ರಾಮದಲ್ಲಿ ವಾಸವಿದ್ದ. ಇನ್ನು ಗಾಯಾಳು ಶ್ರೀಶೈಲ ಕಲಗುಡಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ