ವಿಜಯಪುರದಲ್ಲೊಂದು ಮನಕಲಕುವ ಘಟನೆ : ಪುಟ್ಟ ಪುಟ್ಟ 3 ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

ವಿಜಯಪುರ ಜಿಲ್ಲೆಯಲ್ಲೊಂದು ಮನಕಲಕುವ ಘಟನೆ ನಡೆದಿದ್ದು, ತಾಯಿಯೊಬ್ಬಳು ತನ್ನ ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಹಿಳೆ ತನ್ನ ಆರು, ಮೂರು ಹೆಣ್ಣುಮಕ್ಕಳು ಮತ್ತು ವರ್ಷದ ಗಂಡು ಮಗುವಿನೊಂದಿಗೆ ಸಾವಿಗೆ ಶರಣಾಗಿರುವುದು ಇಡೀ ಗ್ರಾಮವನ್ನೇ ಶೋಕಸಾಗರದಲ್ಲಿ ಮುಳುಗಿಸಿದೆ. ಮಹಿಳೆಯ ಈ ದುಡುಕಿನ ನಿರ್ಧಾರಕ್ಕೆ ಕಾರಣವೇನು?

ವಿಜಯಪುರದಲ್ಲೊಂದು ಮನಕಲಕುವ ಘಟನೆ : ಪುಟ್ಟ ಪುಟ್ಟ 3 ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ
ಮೃತ ಮಕ್ಕಳು
Edited By:

Updated on: Mar 27, 2026 | 4:18 PM

ವಿಜಯಪುರ, (ಮಾರ್ಚ್ 27): ಪುಟ್ಟ ಪುಟ್ಟ ಮೂರು ಮಕ್ಕಳೊಂದಿಗೆ ತಾಯಿ (Mother) ಆತ್ಮಹತ್ಯೆ ಮಾಡಿಕೊಂಡಿರುವ ಘನಘೋರ ಘಟನೆ ವಿಜಯಪುರ (Vijayapura) ಜಿಲ್ಲೆಯ ಇಂಡಿ ತಾಲೂಕಿನ ಮಿರಗಿ ಗ್ರಾಮದಲ್ಲಿ ನಡೆದಿದೆ. ಗುರುವಾರ ಸಂಜೆ ರಾಜಶ್ರೀ ಶಂಕ್ರಪ್ಪ ಹಳ್ಳೂರ (28) ಎನ್ನುವ ಮಹಿಳೆ ತನ್ನ ಮೂವರು ಅಪ್ರಾಪ್ತ ಮಕ್ಕಳಾದ ಅನುಶ್ರೀ (6), ತನು (3) ಮತ್ತು ಸಂತೋಷನನ್ನು (1) ಬಾವಿಗೆ ತಳ್ಳಿ ಬಳಿಕ ತಾನೂ ಸಹ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಖಾಸಗಿ ಬಸ್ ಚಾಲಕನಾಗಿರುವ ಪತಿ ಶಂಕರಪ್ಪ ಕೆಲಸಕ್ಕೆ ಹೋಗಿದ್ದಾಗ ಪತ್ನಿ ರಾಜಶ್ರೀ ತನ್ನ ಮೂವರು ಮಕ್ಕಳೊಂದಿಗೆ ಸಾವಿನ ಮನೆ ಸೇರಿದ್ದಾಳೆ. ಆದ್ರೆ, ಘಟನೆ ಕಾರಣ ಮಾತ್ರ ನಿಗೂಢವಾಗಿದೆ.

ಘಟನೆಯ ವೇಳೆ ರಾಜಶ್ರೀಯ ಪತಿ ಶಂಕ್ರಪ್ಪ ಊರಲ್ಲಿ ಇರಲಿಲ್ಲ. ಖಾಸಗಿ ಬಸ್ ಚಾಲಕನಾಗಿರುವ ಶಂಕ್ರೆಪ್ಪ ಘಟನೆ ಕುರಿತು ಮಾಹಿತಿ ತಿಳಿದ ಬಳಿಕ ತಮ್ಮೂರಿಗೆ ಆಗಮಿಸಿದ್ದ. ಇನ್ನು ರಾಜಶ್ರೀಯ ತವರಿನವರು ಸಹ ಸ್ಥಳಕ್ಕೆ ಆಗಮಿಸಿದ್ದರು. ನಂತರ ಪೊಲೀಸರು ಬಾವಿಯಿಂದ ನಾಲ್ವರ ಮೃತದೇಹಗಳನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆಗಾಗಿ ಇಂಡಿ ತಾಲೂಕು ಆಸ್ಪತ್ರೆಗೆ ರವಾನೆ ಮಾಡಿದ್ದು, ಇಂದು (ಮಾರ್ಚ್ 27) ಬೆಳಿಗ್ಗೆ ಮರಣೋತ್ತರ ಪರೀಕ್ಷೆ ಮಾಡಿ ಶವಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.

ಇದನ್ನೂ ನೋಡಿ: ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!

ತಮ್ಮ ಮಕ್ಕಳ ಸಾವಿಗೆ ಪತ್ನಿ ರಾಜಶ್ರೀಯೇ ಕಾರಣವೆಂದು ಪತಿ ಶಂಕ್ರಪ್ಪ ಇಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇತ್ತ ರಾಜಶ್ರೀಯ ತವರು ಮನೆಯವರು ಸಹ ಇದು ಆತ್ಮಹತ್ಯೆ ಪ್ರಕರಣವೆಂದು ದೂರು ನೀಡಿದ್ದಾರೆ. ಮೇಲ್ನೋಟಕ್ಕೆ ಆಸ್ತಿ ವಿಚಾರವೇ ಈ ದುರಂತಕ್ಕೆ ಕಾರಣವಾಗಿರಬಹುದು ಎಂಬ ಚರ್ಚೆ ಗ್ರಾಮದಲ್ಲಿ ನಡೆದಿದೆಯಾರೂ ನಿಖರ ಕಾರಣ ತಿಳಿದುಬಂದಿಲ್ಲ. ಹೀಗಾಗಿ ಇಂಡಿ ಗ್ರಾಮೀಣ ಪೊಲೀಸರ ತನಿಖೆಯಿಂದ ಘಟನೆಗೆ ಅಸಲಿ ಕಾರಣ ತಿಳಿದು ಬರಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us