ಬಾಕಿ ಹಣಕ್ಕಾಗಿ ವ್ಯಕ್ತಿಯನ್ನು ಅರೆಬೆತ್ತಲೆಯಾಗಿ ಕೂಡಿಸಿದ ಪೆಟ್ರೋಲ್ ಬಂಕ್ ಮಾಲೀಕರು

ಡೀಸೆಲ್ ಬಾಕಿ ಹಣಕ್ಕಾಗಿ ಬಂಕ್ ಮಾಲೀಕರು, ವ್ಯಕ್ತಿಯೋರ್ವನನ್ನು ಅರೆಬೆತ್ತಲೆಗೊಳಿಸಿ ಕೂಡಿಸಿದ ಅಮಾನವೀಯ ಘಟನೆ ವಿಜಯಪುರದಲ್ಲಿ ನಡೆದಿದೆ.

ಬಾಕಿ ಹಣಕ್ಕಾಗಿ ವ್ಯಕ್ತಿಯನ್ನು ಅರೆಬೆತ್ತಲೆಯಾಗಿ ಕೂಡಿಸಿದ ಪೆಟ್ರೋಲ್ ಬಂಕ್ ಮಾಲೀಕರು
Follow us
ರಮೇಶ್ ಬಿ. ಜವಳಗೇರಾ
|

Updated on:Jun 26, 2023 | 1:57 PM

ವಿಜಯಪುರ: ಡೀಸೆಲ್(diesel) ಹಾಕಿಸಿದ್ದ ಬಾಕಿ ಹಣಕ್ಕಾಗಿ ವ್ಯಕ್ತಿಯನ್ನು ಅರೆಬೆತ್ತಲೆಗೊಳಿಸಿ ಪೆಟ್ರೋಲ್ ಬಂಕ್​ನಲ್ಲಿ(petrol bunk) ಕೂಡಿಸಿದ ಅಮಾನವೀಯ ಘಟನೆ ವಿಜಯಪುರ (Vijayapura) ಜಿಲ್ಲೆಯಲ್ಲಿ ನಡೆದಿದೆ. ವಾಹನಗಳಿಗೆ ಡೀಸೆಲ್ ಹಾಕಿಸಿದ್ದ ಬಾಕಿ ಹಣ ವಸೂಲಿಗೆ ಮೌನೇಶ್ ಪತ್ತಾರ್ ಎನ್ನುವಾತನನ್ನು ಅರೆಬೆತ್ತಲೆಗೊಳಿಸಿ ಮುದ್ದೇಬಿಹಾಳ ಪಟ್ಟಣದಲ್ಲಿರುವ ಬೋಸಲೆ ಬಂಕ್​ನಲ್ಲಿ ಕೂಡಿಹಾಕಿದ್ದಾರೆ. 10 ರಿಂದ 15 ಲಕ್ಷ ರೂ. ಡೀಸೆಲ್ ಬಾಕಿ ಹಣ ನೀಡುವಂತೆ ಕಳೆದ 12 ದಿನಗಳಿಂದ ಮೌನೇಶ್ ಪತ್ತಾರನನ್ನು ಅರೆಬೆತ್ತಲೆಗೊಳಿಸಿ ಬಂಕ್​ನಲ್ಲೇ ಕೂಡಿ ಹಾಕಿದ್ದಾರೆ ಎಂದು ಆತನ ಕುಟುಂಬಸ್ಥರು ಆರೋಪಿಸಿದ್ದಾರೆ.

ಇದನ್ನೂ ಓದಿ: ಫ್ರೀ ಪ್ರಯಾಣಕ್ಕಾಗಿ ಬಸ್ ಮೇಲೆ ‘ಶಕ್ತಿ’ ತೋರಿಸಿ ಬರೋಬ್ಬರಿ 5000 ರೂ. ದಂಡ ತೆತ್ತ ಮಹಿಳೆ

ತಮಿಳುನಾಡು ಮೂಲದ ಶಿವಶಕ್ತಿ ಬೋರ್ ವೆಲ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ಮೌನೇಶ, ವಾಹನಗಳಿಗೆ ಬೋಸಲೆ ಅವರ ಬಂಕ್ ನಲ್ಲಿ ಡೀಸೆಲ್ ಹಾಕಿಸುತ್ತಿದ್ದ. ಆದ್ರೆ, ಶವಶಕ್ತಿ ಬೋರ್ ವೆಲ್ಸ್​ನವರು ಡೀಸೆಲ್ ಬಾಕಿ ಹಣ ನೀಡದೇ ಹೋಗಿದ್ದಾರೆ. ಹೀಗಾಗಿ ಬಾಕಿ ಹಣಕ್ಕಾಗಿ ಪೆಟ್ರೋಲ್ ಬಂಕ್ ಮಾಲೀಕ, ಮೌನೇಶ್​ನನ್ನು ಹಿಡಿದುಕೊಂಡಿದ್ದಾರೆ. ಅಲ್ಲದೇ ಹಣ ಕೊಡಬೇಕೆಂದು ಮೌನೇಶ್​ನನ್ನು ಬಂಕ್​ನಲ್ಲೇ ಕೂಡಿಹಾಕಿದ್ದಾರೆ. ಇನ್ನು ಮೌನೇಶ ಬಿಡುಗಡೆಗಾಗಿ ಆತನ ಪತ್ನಿ ಹಾಗೂ ಮಕ್ಕಳು ಕಳೆದ ಮೂರು ದಿನಗಳಿಂದ ಬೋಸಲೆ ಪೆಟ್ರೋಲ್ ಬಂಕ್ ನಲ್ಲೇ ಕುಳಿತುಕೊಂಡಿದ್ದಾರೆ.

10 ರಿಂದ 15 ಲಕ್ಷ ರೂ. ಡೀಸೆಲ್ ಬಾಕಿ ಹಣ ನೀಡುವಂತೆ ಕಳೆದ 12 ದಿನಗಳಿಂದ ಮೌನೇಶ್ ಪತ್ತಾರನನ್ನು ಅರೆಬೆತ್ತಲೆಗೊಳಿಸಿ ಬಂಕ್​ನಲ್ಲೇ ಕೂಡಿ ಹಾಕಿದ್ದಾರೆ ಎಂದು ಆತನ ಕುಟುಂಬಸ್ಥರು ಆರೋಪಿಸಿದ್ದಾರೆ. ಪೊಲೀಸ್ ಠಾಣೆಗೂ ತೆರಳಲು ಬಿಡದೇ ಬಂಕ್ ಮಾಲೀಕರು ಮೌನೇಶ ಕುಟುಂಬಸ್ಥರನ್ನು ತಡೆಹಿಡಿದಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 12:39 pm, Mon, 26 June 23

ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ