AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರದಲ್ಲಿ ಹಾಡಹಗಲೇ ಗುಂಡಿನ ದಾಳಿ: ಕೊಲೆ ಹಿಂದೆ ಯುವತಿಯ ಕರಿನೆರಳು?

ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಅರಕೇರಿ ಗ್ರಾಮದಲ್ಲಿ ಹಗಲಿನಲ್ಲೇ ಕಾರಿನ ಮೇಲೆ ಗುಂಡಿನ ದಾಳಿ ನಡೆದಿದ್ದು, ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಹತ್ಯೆಯ ಹಿಂದೆ ಯುವತಿ ನೆರಳಿರುವುದಾಗಿ ಕೊಲೆಯಾದ ತಂದೆ ಆರೋಪ ಮಾಡಿದ್ದಾರೆ. ಸದ್ಯ ಸ್ಥಳಕ್ಕೆ ಎಸ್ಪಿ ಭೇಟಿ ಮಾಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ವಿಜಯಪುರದಲ್ಲಿ ಹಾಡಹಗಲೇ ಗುಂಡಿನ ದಾಳಿ: ಕೊಲೆ ಹಿಂದೆ ಯುವತಿಯ ಕರಿನೆರಳು?
ವಿಜಯಪುರದಲ್ಲಿ ಹಾಡಹಗಲೇ ಗುಂಡಿನ ದಾಳಿ: ಕೊಲೆ ಹಿಂದೆ ಯುವತಿಯ ಕರಿನೆರಳು?
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on:Jan 28, 2025 | 2:59 PM

Share

ವಿಜಯಪುರ, ಜನವರಿ 28: ಜಿಲ್ಲೆಯಲ್ಲಿ ಹಾಡಹಗಲೇ ಗುಂಡಿನ ಸಪ್ಪಳ ಕೇಳಿಬಂದಿದೆ. ಕಾರಿನ ಮೇಲೆ ಗುಂಡಿನ ದಾಳಿ ನಡೆಸಿ ದುಷ್ಕರ್ಮಿಗಳು ಓರ್ವ ವ್ಯಕ್ತಿಯ ಹತ್ಯೆ (Shot Dead) ಮಾಡಿರುವಂತಹ ಘಟನೆ ಜಿಲ್ಲೆಯ ತಿಕೋಟಾ ತಾಲೂಕಿನ ಅರಕೇರಿ ಮನಾವರ ದೊಡ್ಡಿ ಬಳಿ ನಡೆದಿದೆ. ಸತೀಶ್ ರಾಠೋಡ್ ಮೃತ ವ್ಯಕ್ತಿ. ರಮೇಶ್​​ ಚವ್ಹಾಣ್​ ಹಾಗೂ ಇತರರಿಂದ ಕೃತ್ಯವೆಸಗಿರುವ ಆರೋಪ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಎಸ್​ಪಿ ಲಕ್ಷ್ಮಣ ನಿಂಬರಗಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ವಿಜಯಪುರ ಗ್ರಾಮೀಣ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಹತ್ಯೆ ಹಿಂದಿದೆಯಾ ಯುವತಿಯ ನೆರಳು?

ಇನ್ನು ಹತ್ಯೆ ಹಿಂದೆ ಯುವತಿಯ ನೆರಳಿದೆ ಎಂದು ಕೊಲೆಗೀಡಾದ ಸತೀಶ್ ತಂದೆ ಪ್ರೇಮಸಿಂಗ್ ಆರೋಪಿಸಿದ್ದಾರೆ. ರಮೇಶ್​​ ಚವ್ಹಾಣ್ ಪುತ್ರಿಯನ್ನ ಸತೀಶ್ ರಾಠೋಡ್​​ ಮದುವೆಯಾಗಲು ಗುರು ಹಿರಿಯರ ಸಮ್ಮುಖದಲ್ಲಿ ಕೇಳಲಾಗಿತ್ತು. ಕಳೆದ ಒಂದೂವರೆ ವರ್ಷದ ಹಿಂದೆ ರಮೇಶ್ ಮಗಳ ಜೊತೆ ಸತೀಶ್ ವಿವಾಹ ಪ್ರಸ್ತಾಪ ನಡೆದಿತ್ತು. ಆದರೆ ಸತೀಶ್​ಗೆ ನನ್ನ ಮಗಳನ್ನು ಕೊಡಲ್ಲ ಎಂದು ಖಡಾಖಂಡಿತವಾಗಿ ರಮೇಶ್​ ಹೇಳಿದ್ದರು. ಇದಾದ ಬಳಿಕ ಒಂದು ವರ್ಷದ ಹಿಂದೆ ರಮೇಶ್ ಮಗಳು ಬಾವಿಗೆ ಹಾರಿ ಮೃತಪಟ್ಟಿದ್ದಳಂತೆ.

ಇದನ್ನೂ ಓದಿ: ದಾಸರಹಳ್ಳಿಲ್ಲೊಬ್ಬ ಸೈಕೋಪಾತ್‌ ತಂದೆ: ಬಿಸಿ ನೀರು ಕಾಯಿಸುವ ಹೀಟರ್‌ನಿಂದ ಪುಟ್ಟ ಮಕ್ಕಳಿಗೆ ಬರೆ

ಇದೇ ಕಾರಣವೇ ಸತೀಶ್ ಮೇಲೆ ರಮೇಶ್ ಹಾಗೂ ಸಹಚರರಿಗೆ ಕೋಪವಿತ್ತಂತೆ. ಇದೇ ಕೋಪದಲ್ಲಿ ಸತೀಶ್ ನನ್ನ ಗುಂಡು ಹಾರಿಸಿ ಕೊಲೆ ಮಾಡಿದ್ದಾರೆಂದು ಸತೀಶ್ ತಂದೆ ಪ್ರೇಮ್​ಸಿಂಗ್ ಆರೋಪಿಸಿದ್ದಾರೆ. ಆದರೆ ಪೊಲೀಸರ ತನಿಖೆಯ ಬಳಿಕ ಸತೀಶ್ ಹತ್ಯೆಯ ಸತ್ಯಾಂಶ ಬಯಲಿಗೆ ಬರುವ ಸಾಧ್ಯತೆ ಇದೆ.

ಸ್ಥಳಕ್ಕೆ ಎಸ್ಪಿ ಲಕ್ಷ್ಮಣ ನಿಂಬರಗಿ ಹಾಗೂ ಇತರೆ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಎಷ್ಟು ಗುಂಡುಗಳನ್ನು ಹಾರಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಪರಿಶೀಲನೆ ಮಾಡಿದ್ದಾರೆ. ಸ್ಥಳದಲ್ಲಿ ಸತೀಶ್ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಹೆಜ್ಜೇನು ದಾಳಿಯಿಂದ ಮರದ ಮೇಲಿಂದ ಆಯತಪ್ಪಿ ಬಿದ್ದು ವ್ಯಕ್ತಿ ಸಾವು

ಮತ್ತೊಂದು ಪ್ರಕರಣದಲ್ಲಿ ಕೋತಿಗಳನ್ನು ಓಡಿಸಲು ಮರವೇರಿದ್ದ ವ್ಯಕ್ತಿ ಹೆಜ್ಜೇನು ದಾಳಿಯಿಂದ ಮರದ ಮೇಲಿಂದ ಆಯತಪ್ಪಿ ಬಿದ್ದು ಸಾವನ್ನಪ್ಪಿರುವಂತಹ ಘಟನೆ ಬೀದರ್​ ಜಿಲ್ಲೆಯ ಹಲಸೂರು ತಾ. ಗಡಿಗೌಡಗಾಂವನಲ್ಲಿ ನಿನ್ನೆ ಸಂಜೆ ನಡೆದಿದೆ. ಯುವರಾಜ್​ ಬಿರಾದಾರ್​​(45) ಮೃತ ವ್ಯಕ್ತಿ. ಗಾಯಗೊಂಡ ಯುವರಾಜ್​ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಹುಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:59 pm, Tue, 28 January 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್